ಬ್ರೇಕಿಂಗ್ ನ್ಯೂಸ್
24-03-26 11:55 am HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 24: ಸಜಿಪನಡು ಗ್ರಾಮದ ತಲೆಮೊಗರು ಮಸೀದಿಯಲ್ಲಿ ಆಡಳಿತ ವಿಚಾರದಲ್ಲಿ ತಕರಾರು ಏರ್ಪಟ್ಟು ಎರಡು ತಂಡಗಳು ಬೀದಿಯಲ್ಲಿ ಹೊಡೆದಾಡಿಕೊಂಡಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧಿಸಿ ಮೂರು ಪ್ರತ್ಯೇಕ ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.
ಉಳ್ಳಾಲ ಸಜಿಪ ಪಡು ನಿವಾಸಿ ಅಬ್ದುಲ್ ನವಾಝ್ (42) ಎಂಬವರ ದೂರಿನಂತೆ, ಮಾ.22ರಂದು ಬೆಳಗ್ಗೆ ತಾನು ಮತ್ತು ಸಂಬಂಧಿ ದಾವೂದ್ ಜೊತೆಯಲ್ಲಿ ತಲೆಮೊಗರು ಮಸೀದಿಗೆ ಹೋಗಿ ವಾಪಾಸ್ಸು ಬರುತ್ತಿರುವಾಗ ಸದ್ರಿ ಮಸೀದಿಗೆ ಸಂಬಂಧಿಸಿದ ಕಟ್ಟಡದಲ್ಲಿರುವ ಶೌಕತ್ ಎಂಬಾತನ ಅಂಗಡಿಯ ಬಳಿ ಆರೋಪಿತರಾದ ಶೌಕತ್, ಇಸಾಕ್, ಸಫಿಕ್, ಯಾಕೂಬ್, ಮಹಮ್ಮದ್ ಮುಸ್ತಫಾ, ನಾಸಿರ್ ಹಾಗೂ ನಿಝಾಲ್ ರವರು ಗುಂಪು ಕಟ್ಟಿಕೊಂಡು ನಿಂತಿದ್ದು ಆರೋಪಿಗಳು ಮಸೀದಿ ವಿಚಾರದಲ್ಲಿ ತಕರಾರು ತೆಗೆದು, ಅವ್ಯಾಚವಾಗಿ ನಿಂದಿಸಿ, ಕತ್ತಿ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿ ತೆರಳಿರುತ್ತಾರೆ. ಹಲ್ಲೆಯಿಂದಾದ ಗಾಯಕ್ಕೆ ಅಬ್ದುಲ್ ನವಾಜ್ ಹಾಗೂ ದಾವೂದ್ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದಿರುವುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 46/2026, ಕಲಂ: 189(2), 191(2), 352, 351(2), 109(1), 118(1), 115(2) r/w 190 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಘಟನೆಗೆ ಸಂಬಂಧಿಸಿ ಉಳ್ಳಾಲ ಸಜಿಪ ಪಡು ನಿವಾಸಿ ಅಬ್ದುಲ್ ಗಫೂರ್ (48) ಎಂಬವರು ನೀಡಿದ ಪ್ರತಿದೂರಿನಂತೆ, ಆರೋಪಿಗಳಾದ ಯಾಕೂಬ್, ಶಫೀಕ್, ಇಸಾಕ್,ಸಫ್ವಾನ್, ಅಶ್ರಫ್ ಸಾಹೇಬ್ ಎಂಬವರುಗಳು ಸಜಿಪ ಪಡು ಗ್ರಾಮದ ತಲೆಮೊಗರು ಮಸೀದಿ ಬಳಿ ತಡೆದು ನಿಲ್ಲಿಸಿ ಅವ್ಯಾಚವಾಗಿ ಬೈದು, ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದಾದ ಗಾಯಕ್ಕೆ ಪಿರ್ಯಾದಿರವರು ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದಿರುವುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 47/2026, ಕಲಂ: 126(2), 189(2), 191(2), 118(1), 115(2), 352, 351(2) ಜೊತೆಗೆ 190 BNS ರಂತೆ ಪ್ರಕರಣ ದಾಖಲಾಗಿರುತ್ತದೆ.


ಇದೇ ವಿಚಾರದಲ್ಲಿ ಉಳ್ಳಾಲ ಸಜಿಪ ಪಡು ನಿವಾಸಿ ಶೌಕತ್ ಆಲಿ (40) ಎಂಬವರು ನೀಡಿದ ದೂರಿನಂತೆ, ತಲೆಮೊಗರು ಮಸೀದಿ ಬಳಿಯ ಅಂಗಡಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದಾಗ ಆರೋಪಿಗಳಾದ ದಾವೂದ್ , ಜುಬೈರ್, ಸೈದುದ್ದೀನ್, ನವಾಜ್, ಗಫೂರ್ , ಶರೀಫ್, ಆಶಿಕ್ ಎಂಬವರು ಪಿರ್ಯಾದಿದಾರರ ಅಂಗಡಿಗೆ ಬಂದು, ಮಸೀದಿ ವಿಚಾರದಲ್ಲಿ ತಕರಾರು ತೆಗೆದು ಪಿರ್ಯಾದಿದಾರರ ಸಂಬಂಧಿ ರಬಿಯತ್ ಅವರಿಗೆ ಹಲ್ಲೆ ನಡೆಸಿರುತ್ತಾರೆ. ಈ ವೇಳೆ ಗಲಾಟೆ ಬಿಡಿಸಲು ಬಂದ ಸಫಾನಾ, ನಿಜಾಲ್ , ಇಸಾಕ್, ಆಶ್ರಫ್ ಎಂಬವರಿಗೆ ಹಾಗೂ ಪಿರ್ಯಾದಿರರಿಗೂ ಅವಾಚ್ಯ ಬೈದು ತಲವಾರಿನಿಂದ ಹಲ್ಲೆಗೆ ಯತ್ನಿಸಿರುತ್ತಾರೆ.
ಈ ವೇಳೆ ಗಲಾಟೆ ಬಿಡಿಸಲು ಬಂದ ಪಿರ್ಯಾದಿದಾರರ ಸಂಬಂಧಿ ಆಯಿಷಾ ಎಂಬವರಿಗೆ ಆರೋಪಿಗಳು ಜೀವಬೆದರಿಕೆ ಒಡ್ಡಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 48/2026, ಕಲಂ: 189(2), 191(2), 191(3), 115(2), 118(1), 74, 352, 351(2), 329(3), 109 ಜೊತೆಗೆ 190 ಬಿಎನ್ಎಸ್ ಮತ್ತು ಕಲಂ: 21 (1)(ಎ) Arms Act ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ಇತ್ತಂಡಗಳ ಪೈಕಿ ಗಾಯಾಳುಗಳು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯಾರಿಗೂ ಪ್ರಾಣಾಪಾಯ ಆಗುವಂತಹ ಗಾಯಗಳಾಗಿರುವುದಿಲ್ಲ. ಸದ್ರಿ ಗಾಯಾಳುಗಳು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am