ಬ್ರೇಕಿಂಗ್ ನ್ಯೂಸ್
24-03-26 05:34 pm HK News Staffer ಕರಾವಳಿ
ಉಡುಪಿ, ಮಾರ್ಚ್ 24: ನಕಲಿ ಬಂಗಾರದ ಆಭರಣಗಳನ್ನು ಬಳಸಿಕೊಂಡು ವಂಚನೆ ನಡೆಸಿದ ಪ್ರಕರಣದಲ್ಲಿ ಪಡುಬಿದ್ರಿ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ನಕಲಿ ಆಭರಣಗಳನ್ನು ನಿಜವಾದ ಬಂಗಾರ ಹಾಗೂ ನಗದು ಹಣಕ್ಕೆ ಬದಲಾಯಿಸಿ ಮೋಸ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಜನವರಿ 13ರಂದು ಕಾಪು ತಾಲೂಕು ನಾಡ್ಸಾಲು ಗ್ರಾಮದ ಹಳೆಯ ಅಂಚೆ ಕಚೇರಿ ಸಮೀಪ ಈ ಘಟನೆ ನಡೆದಿದೆ. ಬಸ್ಸಮ್ಮ ಎಂಬ ಮಹಿಳೆ ಆ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓರ್ವ ಪುರುಷ ಹಾಗೂ ಮಹಿಳೆ ಅವರನ್ನು ಸಂಪರ್ಕಿಸಿದ್ದಾರೆ. ಅವರು ಬಂಗಾರದಂತೆ ಕಾಣುವ ಸರವನ್ನು ತೋರಿಸಿ, ಅದರಲ್ಲಿ ಲಕ್ಷ್ಮೀ ಲಾಕೆಟ್ ಇದ್ದು ಸುಮಾರು ಆರು ಪವನ್ ತೂಕವಿದೆ ಎಂದು ನಂಬಿಸಿದ್ದಾರೆ.
ಇವರ ಮಾತುಗಳನ್ನು ನಂಬಿದ ಬಸ್ಸಮ್ಮ, ಸುಮಾರು ಎರಡು ಸವರಣ ತೂಕದ ತನ್ನ ಬಂಗಾರದ ಆಭರಣಗಳು (ಸುಮಾರು ₹1.5 ಲಕ್ಷ ಮೌಲ್ಯದ) ಹಾಗೂ ₹6,000 ನಗದು ಹಣವನ್ನು ಅವರಿಗೆ ನೀಡಿದ್ದಾರೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ನಂತರ ಬಸ್ಸಮ್ಮ ಸಮೀಪದ ಆಭರಣ ಅಂಗಡಿಯಲ್ಲಿ ಸರವನ್ನು ಪರಿಶೀಲಿಸಿದಾಗ ಅದು ನಕಲಿ ಎಂಬುದು ಬಹಿರಂಗವಾಗಿದೆ. ತಕ್ಷಣವೇ ಅವರು ಘಟನೆ ನಡೆದ ಸ್ಥಳಕ್ಕೆ ಹಿಂತಿರುಗಿದರೂ ಆರೋಪಿಗಳು ಆಗಲೇ ಎಸ್ಕೇಪ್ ಆಗಿದ್ದರು.
ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.
ಉಡುಪಿ ಜಿಲ್ಲಾ ಎಸ್ಪಿ ಹರಿರಾಮ ಶಂಕರ್ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ಎಸ್ ನಾಯಕ್, ಕಾರ್ಕಳ ಉಪವಿಭಾಗದ ಡಿಎಸ್ಪಿ ಎಸ್ ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ ಶಕ್ತಿವೇಲು ಹಾಗೂ ಅನಿಲ್ ಕುಮಾರ್ ಟಿ ನಾಯಕ್ ಅವರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿದೆ.
ತನಿಖೆ ವೇಳೆ, ಆರೋಪಿಗಳಲ್ಲಿ ಒಬ್ಬಳನ್ನು ತುಮಕೂರು ಜಿಲ್ಲೆಯ ಬೆಳ್ಳಾವಿ ಹೋಬಳಿಯ ಬುಡುಗನಹಳ್ಳಿ ನಿವಾಸಿ ಕಾವ್ಯ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿ ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು ತಾಲೂಕಿನ ವೆಂಕಟೇಶ್ ಎಂದು ಪತ್ತೆಯಾಗಿದೆ.
ಪೊಲೀಸರು ಕಾವ್ಯಳನ್ನ ಬಂಧಿಸಿ, ಸುಮಾರು 7.610 ಗ್ರಾಂ ತೂಕದ (ಸುಮಾರು ₹75,000 ಮೌಲ್ಯದ) ಬಂಗಾರದ ಆಭರಣಗಳು ಹಾಗೂ ₹6,000 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ನಾಪತ್ತೆಯಾಗಿರುವ ವೆಂಕಟೇಶ್ ಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am