ಬ್ರೇಕಿಂಗ್ ನ್ಯೂಸ್
27-03-26 03:38 pm HK News Staffer ಕರಾವಳಿ
ಮಂಗಳೂರು, ಮಾ.27: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವ ಕಾರ್ಯಕ್ರಮವು ಮಾ.28ರಂದು ಕೊಣಾಜೆ ಮಂಗಳಗಂಗೋತ್ರಿಯ ಸಭಾಂಗಣದಲ್ಲಿ ನಡೆಯಲಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪದ್ಮಶ್ರೀ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಯಕ್ಷಗಾನದ ಮೇರು ಸಾಧಕ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಮತ್ತು ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದೆಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ ಹೇಳಿದರು.
ಪೂರ್ವಾಹ್ನ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಘಟಿಕೋತ್ಸವ ನಡೆಯಲಿರುವುದು. ಕರ್ನಾಟಕದ ರಾಜ್ಯಪಾಲರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾಗಿರುವ ಥಾವರ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿರುವರು. ಉನ್ನತ ಶಿಕ್ಷಣ ಸಚಿವರು ಹಾಗೂ ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರಲಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮುಖ್ಯ ಅತಿಥಿಯಾಗಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆಂದರು.
ಕಿತ್ತಳೆ ಹಣ್ಣು ಮಾರಾಟ ಮಾಡಿ ಶಾಲೆ ಕಟ್ಟಿದ ಸಾಧಕ ಹರೇಕಳ ಹಾಜಬ್ಬ ಅವರು ಮಂಗಳೂರಿನ ಹರೇಕಳ-ನ್ಯೂಪಡ್ಪು ಗ್ರಾಮದಲ್ಲಿ ಶಾಲೆಯನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಶಿಕ್ಷಣದಲ್ಲಿ ಕ್ರಾಂತಿ ಮಾಡಿದ್ದರು. ಹಾಜಬ್ಬ ಅವರಿಗೆ 2020ರಲ್ಲಿ ಪದ್ಮಶ್ರೀ ಪ್ರಶಸ್ತಿಯೂ ಒಲಿದು ಬಂದಿತ್ತು.
ಸೂರಿಕುಮೇರು ಗೋವಿಂದ ಭಟ್ (1938-2026) ಅವರು ತೆಂಕುತಿಟ್ಟು ಯಕ್ಷಗಾನ ರಂಗದ ದಿಗ್ಗಜರಾಗಿದ್ದು, ದಶಾವತಾರಿ ಎಂದೇ ಬಿರುದು ಪಡೆದವರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೂರಿಕುಮೇರು ಮೂಲದ ಇವರು 7 ದಶಕಗಳ ಕಾಲ ಯಕ್ಷಗಾನ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ ಮೇಳದಲ್ಲಿ 50 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ರಕ್ತಬೀಜ, ಕೌರವ, ಭೀಷ್ಮ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಇವರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿ (2016) ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳು ದೊರೆತಿವೆ.
ಡಾ.ರವೀಶ್ ಪಡುಮಲೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೈವ ನರ್ತಕರಾಗಿದ್ದು, ಚಿಂತಕರಾಗಿ ಮತ್ತು ಶಿಕ್ಷಣ ತಜ್ಞರಾಗಿ ಉಜಿರೆಯ ಎಸ್ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರು ದೈವ ನರ್ತನದ ಸಂಪ್ರದಾಯವನ್ನು ಪಾಲಿಸುತ್ತಾ, ಹಿಂದೂ ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 162 (ಕಲಾ ನಿಕಾಯ-40, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ-92, ವಾಣಿಜ್ಯ ನಿಕಾಯ - 25, ಶಿಕ್ಷಣ ನಿಕಾಯ - 05) ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ (ಪಿಹೆಚ್.ಡಿ) ಪಡೆಯಲಿದ್ದಾರೆ. ಇವರಲ್ಲಿ 74 (45.67%) ಮಹಿಳೆಯರು ಮತ್ತು 88 (54.32%) ಪುರುಷರು ಹಾಗೂ 11 (ಪುರುಷ-10, ಮಹಿಳೆ-01) ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿರುವರು. 56 ಚಿನ್ನದ ಪದಕ ಮತ್ತು 57 ನಗದು ಬಹುಮಾನಗಳಿದ್ದು, ವಿವಿಧ ಸ್ನಾತಕ/ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳ ಒಟ್ಟು 147 ರ್ಯಾಂಕ್ ಗಳಲ್ಲಿ ಪ್ರಥಮ ಶ್ರೇಣಿ ಪಡೆದ 69 (ಸ್ನಾತಕೋತ್ತರ ಪದವಿ- 50 ಮತ್ತು ಪದವಿ-19) ವಿದ್ಯಾರ್ಥಿಗಳಿಗೆ ರಾಂಕ್ ಪ್ರಮಾಣ ಪತ್ರವನ್ನು ನೀಡಲಾಗುವುದು. ಇದರಲ್ಲಿ ಕಲಾ ನಿಕಾಯದ-17, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ-40, ವಾಣಿಜ್ಯ ನಿಕಾಯದ -08, ಶಿಕ್ಷಣ ನಿಕಾಯದ -04 ವಿದ್ಯಾರ್ಥಿಗಳಿದ್ದಾರೆ ಎಂದು ಪ್ರೊ.ಧರ್ಮ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ, ಪ್ರಭಾರ ಕುಲಸಚಿವರಾದ ಗಣೇಶ್ ಸಂಜೀವ, ಹಣಕಾಸು ಅಧಿಕಾರಿ ಪಂಚಲಿಂಗ ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am