ಬ್ರೇಕಿಂಗ್ ನ್ಯೂಸ್
03-01-21 11:31 pm Mangaluru Correspondent ಕರಾವಳಿ
ಮಂಗಳೂರು, ಜ.3: ಮಂಗಳೂರು ನಗರಕ್ಕೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಕರ್ತವ್ಯ ಆರಂಭಿಸಿದ ಎರಡೇ ದಿನದಲ್ಲಿ ಪೊಲೀಸರಿಗೆ ಬಿಸಿ ಮುಟ್ಟಿಸುವ ಕೆಲಸ ಆರಂಭಿಸಿದ್ದಾರೆ.
ಮಂಗಳೂರಿನ ಬರ್ಕೆ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಲು ಸೂಚಿಸಿದ್ದಾರೆ. ರಾತ್ರಿ ವೇಳೆ ವಿನಾಕಾರಣ ರಸ್ತೆಯಲ್ಲಿ ಓಡಾಡುವುದು, ಬಾರ್, ಹೊಟೇಲ್ ಮತ್ತಿತರ ಸಾರ್ವಜನಿಕ ಪ್ರದೇಶಗಳಲ್ಲಿ ನಿಂತುಕೊಳ್ಳುವುದು, ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವುದನ್ನು ತಪ್ಪಿಸಲು ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ.


ಪಾರ್ಕ್, ಮೈದಾನ, ಬಸ್ ನಿಲ್ದಾಣಗಳಲ್ಲಿ ಟಾರ್ಗೆಟ್ ಇಟ್ಟುಕೊಂಡು ಈ ರೀತಿಯ ಆಪರೇಶನ್ ನಡೆಯಲಿದೆ. ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದವರು ಅಪರಾಧ ಹಿನ್ನೆಲೆ ಹೊಂದಿದ್ದರೆ ಅವರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿ ಸೇರಿದಂತೆ ಎಸಿಪಿ, ಹತ್ತು ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ಮತ್ತು 50 ಮಂದಿ ಸಿಬಂದಿ ಇರಲಿದ್ದಾರೆ. ಆರಂಭಿಕವಾಗಿ ಎರಡು ಠಾಣೆ ವ್ಯಾಪ್ತಿಯಲ್ಲಿ ಈ ರೀತಿಯ ಕಾರ್ಯಾಚರಣೆ ನಡೆಯಲಿದ್ದು ಮುಂದಿನ ದಿನಗಳಲ್ಲಿ ಬೇರೆ ಠಾಣೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ಅಗತ್ಯ ಬಿದ್ದರೆ ತಾನು ಕೂಡ ಬರಲಿದ್ದೇನೆ ಎಂದಿದ್ದಾರೆ.
ಪೊಲೀಸರು, ಪೊಲೀಸ್ ವ್ಯವಸ್ಥೆ ಬಗ್ಗೆ ಅಪರಾಧಿಗಳಲ್ಲಿ ಭಯ ಮೂಡಿಸುವುದು, ಅಪರಾಧಿಗಳನ್ನು ಮಟ್ಟ ಹಾಕುವುದು ಇದರ ಉದ್ದೇಶ. ರಾತ್ರಿ ವೇಳೆ ರಾಜಾರೋಷವಾಗಿ ವರ್ತಿಸುವುದು, ಎಲ್ಲೆಂದರಲ್ಲಿ ಕುಡಿಯುವುದು ಇಂಥ ಕೃತ್ಯಗಳಿಂದ ಮತ್ತೊಂದು ರೀತಿಯ ಅಪರಾಧಗಳಿಗೆ ಪ್ರೇರಣೆ ಸಿಗುವುದು. ಇದಕ್ಕಾಗಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
New Mangalore Commissioner of Police Shashi Kumar has issued strict rules for drunkards and night wanderers just in two days of his posting in the city.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm