ಬ್ರೇಕಿಂಗ್ ನ್ಯೂಸ್
31-03-26 10:06 pm HK News Desk ಕರಾವಳಿ
ಕೊಡಗು, ಮಾರ್ಚ್ 31: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದು ಇದೀಗ ದೊಡ್ಡ ವಿವಾದಕ್ಕೆ ತಿರುಗಿದೆ. ಗ್ರಾಮದಲ್ಲಿ ನಡೆದ ಮದುವೆಯಲ್ಲಿ ದೈವ ಮತ್ತು ದೈವ ನರ್ತಕರಿಗೆ ಅವಮಾನ ಮಾಡಿದ ಆರೋಪದಲ್ಲಿ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಹಲವು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಸಾರ್ವಜನಿಕರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಮುಸ್ಲಿಂ ಯುವಕನ ಮದುವೆ ಸಮಾರಂಭದ ವೇಳೆ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ವೇಷವನ್ನು ಹೋಲುವ ರೀತಿಯಲ್ಲಿ ಮದು ಮಗನಿಗೆ ವೇಷ ತೊಡಿಸಿ, ಮೆರವಣಿಗೆ ನಡೆಸಲಾಗಿದೆ. ಈ ವೇಳೆ ಮದುಮಗ ಹಾಗೂ ಆತನ ಬೆಂಬಲಿಗರು ದೈವದ ವೇಷದಲ್ಲಿ ಅತಿರೇಕದ ಮತ್ತು ಅವಮಾನಕಾರಿ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ದೈವ ಭಕ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪೂರ್ವಜರ ನಂಬಿಕೆ, ಸಂಸ್ಕೃತಿ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಘಟನೆ ಎಂದು ಆರೋಪಿಸಿ, ಹಿಂದೂ ಪರ ಸಂಘಟನೆ ಮುಖಂಡರು ನಾಪೋಕ್ಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಅಬ್ದುಲ್ ರಾಶಿದ್, ಹನೀಫ್, ಲತೀಫ್, ಮೊಹಮ್ಮದ್ ಫೈಜಲ್, ಶಕೀರ್ ಹಾಗೂ ಬಶೀರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮದುಮಗ ಫೈಜಲ್ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆ ಯಾಚಿಸಿದ್ದಾನೆ. ಈ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಮದುವೆಯ ಬಳಿಕ ಖಾಸಗಿಯಾಗಿ ಮಾತನಾಡಿದ ಕೆಲವು ಮಾತುಗಳು ವೈರಲ್ ಆಗಿವೆ. ಇದರಿಂದ ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದರೆ, ನಾನು ಹೃದಯಪೂರ್ವಕವಾಗಿ ಕ್ಷಮೆಯಾಚಿಸುತ್ತೇನೆ” ಎಂದಿದ್ದಾರೆ.
ಆದರೆ ಈ ಕ್ಷಮೆಯಾಚನೆಗೆ ತೃಪ್ತಿಪಡದ ದೈವಾರಾಧಕರ ಸಂಘ ಹಾಗೂ ಸ್ಥಳೀಯರು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮಡಿಕೇರಿ ಡಿವೈಎಸ್ಪಿಗೂ ದೂರು ಸಲ್ಲಿಸಲಾಗಿದ್ದು, ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ ಎಂಬ ಅಸಮಾಧಾನ ವ್ಯಕ್ತವಾಗಿದೆ.
“ನಮ್ಮ ದೈವಗಳಿಗೆ ಮತ್ತೆ ಮತ್ತೆ ಅವಮಾನ ಮಾಡಲಾಗುತ್ತಿದೆ. ಅಪಮಾನವಾದಾಗ ಕೇವಲ ಕ್ಷಮೆ ಕೇಳುವುದರಿಂದ ಸಮಸ್ಯೆ ಮುಗಿಯುವುದಿಲ್ಲ. ಇಂತಹ ಕೃತ್ಯಗಳಿಗೆ ತಕ್ಕ ಶಿಕ್ಷೆ ನೀಡದಿದ್ದರೆ ಮುಂದೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ಕ್ರಮ ಜರುಗಿಸದಿದ್ದರೆ ತೀವ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ” ಎಂದು ಸಂಘದ ಪ್ರಮುಖರು ಎಚ್ಚರಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am