ಬ್ರೇಕಿಂಗ್ ನ್ಯೂಸ್
10-04-26 09:49 pm Mangaluru Staffee ಕರಾವಳಿ
ಉಳ್ಳಾಲ, ಎ.10: ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲದ ನಿರ್ದೇಶಕರು, ಉಳ್ಳಾಲ ಬಂಡಿಕೊಟ್ಯ ನಿವಾಸಿ, ಭರತನಾಟ್ಯ ಗುರು ವಿದ್ವಾನ್ ಶ್ರಾವಣ್ ಉಳ್ಳಾಲ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂರು ತಿಂಗಳಿಂದ ಹಳದಿ ಕಾಮಾಲೆ ರೋಗದಿಂದ ಬಳಲುತ್ತಿದ್ದು, ಕಳೆದ ವಾರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಹಾಗೂ ಸಂಸ್ಥೆಯ ಗೌರವಾಧ್ಯಕ್ಷೆ ಶಕೀಲಾ ಜನಾರ್ದನ ಅವರ ಮಾರ್ಗದರ್ಶನದಲ್ಲಿ ಸ್ಥಾಪಿತವಾದ ಮಂತ್ರ ನಾಟ್ಯಕಲಾ ಗುರುಕುಲವನ್ನು ಶ್ರಾವಣ್ ಉಳ್ಳಾಲ್ ಅವರು ಸಮರ್ಥವಾಗಿ ಮುನ್ನಡೆಸಿ ಅನೇಕ ವಿದ್ಯಾರ್ಥಿಗಳಿಗೆ ಭರತನಾಟ್ಯ ಕಲೆಯನ್ನು ಕಲಿಸಿದ್ದರು.

ಪಂದನಲ್ಲೂರು ಶೈಲಿಯ ಭರತನಾಟ್ಯವನ್ನು ದೇಶದ ವಿವಿಧ ರಾಜ್ಯಗಳಲ್ಲಿ ಪರಿಚಯಿಸಿ ಒರಿಸ್ಸಾ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಗುಜರಾತ್ ಸೇರಿದಂತೆ ಅನೇಕ ರಾಜ್ಯಗಳ ಸಾಂಸ್ಕೃತಿಕ ವೇದಿಕೆಗಳಲ್ಲಿ ಪ್ರದರ್ಶನ ನೀಡಿದ್ದರು. ವಿದೇಶಗಳಲ್ಲಿ ಭರತನಾಟ್ಯ, ಕೂಚುಪುಡಿ, ಕಥಕ್, ಒಡಿಸ್ಸಿ ಹಾಗೂ ಯಕ್ಷಗಾನಗಳ ಸಮ್ಮಿಲನದ ಪ್ರದರ್ಶನ ನೀಡಿದ್ದರು. ‘ಮೋಕ್ಷಂ’, ‘ರುದ್ರ ವೀರಭದ್ರ’, ‘ಶ್ರೀಕೃಷ್ಣ ಲೀಲಾಮೃತಂ’, ‘ತ್ರಿಶಕ್ತಿ’, ‘ನೃಸಿಂಹ ಚಲತಂ’, ‘ದಶ ಹಲರೂಪಂ’, ‘ಶಕ್ತಿ’ ಮೊದಲಾದ ನೃತ್ಯ ರೂಪಕಗಳ ಮೂಲಕ ಜನಮನ್ನಣೆ ಪಡೆದಿದ್ದರು.
ದೂರದರ್ಶನ ಗ್ರೇಡೆಡ್ ಕಲಾವಿದರಾಗಿದ್ದ ಶ್ರಾವಣ್ ಉಳ್ಳಾಲರು ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ವೀಣಾ ವಾದನದಲ್ಲೂ ಪರಿಣತಿ ಹೊಂದಿದ್ದರು. ನಾಟ್ಯ ಪ್ರವೀಣ ಪ್ರಶಸ್ತಿ, ಜನಪದ ಬಂಧು ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾಡಳಿತದ 2018ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಸಂದಿವೆ. ಶ್ರಾವಣ್ ಅವರು ಪತ್ನಿ ಶೈನಾ ಶ್ರಾವಣ್ ಮತ್ತು ಪುಟ್ಟ ಹೆಣ್ಣು ಮಗಳು ಮಂತ್ರ ಎಸ್ ಉಳ್ಳಾಲ್ ಅವರನ್ನ ಅಗಲಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am