ಬ್ರೇಕಿಂಗ್ ನ್ಯೂಸ್
19-04-26 10:41 pm HK News Staffer ಕರಾವಳಿ
ಮಂಗಳೂರು, ಎಪ್ರಿಲ್ 19: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ಸುಪರ್ದಿಗೆ ನೀಡುವ ಕರಾರು ಒಪ್ಪಂದ ರದ್ದುಗೊಳಿಸಬೇಕು, ಕಿದ್ವಾಯಿ ಕ್ಯಾನ್ಸರ್ ಮತ್ತು ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪಿಸಿ ಸರಕಾರಿ ಆಸ್ಪತ್ರೆಗಳನ್ನು ಕರಾವಳಿ ಜಿಲ್ಲೆಗಳಲ್ಲಿ ಬಲಪಡಿಸಬೇಕು ಎಂದು ಆಗ್ರಹಿಸಿ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಎಪ್ರಿಲ್ 28ರಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದೆ.
ಇತ್ತೀಚೆಗೆ ರಾಜ್ಯ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯು ಬೆಳ್ತಂಗಡಿ ತಾಲೂಕು ಆಸ್ಪತ್ರೆ, ಮೂಡುಬಿದ್ರೆ ಆರೋಗ್ಯ ಕೇಂದ್ರವನ್ನು ಆಳ್ವಾಸ್ ಹೆಲ್ತ್ ಸೆಂಟರ್ ನೊಂದಿಗೆ, ಬಂಟ್ವಾಳ ತಾಲೂಕು ಆಸ್ಪತ್ರೆಯನ್ನು ಎ.ಜೆ ವೈದ್ಯಕೀಯ ಕಾಲೇಜಿನೊಂದಿಗೆ ಹಾಗೂ ವಿಟ್ಲ ಸಮುದಾಯ ಆಸ್ಪತ್ರೆಯನ್ನು ಯೆನೆಪೋಯ ವೈದ್ಯಕೀಯ ಕಾಲೇಜಿಗೆ ವಹಿಸಲು ಕರಾರು ಒಪ್ಪಂದಕ್ಕೆ ಅನುಮೋದನೆ ನೀಡಿರುವ ಸುತ್ತೋಲೆಯನ್ನು ಹೊರಡಿಸಿದೆ. ಸರಕಾರ ಖಾಸಗೀ ಮೆಡಿಕಲ್ ಸಂಸ್ಥೆಗಳೊಂದಿಗೆ ಮಾಡಿದ ಈ ಕರಾರು ಒಪ್ಪಂದವನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧಿಸಲಿದೆ. ಈ ಒಪ್ಪಂದ ಸಂಪೂರ್ಣ ಜನ ವಿರೋಧಿಯಾಗಿದ್ದು ಆಳುವ ಸರಕಾರ ಖಾಸಗೀ ಮೆಡಿಕಲ್ ಕಾಲೇಜು ಲಾಬಿಗೆ ಮಣಿದು ಸರಕಾರಿ ಆಸ್ಪತ್ರೆಗಳನ್ನು ಕಡೆಗಣಿಸುವ ಹುನ್ನಾರ ಇದರ ಹಿಂದೆ ಅಡಗಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಜ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿಸಿದ ಕಾಯಿಲೆಗಳಿಗೆ ತುತ್ತಾಗುವವರ ಸಂಖ್ಯೆ ವರುಷದಿಂದ ವರುಷಕ್ಕೆ ಏರುತ್ತಿದೆ. 2025-26ರ ಅವಧಿಯಲ್ಲಿ ಜಿಲ್ಲೆಯ ಖಾಸಗೀ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಬಾಯಿ ಕ್ಯಾನ್ಸರ್, ಸ್ತನ, ಗರ್ಭಾಶಯ ಹಾಗೂ ಇತರ ಕ್ಯಾನ್ಸರ್ ರೋಗಕ್ಕೆ ಒಳಗಾಗಿ ಚಿಕಿತ್ಸೆ ಪಡೆಯಲು ( ಹೊರ ಜಿಲ್ಲೆಯವರೂ ಸೇರಿ) 13,322 ಮಂದಿ ದಾಖಲಾಗಿದ್ದು ಇದು ಬಹಳ ಅಪಾಯಕಾರಿ ಬೆಳವಣೆಗೆಯನ್ನು ಸೂಚಿಸುತ್ತದೆ. ಇಂತಹ ಗಂಭೀರ ಕಾಯಿಲೆಗಳಿಗೆ ಸರಕಾರಿ ವೆನ್ ಲಾಕ್ ಜಿಲ್ಲಾಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ಲಭ್ಯವಿರದ ಕಾರಣ ಜನಸಾಮಾನ್ಯರು ಖಾಸಗೀ ಆಸ್ಪತ್ರೆಗಳನ್ನೇ ಅವಲಂಬಿಸಬೇಕಾದ ಮತ್ತು ಅಲ್ಲಿನ ದುಬಾರಿ ವೆಚ್ಚ ಭರಿಸಲೇಬೇಕಾದ ಸ್ಥಿತಿಯಲ್ಲಿದ್ದಾರೆ.
ಜಿಲ್ಲೆಯ ಬಹುತೇಕ ಖಾಸಗಿ ಆಸ್ಪತ್ರೆಗಳು ಕಾಯಿಲೆಗೆ ತುತ್ತಾದವರನ್ನು ಅನಗತ್ಯ ಪರೀಕ್ಷೆ ನಡೆಸುವ, ದುಬಾರಿ ಚಿಕಿತ್ಸೆಗಳಿಗೆ ಒಳಪಡಿಸುವುದರಿಂದ ಜನಸಾಮಾನ್ಯರು ತಮ್ಮ ಸಾಲ ಮಾಡಿ ಬಿಲ್ ಕಟ್ಟುವ ಸ್ಥಿತಿಯಾಗಿದೆ. ರೋಗಿ ಆಸ್ಪತ್ರೆಯ ದುಬಾರಿ ವೆಚ್ಚ ಪೂರ್ಣ ಪಾವತಿಸುವಲ್ಲಿ ವಿಫಲನಾದರೆ ಅದು ಸರಕಾರದ ವೈದ್ಯಕೀಯ ನಿಯಮಗಳನ್ನೇ ಉಲ್ಲಂಘಿಸಿ ರೋಗಿ ಅಥವಾ ರೋಗಿಯ ಕಡೆಯವರು ಹಣ ಪಾವತಿಸುವ ವರೆಗೆ ರೋಗಿಗಳನ್ನು ಅಕ್ರಮ ಬಂಧನದಲ್ಲಿಡುವ, ಹೆಣಗಳನ್ನು ದಿನಗಟ್ಟಲೆ ಬಿಟ್ಟುಕೊಡದ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇಂತಹ ಪ್ರಕರಣಗಳ ಬಗ್ಗೆ ದೂರು ಕೊಟ್ಟರೂ ಆರೋಗ್ಯ ಇಲಾಖೆ ಒಂದೇ ಒಂದು ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆರೋಗ್ಯ ಸೇವೆ ಸಂಪೂರ್ಣ ಹದಗೆಟ್ಟಿದೆ. ಜನಸಂಖ್ಯೆಗೆ ಅನುಗುಣವಾಗಿ ಇರಬೇಕಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಹಿಡಿದು, ಸಮುದಾಯ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು ಸರಾಸರಿಗಿಂತ ತೀರಾ ಕೆಳಮಟ್ಟದಲ್ಲಿದೆ. ಕ್ಯಾನ್ಸರ್ , ಹೃದಯ ಸಂಬಂಧಿತ ಹಾಗೂ ಮೆದುಳು, ನರ, ಮಾನಸಿಕ ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸಲು ಕಿದ್ವಾಯಿ, ಜಯದೇವ, ನಿಮಾನ್ಸ್ ನಂತಹ ಸೂಪರ್ ಸ್ಪೆಷಾಲಿಟಿ ಶೈಲಿಯ ಆಸ್ಪತ್ರೆಗಳು ಈವರೆಗೂ ಸ್ಥಾಪಿಸಲು ಸಾಧ್ಯವಾಗಿಲ್ಲ. ದ.ಕ ಜಿಲ್ಲೆಯಲ್ಲೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕೆಂದು ಹಲವು ದಶಕಗಳಿಂದ ಒತ್ತಾಯಿಸುತ್ತ ಬಂದರೂ ಸರಕಾರದ ಬಜೆಟ್ ಅವಧಿಯಲ್ಲಿ ಘೋಷಣೆಯನ್ನಷ್ಟೇ ಕೈಗೊಳ್ಳಲಾಗಿದೆ ಹೊರತು ಅದಕ್ಕೆ ಹಣಕಾಸನ್ನು ಮೀಸಲಿರಿಸಿಲ್ಲ.
ಸರಕಾರಿ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ಹಿಡಿತಕ್ಕೆ ವಹಿಸಿಕೊಡುವ ಕರಾರು ಒಪ್ಪಂದವನ್ನು ರದ್ದುಗೊಳಿಸಬೇಕು ಹಾಗೂ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಮತ್ತು ಶ್ರೀ ಜಯದೇವ ಹೃದ್ರೋಗ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್, ನಿಮಾನ್ಸ್ ಆಸ್ಪತ್ರೆಗಳನ್ನು ಸ್ಥಾಪಿಸಲು ಮುಂದಾಗಬೇಕೆಂದು ಒತ್ತಾಯಿಸಿ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಎಪ್ರಿಲ್ 28 ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಕಚೇರಿ ಚಲೋ ಹೋರಾಟವನ್ನು ಕೈಗೊಂಡಿರುತ್ತೇವೆ. ಬೆಳಗ್ಗೆ 10 ಗಂಟೆಗೆ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆ ಮುಂಭಾಗದಿಂದ ಪಡೀಲ್ ಉಸ್ತುವಾರಿ ಸಚಿವರ ಕಚೇರಿ ( ಜಿಲ್ಲಾಧಿಕಾರಿಗಳ) ವರೆಗೆ ಪಾದಯಾತ್ರೆ, ಪ್ರತಿಭಟನಾ ಪ್ರದರ್ಶನ ನಡೆಯಲಿದೆ ಎಂದು ಇಮ್ತಿಯಾಜ್ ತಿಳಿಸಿದ್ದಾರೆ.
ಘಟಕದ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ನವೀನ್ ಕೊಂಚಾಡಿ, ರಿಜ್ವಾನ್ ಹರೇಕಳ, ಚರಣ್ ಶೆಟ್ಟಿ ಪಂಜಿಮೊಗರು, ನಿತಿನ್ ಕುತ್ತಾರ್ ಉಪಸ್ಥಿತರಿದ್ದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 07:47 pm
HK News Staffer
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm