ಬ್ರೇಕಿಂಗ್ ನ್ಯೂಸ್
20-04-26 05:28 pm HK News Staffer ಕರಾವಳಿ
ಪುತ್ತೂರು, ಎಪ್ರಿಲ್ 20: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗಡಿ ಏಲಂ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಗಂಭೀರ ಆರೋಪ ಮಾಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಹೇಶ್ ದಾಸ್, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಗದ್ದೆಯಲ್ಲಿ ವ್ಯಾಪಾರಕ್ಕೆ ಕೇವಲ 320 ಅಂಗಡಿಗಳಿಗೆ ಮಾತ್ರ ಅಧಿಕೃತವಾಗಿ ಏಲಂ ಮೂಲಕ ಅವಕಾಶ ನೀಡಲಾಗಿತ್ತು. ಆದರೆ, ಪ್ರಸ್ತುತ 700ಕ್ಕೂ ಅಧಿಕ ಅಂಗಡಿಗಳು ಕಾರ್ಯಾಚರಿಸುತ್ತಿವೆ ಎಂದು ಅವರು ದೂರಿದರು.
“ಅಧಿಕೃತವಾಗಿ ನಿಗದಿಪಡಿಸಿದ 320 ಅಂಗಡಿಗಳಿಗಿಂತ ಹೆಚ್ಚುವರಿಯಾಗಿ ಇರುವ 400ಕ್ಕೂ ಹೆಚ್ಚು ಅಂಗಡಿಗಳಿಂದ ಅನಧಿಕೃತವಾಗಿ ಹಣ ವಸೂಲಿ ಮಾಡಲಾಗಿದೆ. ಈ ಹಣವು ದೇವಸ್ಥಾನದ ಬೊಕ್ಕಸಕ್ಕೆ ಸೇರುವ ಬದಲು ಭ್ರಷ್ಟರ ಪಾಲಾಗಿದೆ. ಇದರಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಕಾರ್ಯ ನಿರ್ವಹಣಾಧಿಕಾರಿ ಹಾಗೂ ಅಧಿಕಾರಿ ವರ್ಗದವರು ಭಾಗಿಯಾಗಿದ್ದಾರೆ,” ಎಂದು ಮಹೇಶ್ ದಾಸ್ ಆರೋಪಿಸಿದರು.
ಹಣ ವಸೂಲಿಗೆ ಸಂಬಂಧಿಸಿದಂತೆ ದೇವಸ್ಥಾನದ ಅಧಿಕೃತ ಲೆಟರ್ ಹೆಡ್ ಬದಲಾಗಿ, ಸಾಮಾನ್ಯ ಬಿಳಿ ಕಾಗದದ ಚೂರುಗಳಲ್ಲಿ ದೇವಸ್ಥಾನದ ಸೀಲ್ ಹಾಕಿ ಹಣ ಪಡೆದುಕೊಳ್ಳಲಾಗುತ್ತಿದೆ. ಈ ಮೂಲಕ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಹಗರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು. ಕಷ್ಟಪಟ್ಟು ವ್ಯಾಪಾರ ಮಾಡುವ ಹಿಂದೂ ವ್ಯಾಪಾರಿಗಳಿಗೆ ನ್ಯಾಯ ಸಿಗಬೇಕು ಮತ್ತು ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am