ಬ್ರೇಕಿಂಗ್ ನ್ಯೂಸ್
05-05-26 11:01 pm HK News Desk ಕರಾವಳಿ
ಪುತ್ತೂರು, ಮೇ 5 ಸವಣೂರು ಸಮೀಪದ ಚಾಪಳ್ಳ ಎಂಬಲ್ಲಿನ ಹೆದ್ದಾರಿ ತಿರುವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಮಿತ್ತೂರು ಗ್ರಾಮದ ಯಜ್ಞೇಶ್ (21) ಹಾಗೂ ಪುತ್ತೂರು ತಾಲ್ಲೂಕಿನ ಪಾಣಾಜೆ ಗ್ರಾಮದ ಜಗನ್ (20) ಮೃತಪಟ್ಟ ದುರ್ದೈವಿಗಳು. ಜಗನ್ ಅವರು ಪುತ್ತೂರಿನ ಅಕ್ಷಯ ಕಾಲೇಜಿನ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಯಾಗಿದ್ದು, ಇಂಟರ್ನ್ಷಿಪ್ಗಾಗಿ ಆಸ್ಟ್ರೇಲಿಯಾಕ್ಕೆ ಹೋಗಿ ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು

ಯುವಕರಿಬ್ಬರು ಕೆಲಸದ ನಿಮಿತ್ತ ಆಲಂಕಾರಿಗೆ ತೆರಳಿ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಚಾಪಳ್ಳ ತಿರುವಿನಲ್ಲಿ ಎದುರಿನಿಂದ ಬಂದ ನೀರಿನ ಟ್ಯಾಂಕರ್ ಡಿಕ್ಕಿಯಾಗಿದೆ. ಎದುರಿನಿಂದ ಬಂದ ಸ್ಕೂಟರ್ ಒಂದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಟ್ಯಾಂಕರ್ ಚಾಲಕ ವಾಹನವನ್ನು ಎಡಕ್ಕೆ ತಿರುಗಿಸಿದಾಗ ಬೈಕ್ ಟ್ಯಾಂಕರ್ನ ಚಕ್ರದಡಿಗೆ ಸಿಲುಕಿದೆ. ಬಳಿಕ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ.
ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಬೈಕ್ ಸವಾರರು ಅಪಘಾತ ಕಂಡು ಗಾಬರಿಯಿಂದ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
In a tragic road accident near Savanur, two bike riders lost their lives on the spot after a water tanker collided with their motorcycle at a highway curve in Chapalla on Tuesday evening. Two others sustained minor injuries in the incident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am