ಬ್ರೇಕಿಂಗ್ ನ್ಯೂಸ್
16-05-26 01:13 pm HK News Staffer ಕರಾವಳಿ
ಮಂಗಳೂರು, ಮೇ 16: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿನ ಕೈದಿಗಳಿಗೆ ಹಾಗೂ ಅವರ ಕುಟುಂಬಗಳಿಗೆ ಉಚಿತ ಕಾನೂನು ನೆರವು ಒದಗಿಸುವ ಉದ್ದೇಶದಿಂದ ‘ಕಾನೂನು ನೆರವು ಸಹಾಯ ಕೇಂದ್ರ’ ಆರಂಭಿಸಲಾಗಿದೆ.
‘ಲೀಗಲ್ ಏಡ್ ಹೆಲ್ಪ್ ಡೆಸ್ಕ್’ ಕೇಂದ್ರವನ್ನು ಉದ್ಘಾಟಿಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ್ ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಈಗಾಗಲೇ ಉಚಿತ ಕಾನೂನು ನೆರವು ನೀಡುತ್ತಿದ್ದರೂ, ಕಾರಾಗೃಹದ ಆವರಣದಲ್ಲೇ ಈ ವ್ಯವಸ್ಥೆ ಆರಂಭಿಸಿರುವುದರಿಂದ ಕೈದಿಗಳಿಗೆ ಹಾಗೂ ಅವರ ಕುಟುಂಬಗಳಿಗೆ ಕಾನೂನು ಮಾರ್ಗದರ್ಶನ ಇನ್ನಷ್ಟು ಸುಲಭವಾಗಲಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಝೈಬುನ್ನಿಸಾ ಮಾತನಾಡಿ, ಕಾನೂನು ತಾಂತ್ರಿಕತೆಗಳ ಕಾರಣದಿಂದಾಗಿ ಹಲವಾರು ಬಾರಿ ಕುಟುಂಬ ಸದಸ್ಯರು ಕೈದಿಗಳನ್ನು ಭೇಟಿಯಾಗಲು ಹಾಗೂ ಜಾಮೀನು ಪ್ರಕ್ರಿಯೆಗಳನ್ನು ಮುಂದುವರಿಸಲು ಕಷ್ಟ ಅನುಭವಿಸುತ್ತಾರೆ. ಇಂತಹ ಸಮಸ್ಯೆಗಳನ್ನು ಪರಿಹರಿಸಲು ಈ ಸಹಾಯ ಕೇಂದ್ರ ನೆರವಾಗಲಿದೆ ಎಂದು ತಿಳಿಸಿದರು.
ಈ ಹೊಸ ವ್ಯವಸ್ಥೆಯ ಮೂಲಕ ಕೈದಿಗಳ ಕುಟುಂಬಗಳು ವಾರಕ್ಕೆ ಎರಡು ಬಾರಿ ಕೇಂದ್ರದ ಮೂಲಕ ಕೈದಿಗಳೊಂದಿಗೆ ಸಂವಹನ ನಡೆಸುವ ಅವಕಾಶವೂ ದೊರೆಯಲಿದೆ ಎಂದು ಅವರು ಹೇಳಿದರು.
ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆ ಯವರೆಗೆ ಸಂಜೆ 4ರಿಂದ 5.30ವರೆಗೆ ಈ ನೆರವು ಕೇಂದ್ರ ತೆರೆದಿರುತ್ತದೆ. ಮೂವರು ವಕೀಲರನ್ನು ಈ ಕೇಂದ್ರಕ್ಕೆ ನಿಯೋಜಿಸಲಾಗಿದ್ದು, ಅವರು ಆರೋಪಿಗಳ ಕುಟುಂಬಿಕರಿಗೆ ಕಾನೂನು ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ. ಇಂತಹ ಕಾನೂನು ನೆರವು ನೀಡುವ ನಿಟ್ಟಿನಲ್ಲಿ ಪ್ರಾಧಿಕಾರದಿಂದ 10 ಮಂದಿ ಕಾನೂನು ಅಭಿರಕ್ಷಕರನ್ನು ನೇಮಿಸಲಾಗಿದೆ. ಕೊಲೆ, ಪೊಕ್ಸೊ, ದೊಡ್ಡ ಪ್ರಮಾಣದ ಎನ್‍ಡಿಪಿಎಸ್, ಅತ್ಯಾಚಾರ ಪ್ರಕರಣಗಳ ಆರೋಪಿಗಳನ್ನು ಹೊರತುಪಡಿಸಿ ಇತರ ಪ್ರಕರಣಗಳ ಆರೋಪಿಗಳಿಗೆ ಈ ಕೇಂದ್ರದಿಂದ ನೆರವು ಸಿಗುತ್ತದೆ ಎಂದರು.
ಆದರೆ ಕೊಲೆ, ಪೋಕ್ಸೊ, ಪ್ರಮುಖ ಎನ್‌ಡಿಪಿಎಸ್ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ಈ ಸೇವೆ ಲಭ್ಯವಿರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ, ವಕೀಲ ರವಿರಾಜ್, ಕೆಎಸ್‌ಐಎಸ್‌ಎಫ್ ಇನ್ಸ್‌ಪೆಕ್ಟರ್ ಸುಭಾಷ್ ಹಾಗೂ ಕೇಂದ್ರ ಸಲಹೆಗಾರ ಡೆನಿಸ್ ಡಿಸೋಜಾ ಉಪಸ್ಥಿತರಿದ್ದರು.
ಮಂಗಳೂರು ಕಾರಾಗೃಹದ ಅಧೀಕ್ಷಕ ಶರಣಬಸಪ್ಪ, ವಕೀಲರಾದ ರವಿರಾಜ್, ಕೆಎಸ್‍ಐಎಸ್‍ಎಫ್ ನಿರೀಕ್ಷಕ ಸುಭಾಷ್, ಕೇಂದ್ರದ ಸಲಹೆಗಾರಡೆನ್ನಿಸ್ ಡಿಸೋಜಾ ಉಪಸ್ಥಿತರಿದ್ದರು. ಪ್ರೇಮಿ ಫರ್ನಾಂಡೀಸ್ ಕಾಯಕ್ರಮ ನಿರೂಪಿಸಿದರು. ಹರ್ಷಿತಾ ವಂದಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am