ಬ್ರೇಕಿಂಗ್ ನ್ಯೂಸ್
16-05-26 09:16 pm HK News Staffer ಕರಾವಳಿ
ಉಡುಪಿ, ಮೇ 16: ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ “ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್” ನಿರ್ಮಾಣ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಪಂ ವತಿಯಿಂದ ಪಾರ್ಕ್ ನಿರ್ಮಿಸಲಾಗುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.
ವಿಕಲಚೇತನರಿಗೆ ಸಮಗ್ರ ಪುನರ್ವಸತಿ, ಚಿಕಿತ್ಸಕ ಸೇವೆಗಳು, ಉದ್ಯೋಗವಕಾಶ ಮತ್ತು ಸ್ವತಂತ್ರ ಜೀವನಕ್ಕೆ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದಕ್ಕಾಗಿ ಜಿಪಂ ಸಿಇಓ ಅಧ್ಯಕ್ಷತೆಯಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಾಮರ್ಥ್ಯ ಟ್ರಸ್ಟ್ ರಚಿಸಲಾಗಿದೆ. ಒಂದೂವರೆ ಕೋಟಿ ಸರ್ಕಾರಿ ಅನುದಾನ ಮತ್ತು ಇತರ ಸಂಘ- ಸಂಸ್ಥೆಗಳ ನೆರವಿನಲ್ಲಿ ಒಟ್ಟು 4.90 ಕೋಟಿ ವೆಚ್ಚದಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣವಾಗಲಿದೆ.
ಉಡುಪಿ ಜಿಲ್ಲೆಯಲ್ಲಿ 15 ವರ್ಷ ಒಳಗಿನ 1228 ವಿಕಲ ಚೇತನ ಮಕ್ಕಳಿದ್ದು ಇವರು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲು ಪಾರ್ಕ್ ಅನುಕೂಲವಾಗಲಿದೆ. ಇದಲ್ಲದೆ, ಇದರಲ್ಲಿ ಥೆರಪಿ ಸ್ವಿಂಗ್ಸ್ ಗಳು, ಬ್ಯಾಲನ್ಸ್ ಬೀಮ್ಸ್ ಗಳು, ಸಂಗೀತ ವಾದ್ಯಗಳು, ಸ್ಪರ್ಶ ಸಂವೇದನಾ ಮಾರ್ಗಗಳು, ಮರಳು ಮತ್ತು ನೀರಿನ ಆಟದ ವಲಯಗಳು ಇರಲಿದೆ. ಹೂಗಳ ಸುವಾಸನೆ ವೈವಿಧ್ಯ ಅರಿಯಲು ಸೆನ್ಸೇಶನ್ ಸೆನ್ಸರಿ ಪಾರ್ಕ್ ಕೂಡ ಬರಲಿದೆ.


ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೊಂದು ಇಡೀ ರಾಜ್ಯ, ದೇಶಕ್ಕೆ ಮಾದರಿ ಆಗಬಲ್ಲ ಪಾರ್ಕ್ ಆಗಲಿದೆ. ಇದನ್ನು ನಾಲ್ಕು ವರ್ಷದಲ್ಲಿ ಪೂರ್ಣಗೊಳಿಸಲು ಯೋಜನೆ ಹಾಕಿದ್ದಾರೆ. ಆದರೆ ಎರಡೇ ವರ್ಷದಲ್ಲಿ ಕಾಮಗಾರಿ ಪೂರ್ತಿಗೊಳಿಸಿ ನಮ್ಮ ಅವಧಿಯಲ್ಲೇ ಉದ್ಘಾಟನೆ ಮಾಡುವಂತಾಗಬೇಕು. ನಮ್ಮ ಇಲಾಖೆಯಿಂದಲೂ ಶೀಘ್ರ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ರುದ್ರಣ್ಣ, ಶ್ರೀಮತಿ ರತ್ನ, ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ, ಜೈ ವಿಠ್ಠಲ್, ಹರಿಪ್ರಸಾದ ರಾಯ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am