ಬ್ರೇಕಿಂಗ್ ನ್ಯೂಸ್
18-05-26 10:47 pm HK News Desk ಕರಾವಳಿ
ಮಂಗಳೂರು, ಮೇ 18 : ಮಂಗಳೂರು ನಗರ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್‌ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ರಾ. ಹೆ. 66ರಲ್ಲಿ ಬರುವ ಈ ಎರಡು ಪ್ರಮುಖ ಜಂಕ್ಷನ್‌ನಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಒಟ್ಟು 11.63 ಕೋಟಿ ರೂ. ಅಧಿಕ ಅನುದಾನ ಬಿಡುಗಡೆ ಮಾಡಿದೆ.
ಬೈಕಂಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್
ಬ್ಲ್ಯಾಕ್ ಸ್ಪಾಟ್ ಆಗಿ ಮಾರ್ಪಟ್ಟಿದ್ದ ಬೈಕಂಪಾಡಿ ಜಂಕ್ಷನ್ ಸುಗಮ ಹಾಗೂ ಸುರಕ್ಷಿತ ವಾಹನ ಸಂಚಾರಕ್ಕಾಗಿ ಅಂಡರ್ ಪಾಸ್ ಆಗಬೇಕೆಂದು ಸಾರ್ವಜನಿಕರಿಂದ ಬೇಡಿಕೆ ಕೇಳಿಬಂದಿತ್ತು. ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ತೆರಳುವ ವಾಹನಗಳ ಅನುಕೂಲಕ್ಕಾಗಿ ಬೈಕಂಪಾಡಿ ಜಂಕ್ಷನ್‌ನಲ್ಲಿ 7.09 ಕೋಟಿ ರೂ. ವೆಚ್ಚದಲ್ಲಿ ಅಂಡರ್ ಪಾಸ್ (LVUP) ನಿರ್ಮಾಣಕ್ಕೆ ಹೆದ್ದಾರಿ ಸಚಿವಾಲಯವು ಅನುಮೋದನೆ ನೀಡಿದೆ. ಈ ಅಂಡರ್‌ಪಾಸ್ ನಿರ್ಮಾಣದಿಂದಾಗಿ ವಾಹನಗಳು ಹೆದ್ದಾರಿಯಲ್ಲಿ ತಿರುವು ಪಡೆಯುವ ಬದಲು ಅಂಡರ್‌ಪಾಸ್ ಮೂಲಕವೇ ಕೈಗಾರಿಕಾ ಪ್ರದೇಶದ ಕಡೆಗೆ ಚಲಿಸಬಹುದಾಗಿದೆ. ಜತೆಗೆ ಹೆದ್ದಾರಿಯಲ್ಲಿಯೂ ಬೈಕಂಪಾಡಿ ಬಳಿ ಸುಗಮವಾಗಿ ಉಡುಪಿ ಕಡೆಗೆ ವಾಹನಗಳು ಸಂಚರಿಸುವುದಕ್ಕೆ ಅನುಕೂಲವಾಗಲಿದೆ.
ಕೂಳೂರು ಸೇತುವೆ ಬಳಿ ಅಂಡರ್‌ಪಾಸ್
ರಾಷ್ಟ್ರೀಯ ಹೆದ್ದಾರಿ 66ರ ಕೆ.ಐ.ಒ.ಸಿ.ಎಲ್ (KIOCL) ಜಂಕ್ಷನ್ ಮತ್ತು ಕೂಳೂರು ಸೇತುವೆ ಬಳಿ 4.54 ಕೋಟಿ ರೂ. ವೆಚ್ಚದಲ್ಲಿ ಅಂಡರ್ ಪಾಸ್ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. ಈ ಭಾಗದಲ್ಲಿ ಅಂಡರ್‌ಪಾಸ್ ನಿರ್ಮಿಸುವುದರಿಂದ ತಣ್ಣೀರುಬಾವಿ ಬೀಚ್ ಹಾಗೂ ಎಂ.ಎಸ್.ಇ.ಝೆಡ್ (MSEZ/SCZ) ಕಡೆಗೆ ಚಲಿಸುವ ವಾಹನಗಳ ದಟ್ಟಣೆಯನ್ನು ನಿವಾರಿಸಲು ಮತ್ತು ಸುಗಮ ಸಂಚಾರ ಕಲ್ಪಿಸಲು ಈ ಯೋಜನೆ ಸಹಕಾರಿಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಮೂಲಸೌಕರ್ಯದ ದೀರ್ಘ ಕಾಲದ ಬೇಡಿಕೆಯನ್ನು ಈಡೇರಿಸಿ, ಮಹತ್ವದ ಕಾಮಗಾರಿಗಳಿಗೆ ಅನುದಾನ ಒದಗಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಧನ್ಯವಾದ ಸಲ್ಲಿದ್ದಾರೆ.
ಎನ್‌ಎಂಪಿಟಿ ಭಾಗದ ರಸ್ತೆಯು ಇದಕ್ಕೂ ಮೊದಲು ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್ ವ್ಯಾಪ್ತಿಯಲ್ಲಿದ್ದು ನಿರ್ದಿಷ್ಟ ಏಜೆನ್ಸಿ ಇಲ್ಲದಿರುವುದು ಹಾಗೂ ನಿಧಿಯ ಕೊರತೆಯಿಂದ ಹೆದ್ದಾರಿ ಅಭಿವೃದ್ಧಿಗೆ ತೀವ್ರ ಸವಾಲು ಎದುರಾಗಿತ್ತು. ಈ ಬಗ್ಗೆ ಸತತ ಪ್ರಯತ್ನ ನಡೆಸಿ, ಪೋರ್ಟ್ ವ್ಯಾಪ್ತಿಯ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ ಕೂಳೂರು ಸೇತುವೆ ಬಳಿ ಮತ್ತು ಬೈಕಂಪಾಡಿ ಜಂಕ್ಷನ್ ಬಳಿ ಕೆಳಸೇತುವೆ ನಿರ್ಮಾಣದಿಂದ ಮಂಗಳೂರು-ಉಡುಪಿ ನಡುವೆ ಸಂಚರಿಸುವ ಸಾರ್ವಜನಿಕರಿಗೆ ಸುಗಮ ಸಂಚಾರ ಸಾಧ್ಯವಾಗಲಿದೆ. ಜೊತೆಗೆ ಬೈಕಂಪಾಡಿ ಕೈಗಾರಿಕಾ ವಲಯ ಹಾಗೂ ಎಂ.ಎಸ್.ಇ.ಝೆಡ್ ಭಾಗಕ್ಕೆ ಸಂಚರಿಸುವವರಿಗೂ ಹೆಚ್ಚಿನ ಅನುಕೂಲ ಕಲ್ಪಿಸಲಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am