ಬ್ರೇಕಿಂಗ್ ನ್ಯೂಸ್
06-01-21 11:24 am Mangalore Correspondent ಕರಾವಳಿ
ವಿಟ್ಲ, ಜ.5: ಮನೆಗೆ ನುಗ್ಗಿದ ದುಷ್ಕರ್ಮಿಗಳು ಕಟ್ಟಿ ಹಾಕಿ ದರೋಡೆ ನಡೆಸಿದ್ದ ಕುರಿತ ಪ್ರಕರಣವನ್ನು ಬೇಧಿಸುವಲ್ಲಿ ವಿಟ್ಲ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಟೋ ಚಾಲಕ ರಫೀಕ್ ಹಾಗೂ ಆತನ ಪುತ್ರ ಮಧ್ಯಾಹ್ನ ನಮಾಜಿಗೆ ತೆರಳಿದ್ದ ಸಂದರ್ಭದಲ್ಲಿ ಮನೆಯೊಳಗೆ ನುಗ್ಗಿದ ಅಪರಿಚಿತ ವ್ಯಕ್ತಿ ಪತ್ನಿ ಜೈನಾಬಿಯನ್ನು ಕಟ್ಟಿ ಹಾಕಿ, ಮೈಮೇಲಿದ್ದ ಕಿವಿಯೋಲೆ, ಉಂಗುರ ಹಾಗೂ ಚೈನ್ ಕಿತ್ತುಕೊಂಡು ಹಿಂಬದಿ ಬಾಗಿಲಿನಿಂದ ಪರಾರಿಯಾಗಿದ್ದನೆಂದು ದೂರು ನೀಡಲಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ, ಮಹಿಳೆಯೇ ಚಿನ್ನವನ್ನು ಬೇರೆಡೆಗೆ ಸಾಗಿಸಿದ್ದು ಬೆಳಕಿಗೆ ಬಂದಿದೆ. ಮನೆಯ ಪಕ್ಕದಲ್ಲಿ ವಾಸವಿರುವ ವ್ಯಕ್ತಿಯೊಬ್ಬನ ಕಾಟಕ್ಕೆ ಬೇಸತ್ತು ಬಾಡಿಗೆ ಮನೆ ಬದಲಿಸಲು ನಿರ್ಧರಿಸಿದ್ದರು. ಆದರೆ, ಪತ್ನಿ ಇದಕ್ಕೆ ಒಪ್ಪಿರಲಿಲ್ಲ. ಮನೆ ಬದಲಿಸುವ ಸಂದರ್ಭದಲ್ಲೇ ಪತ್ನಿ ದರೋಡೆಯ ನಾಟಕಕ್ಕೆ ಮುಂದಾಗಿದ್ದಾಳೆ ಎನ್ನಲಾಗಿದೆ.
ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ, ಸಿಬ್ಬಂದಿಗಳಾದ ಪ್ರಸನ್ನ, ಜಯಕುಮಾರ್, ಪ್ರತ್ತಾಪ, ವಿನಾಯಕ, ಹೇಮರಾಜ್ ಅವರ ತಂಡ ಕಾರ್ಯಚರಣೆ ನಡೆಸಿದ್ದು, ಮಹಿಳೆ ಬೇರೆಡೆಗೆ ಸಾಗಿಸಿಟ್ಟಿದ್ದ ಬಂಗಾರವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಪೊಲೀಸ್ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಭಯಗೊಂಡ ಮಹಿಳೆ ಅದನ್ನು ಬೇರೆಡೆಗೆ ತೆಗೆದುಕೊಂಡು ಹೋಗಿ ಮುಚ್ಚಿಟ್ಟಿದ್ದಳು. ಈ ಬಗ್ಗೆ ಪಕ್ಕದ ಮನೆಯ ವ್ಯಕ್ತಿಯನ್ನು ತನಿಖೆ ನಡೆಸಿದ ಸಂದರ್ಭ ಒಟ್ಟು ಪ್ರಕರಣ ಬೆಳಕಿಗೆ ಬಂದಿದ್ದು, ಭಾಗಶಃ ಬಂಗಾರವನ್ನು ಆತನ ಸಹಕಾರದಲ್ಲಿ ವಶಕ್ಕೆ ಪಡೆಯಲಾಗಿದೆ. ಆತನ ಸಹಕಾರದಲ್ಲೇ ದರೋಡೆ ನಾಟಕ ನಡೆದಿತ್ತಾ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕೊಕ್ಕಡ ಮಾದರಿಯಲ್ಲೇ ಮತ್ತೊಂದು ದರೋಡೆ ; ಮಹಿಳೆಗೆ ಹಲ್ಲೆಗೈದು ಚಿನ್ನ ಲೂಟಿ
Robbers whob tied a women and looted Jewellery at Vitla the police have found that it was the women herself who gave this idea.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm