ಬ್ರೇಕಿಂಗ್ ನ್ಯೂಸ್
25-05-26 09:57 pm HK News Staffer ಕರಾವಳಿ
ಮಂಗಳೂರು, ಮೇ 25: ಎಮ್ ಆರ್ ಪಿ ಎಲ್ ನ ಉದ್ದೇಶಿತ ಹಸಿರು ವಲಯಕ್ಕಾಗಿ ಗುರುತಿಸಿರುವ 27 ಎಕರೆ ಜಮೀನು ಸ್ವಾಧೀನ ತಕ್ಷಣ ಆರಂಭಿಸಬೇಕು, ಪುನರ್ವಸತಿ ವಾಗ್ದಾನವನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು ಎಂಬ ಬೇಡಿಕೆ ಮುಂದಿಟ್ಟು ಜೋಕಟ್ಟೆ, ಕಳವಾರು, ಕೆಂಜಾರು ಗ್ರಾಮದ ಕೋಕ್ ಸಲ್ಫರ್ ಘಟಕದ ಮಾಲಿನ್ಯದಿಂದ ಸಂತ್ರಸ್ತರು "ನಾಗರಿಕ ಹೋರಾಟ ಸಮಿತಿ" ನೇತೃತ್ವದಲ್ಲಿ ಎಂಟು ದಿನಗಳಿಂದ ನಡೆಸುತ್ತಿದ್ದ ಹಗಲು ರಾತ್ರಿ ಧರಣಿಯನ್ನು ಜಿಲ್ಲಾಧಿಕಾರಿ ಭರವಸೆಯೊಂದಿಗೆ ಮುಕ್ತಾಯಗೊಳಿಸಿದ್ದಾರೆ.
ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಅಧ್ಯಕ್ಷತೆಯ ಸಭೆಯಲ್ಲಿ ಸಂಸದ ಬ್ರಿಜೇಶ್ ಚೌಟ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಎಂಆರ್ ಪಿಎಲ್ ಎಂಡಿ ಕಾಮತ್ ಸಹಿತ ಜಿಲ್ಲಾ ಮಟ್ಟದ ಅಧಿಕಾರಿಗಳು, ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಸಹಿತ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.


ಹಸಿರು ವಲಯಕ್ಕೆ ಗುರುತು ಮಾಡಲಾದ 27 ಎಕರೆ ಜಮೀನನ್ನು ಕಂಪೆನಿ ನೇರ ಖರೀದಿಸುವುದು, ಜಿಲ್ಲಾಧಿಕಾರಿ ಅಧೀನದ ಸಮಿತಿಯಿಂದ ಭೂಸ್ವಾಧೀನಗೊಳಿಸುವುದು, ಕೆಐಡಿಬಿಯಿಂದ ಸ್ವಾಧೀನ ಮಾಡುವುದು ಈ ಮೂರು ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳು ಸಭೆಯ ಮುಂದೆ ತೆರದಿಟ್ಟರು. ಈ ಅಂಶಗಳ ಮೇಲೆ ಹೋರಾಟ ಸಮಿತಿಯ ಪ್ರತಿನಿಧಿಗಳು, ಜನಪ್ರತಿನಿಧಿಗಳು ಚರ್ಚಿಸಿದರು. ಕೆಐಎಡಿಬಿಯಿಂದ ಭೂಸ್ವಾಧೀನದ ಕಾನೂನು ಪ್ರಕ್ರಿಯೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿ, ಭೂಸ್ವಾಧೀನ ಪ್ರಕ್ರಿಯೆ ಆರಂಭಿಸುವುದಾಗಿ ಜಿಲ್ಲಾಡಳಿತ ಸ್ಪಷ್ಟ ಭರವಸೆ ನೀಡಿದ ಹಿನ್ನಲೆಯಲ್ಲಿ ಹೋರಾಟ ಸಮಿತಿ ಪ್ರತಿನಿಧಿಗಳು ಕೆಐಎಡಿಬಿ ಮೂಲಕ ಭೂಸ್ವಾಧೀನಕ್ಕೆ ಒಪ್ಪಿಗೆ ಸೂಚಿಸಿದರು. ಭೂಸ್ವಾಧೀನ ಆರಂಭಿಸುವುದು ಯಾವುದೇ ಕಾರಣಕ್ಕೂ ಆರು ತಿಂಗಳು ಮೀರಬಾರದು ಎಂದು ಖಾತರಿ ಪಡಿಸಬೇಕು ಎಂದು ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು. ಜಿಲ್ಲಾಡಳಿತ, ಕೆಐಎಡಿಬಿ ಅಧಿಕಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದರು.
ನೇರ ಖರೀದಿಯೊಂದಿಗೆ ಏಕಗಂಟಿನ ಪರಿಹಾರಕ್ಕೆ ಸಂತ್ರಸ್ತರು ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ, ಎಂಆರ್ ಪಿಎಲ್ ನ ನಾಲ್ಕನೇ ಹಂತದ ಭೂಸ್ವಾಧೀನಕ್ಕೆ ಪೆರ್ಮುದೆ ಗ್ರಾಮಸ್ಥರಿಗೆ ಸಿಗುವ ಪುನರ್ವಸತಿ ಪ್ಯಾಕೇಜ್ ನಲ್ಲಿರುವ ಎಲ್ಲಾ ಅಂಶಗಳನ್ನು ಜೋಕಟ್ಟೆ ಸಂತ್ರಸ್ತರಿಗೂ ಒದಗಿಸಬೇಕು ಎಂದು ಮುನೀರ್ ಕಾಟಿಪಳ್ಳ ಇದೇ ವೇಳೆ ಆಗ್ರಹಿಸಿದರು. ನಾಲ್ಕನೇ ಹಂತದ ಭೂಸ್ವಾಧೀನ ಪ್ಯಾಕೇಜ್ ನಲ್ಲಿ ಇರುವ 18 ತಿಂಗಳ ಮನೆ ಬಾಡಿಗೆಯನ್ನು ಜೋಕಟ್ಟೆಯವರಿಗೆ ಒದಗಿಸಬೇಕು, ಕುಸಿಯವ ಹಂತದಲ್ಲಿ ಇರುವ ಮನೆಗಳ ನಿವಾಸಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am