ಬ್ರೇಕಿಂಗ್ ನ್ಯೂಸ್
30-05-26 02:10 pm HK News Staffer ಕರಾವಳಿ
ಮಂಗಳೂರು, ಮೇ 30: ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿ ಮತ್ತು ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಚಾಲಕ ಹಾಗೂ ನಿರ್ವಾಹಕ, ತಮ್ಮ ಬಸ್ಸಿನ ಪ್ರಯಾಣಿಕರನ್ನೇ ಕೆಳಗಿಳಿಸಿ ಗಾಯಾಳುಗಳನ್ನು ನೇರವಾಗಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಶುಕ್ರವಾರ ಕಾವೂರು ಕಡೆಯಿಂದ ಕುಂಜತ್ತಬೈಲ್ ಕಡೆಗೆ ಸಂಚರಿಸುತ್ತಿದ್ದ ರೂಟ್ ನಂ. 13B ನಂಬರಿನ ‘ಮಾಸ್ಟರ್’ ಬಸ್ ಮರಕಡ ಜಂಕ್ಷನ್ ಸಮೀಪ ತಲುಪುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್ಸಿನಿಂದ ತಾಯಿ ಮತ್ತು ಪುಟ್ಟ ಮಗು ಆಕಸ್ಮಿಕವಾಗಿ ರಸ್ತೆಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಇಬ್ಬರೂ ಪ್ರಜ್ಞೆ ತಪ್ಪಿ ರಸ್ತೆಯಲ್ಲೇ ಬಿದ್ದಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈ ದೃಶ್ಯವನ್ನು ಗಮನಿಸಿದ ‘ಮಾಸ್ಟರ್’ ಬಸ್ ಚಾಲಕ ದಯಾನಂದ್ ಹಾಗೂ ನಿರ್ವಾಹಕ ಸಂದೀಪ್ ತಕ್ಷಣ ಕಾರ್ಯ ಪ್ರವೃತ್ತರಾಗಿದ್ದಾರೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದನ್ನು ಅರಿತ ಅವರು, ಆಂಬ್ಯುಲೆನ್ಸ್‌ಗಾಗಿ ಕಾಯದೇ ತಮ್ಮ ಬಸ್ಸನ್ನು ನಿಲ್ಲಿಸಿ ಪ್ರಯಾಣಿಕರಿಗೆ ಪರಿಸ್ಥಿತಿ ವಿವರಿಸಿದ್ದಾರೆ.



ನಂತರ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ, ತಾಯಿ ಮತ್ತು ಮಗುವನ್ನು ಅದೇ ಬಸ್ಸಿನಲ್ಲಿ ಹತ್ತಿಸಿಕೊಂಡು ಸಮೀಪದ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ದೊರಕುವಂತೆ ಮಾಡಿದ್ದಾರೆ. ಅವರ ಸಮಯೋಚಿತ ನಿರ್ಧಾರದಿಂದ ಇಬ್ಬರ ಜೀವ ಉಳಿದಿದ್ದು ಇಬ್ಬರಿಗೂ ಚಿಕಿತ್ಸೆ ಮುಂದುವರೆದಿದೆ. ಚಾಲಕ ದಯಾನಂದ್ ಮತ್ತು ನಿರ್ವಾಹಕ ಸಂದೀಪ್ ಅವರ ಈ ನಿಸ್ವಾರ್ಥ ಸೇವೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದ್ದು, "ರಿಯಲ್ ಹೀರೋಗಳು" ಎಂದು ಸಾರ್ವಜನಿಕರು ಕೊಂಡಾಡುತ್ತಿದ್ದಾರೆ.
ಘಟನೆಯಲ್ಲಿ ಬಸ್ಸಿಂದ ಬಿದ್ದ ಪೆಟ್ಟಿಗೆ ಮಗುವಿನ ಮೆದುಳಿನಲ್ಲಿ ತೀವ್ರ ರಕ್ತ ಹೆಪ್ಪು ಗಟ್ಟಿದ್ದು ಸದ್ಯ ನಗರದ ಎಜೆ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಆದರೆ ಪರಿಸ್ಥೀತಿ ಗಂಭಿರವಾಗಿರುವ ಹಿನ್ನೆಲೆಯಲ್ಲಿ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸೂಚನೆ ನೀಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
In a remarkable act of humanity, a city bus driver and conductor rushed to the aid of an unconscious mother and child who had fallen from a moving bus, converting their own bus into an emergency ambulance and ensuring the victims received timely medical treatment.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm