ಬ್ರೇಕಿಂಗ್ ನ್ಯೂಸ್
02-06-26 04:18 pm HK News Staffer ಕರಾವಳಿ
ಮಂಗಳೂರು, ಜೂನ್ 2: ಕರ್ನಾಟಕ ವಿಧಾನಮಂಡಲದ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗಿದ್ದು, ಮುಂದಿನ ಆರು ತಿಂಗಳೊಳಗೆ ವಿಧಾನಸಭೆ ಮತ್ತು ವಿಧಾನಪರಿಷತ್ ಸಂಪೂರ್ಣವಾಗಿ ಕಾಗದರಹಿತ ವ್ಯವಸ್ಥೆಗೆ ಪರಿವರ್ತನೆಯಾಗಲಿವೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯ ವಿಧಾನಮಂಡಲ ಡಿಜಿಟಲ್ ಆಡಳಿತದತ್ತ ಮತ್ತೊಂದು ದೊಡ್ಡ ಹೆಜ್ಜೆ ಇಡುತ್ತಿದೆ.
ಇನ್ನು ಮುಂದೆ ಅಧಿವೇಶನದ ವೇಳೆ ಸದಸ್ಯರಿಗೆ ಮುದ್ರಿತ ಕಡತಗಳು, ಪ್ರಶ್ನೋತ್ತರ ಪಟ್ಟಿ, ಕಾರ್ಯಸೂಚಿ ಹಾಗೂ ವಿಧೇಯಕಗಳ ಪ್ರತಿಗಳನ್ನು ವಿತರಿಸುವ ಬದಲು, ಇನ್‌ಬಿಲ್ಟ್ ಅಪ್ಲಿಕೇಶನ್ ಹೊಂದಿರುವ ಐಪ್ಯಾಡ್‌ಗಳ ಮೂಲಕವೇ ಎಲ್ಲಾ ಮಾಹಿತಿಯನ್ನು ಒದಗಿಸಲಾಗುತ್ತದೆ. ಇದರಿಂದ ಕೋಟ್ಯಂತರ ರೂಪಾಯಿ ಮುದ್ರಣ ವೆಚ್ಚ ಉಳಿತಾಯವಾಗುವುದರ ಜೊತೆಗೆ ಪರಿಸರ ಸಂರಕ್ಷಣೆಯೂ ಸಾಧ್ಯವಾಗಲಿದೆ.
‘ನೆವಾ’ ಯೋಜನೆಯೊಂದಿಗೆ ಮಹತ್ವದ ಒಪ್ಪಂದ
ಡಿಜಿಟಲ್ ವಿಧಾನಮಂಡಲ ನಿರ್ಮಾಣಕ್ಕಾಗಿ ಕರ್ನಾಟಕ ವಿಧಾನಸಭೆ ಮತ್ತು ವಿಧಾನಪರಿಷತ್ ಜಂಟಿಯಾಗಿ ರಾಷ್ಟ್ರೀಯ ಇ-ವಿಧಾನ ಅಪ್ಲಿಕೇಶನ್ ಯೋಜನೆಯೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಈ ಯೋಜನೆಯ ಅನುಷ್ಠಾನ ಹಾಗೂ ಮೇಲ್ವಿಚಾರಣೆಯನ್ನು ನೆವಾ ಅಧಿಕಾರಿಗಳು ಮತ್ತು ರಾಜ್ಯ ಉಸ್ತುವಾರಿ ಸಮಿತಿ ನಿರ್ವಹಿಸಲಿದೆ.
ಬೆಂಗಳೂರು ವಿಧಾನಸೌಧ ಮತ್ತು ಬೆಳಗಾವಿಯ ಸುವರ್ಣಸೌಧದಲ್ಲಿನ ವಿಧಾನಸಭಾ ಕಲಾಪಗಳ ಡಿಜಿಟಲೀಕರಣಕ್ಕೆ 78 ಕೋಟಿ ರೂ. ಹಾಗೂ ವಿಧಾನಪರಿಷತ್ ಡಿಜಿಟಲೀಕರಣಕ್ಕೆ 52 ಕೋಟಿ ರೂ. ಸೇರಿದಂತೆ ಒಟ್ಟು 130 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಶೇಕಡಾ 60ರಷ್ಟು ಅನುದಾನ ನೀಡಲಿದೆ.
ಐಪ್ಯಾಡ್‌ನಲ್ಲೇ ಕಾರ್ಯಸೂಚಿ, ಪ್ರಶ್ನೋತ್ತರ, ವಿಧೇಯಕಗಳು
ಅಧಿವೇಶನದ ದಿನದ ಕಾರ್ಯಸೂಚಿ, ಪ್ರಶ್ನೋತ್ತರ ಪಟ್ಟಿ, ವಿಧೇಯಕಗಳು ಹಾಗೂ ಇತರೆ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸದಸ್ಯರಿಗೆ ಕಳುಹಿಸಲಾಗುತ್ತದೆ. ಇದರಿಂದ ದಾಖಲೆಗಳು ಕಳೆದುಹೋಗುವ ಸಾಧ್ಯತೆ ಕಡಿಮೆಯಾಗುವುದರ ಜೊತೆಗೆ ತ್ವರಿತ ಮಾಹಿತಿ ವಿನಿಮಯಕ್ಕೂ ನೆರವಾಗಲಿದೆ.
ಅಧಿವೇಶನದ ವೇಳೆ ಸದಸ್ಯರ ಮೇಜುಗಳಲ್ಲಿ ಐಪ್ಯಾಡ್‌ಗಳನ್ನು ಅಳವಡಿಸಲಾಗುತ್ತದೆ. ಕಲಾಪ ಮುಗಿದ ಬಳಿಕ ಅವುಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲಾಗುವುದು. ಈ ಹೊಸ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಲು ಎಲ್ಲ ಶಾಸಕರಿಗೂ ವಿಶೇಷ ತರಬೇತಿ ನೀಡಲು ಯೋಜಿಸಲಾಗಿದೆ.
ಡಿಜಿಟಲ್ ಹಾಜರಾತಿ ವ್ಯವಸ್ಥೆ;
ಶಾಸಕರ ಹಾಜರಾತಿ ವ್ಯವಸ್ಥೆಯನ್ನೂ ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಹಾಜರಾತಿ ದಾಖಲಾತಿ ಸೇರಿದಂತೆ ಹಲವು ಆಡಳಿತಾತ್ಮಕ ಪ್ರಕ್ರಿಯೆಗಳು ಆನ್‌ಲೈನ್ ಮೂಲಕವೇ ನಡೆಯಲಿವೆ.
ವಿಧಾನಸೌಧದಲ್ಲಿ ಮಾಹಿತಿ ಕಿಯೋಸ್ಕ್‌ಗಳು ;
ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಿಧಾನಸೌಧದ ವಿವಿಧ ಮಹಡಿಗಳಲ್ಲಿರುವ ಕಚೇರಿಗಳು, ಅಧಿಕಾರಿಗಳು ಹಾಗೂ ಸೇವೆಗಳ ಮಾಹಿತಿ ಒದಗಿಸಲು ವಿಶೇಷ ಡಿಜಿಟಲ್ ಮಾಹಿತಿ ಕೇಂದ್ರಗಳನ್ನು (Kiosks) ಅಳವಡಿಸಲು ವಿಧಾನಮಂಡಲದ ಐಟಿ ತಂಡ ಸಿದ್ಧತೆ ನಡೆಸಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am