ಬ್ರೇಕಿಂಗ್ ನ್ಯೂಸ್
08-06-26 09:21 pm HK News Staffer ಕರಾವಳಿ
ಮಂಗಳೂರು, ಜೂನ್ 8 : ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು. ರಸ್ತೆ ಗುಂಡಿಗಳಿಗೆ ಬಿದ್ದು ಮೃತಪಟ್ಟರೆ ಅದಕ್ಕೆ ಇಂಜಿನಿಯರ್ ಗಳನ್ನೇ ಹೊಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಎಚ್ಚರಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ಅವರು ಅಧಿಕಾರಿಗಳ ಸಭೆ ನಡೆಸಿದರು. ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಗಳು ರಸ್ತೆಯಲ್ಲಿ ನೀರು ನಿಲ್ಲುವ ಪ್ರಕರಣಗಳನ್ನು ಸಮನ್ವಯದಿಂದ ನಿರ್ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ವ್ಯಾಪ್ತಿ ಮೀರಿ ಕ್ರಮ ಕೈಗೊಳ್ಳಬೇಕು ಎಂದರು.
ಮಳೆಗಾಲದಲ್ಲಿ ರಸ್ತೆ ಹೊಂಡದಲ್ಲಿ ನೀರು ನಿಂತು ಅಪಘಾತಗಳಾಗಿ ಪ್ರಾಣ ಹಾನಿ ಸಂಭವಿಸಿದರೆ ಸಂಬಂಧಿಸಿದ ಇಂಜಿನಿಯರ್ ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ ಸಚಿವರು, ಪದೇ ಪದೇ ಹೊಂಡ ಮುಚ್ಚುವ ಕೆಲಸದ ಬದಲು ಶಾಶ್ವತ ಕಾಮಗಾರಿಗೆ ಒತ್ತು ನೀಡಲು ತಿಳಿಸಿದರು. ಮೆಸ್ಕಾಂ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಂಪರ್ಕ ನಿರ್ವಹಣೆಗೆ ಹೆಚ್ಚುವರಿ ಲೈನ್ ಮ್ಯಾನ್ ಮತ್ತು ವಾಹನಗಳನ್ನು ಒದಗಿಸಬೇಕು. ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದಲ್ಲಿ ಮಾನವ ನಿರ್ಮಿತ ಸಮಸ್ಯೆಗಳನ್ನು ತಗ್ಗಿಸಲು ಗಮನಹರಿಸಬೇಕು. ನೆರೆಯಿಂದ ರಸ್ತೆ ತಡೆಗಳನ್ನು ಆಯಾ ಸ್ಥಳೀಯ ಸಂಸ್ಥೆಗಳು ವಿಳಂಬಿಸದೆ ತೆರವುಗೊಳಿಸಬೇಕು. ಪರಿಹಾರ ಕ್ರಮಗಳನ್ನು ಕೈಗೊಳ್ಳುವಾಗ ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಯು ಟಿ ಖಾದರ್ ಸೂಚಿಸಿದರು. ತುರ್ತು ಸಂದರ್ಭಕ್ಕೆ ಟಾಸ್ಕ್ ಫೋರ್ಸ್ ಗಳನ್ನು ಸಕ್ರಿಯಗೊಳಿಸಬೇಕು. ಪ್ರತಿ ಗ್ರಾಮ ಪಂಚಾಯತ್ ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದವರು ತಿಳಿಸಿದರು.
ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರು ಮಳೆಗಾಲ ನಿರ್ವಹಣೆಗೆ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಸಭೆಗೆ ವಿವರಿಸಿದರು. ಸಭೆಯಲ್ಲಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಅಧೀಕ್ಷಕ ಅರುಣ್, ಡಿಸಿಎಫ್ ರವಿಶಂಕರ್, ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಇದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am