ಬ್ರೇಕಿಂಗ್ ನ್ಯೂಸ್
11-06-26 06:37 pm HK News Staffer ಕರಾವಳಿ
ಉಡುಪಿ, ಜೂನ್ 11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12ರಂದು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಭಕ್ತರಿಗೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.
ಸಿಎಂ ವಿಜಯ್ ಅವರು ಶುಕ್ರವಾರ ಮಧ್ಯಾಹ್ನ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಂಚರಿಸುವ ಮಾರ್ಗ, ದೇವಸ್ಥಾನದ ಪ್ರವೇಶ ದ್ವಾರ ಹಾಗೂ ದೇವಾಲಯದ ಆವರಣದಾದ್ಯಂತ ಬಿಗಿ ಬಂದೋಬಸ್ತು ಏರ್ಪಡಿಸಲಾಗಿದೆ. ಭದ್ರತಾ ಕಾರಣಗಳಿಂದಾಗಿ ಸಾಮಾನ್ಯ ಭಕ್ತರ ಪ್ರವೇಶ ಹಾಗೂ ದರ್ಶನ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.
ಮುಖ್ಯಮಂತ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ತಕ್ಷಣವೇ ಹಿಂತಿರುಗಲಿದ್ದು, ಯಾವುದೇ ಸಾರ್ವಜನಿಕ ಸಭೆ, ಅಭಿಮಾನಿಗಳ ಭೇಟಿ ಅಥವಾ ವಿಶೇಷ ಕಾರ್ಯಕ್ರಮಗಳಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಭದ್ರತಾ ದೃಷ್ಟಿಯಿಂದ ವಾಹನಗಳ ಕಾನ್ವಾಯ್ ಸಾಗುವ ಮಾರ್ಗದಲ್ಲಿ ಹಾಗೂ ದೇವಸ್ಥಾನದ ಸುತ್ತಮುತ್ತ ಸಾರ್ವಜನಿಕರು ಗುಂಪುಗೂಡದಂತೆ ಸೂಚಿಸಲಾಗಿದೆ.
ವಿಶೇಷ ಭದ್ರತಾ ಕ್ರಮಗಳ ಕಾರಣ ಮಧ್ಯಾಹ್ನ 12ರಿಂದ ಸಂಜೆ 5 ಗಂಟೆಯವರೆಗೆ ದರ್ಶನಕ್ಕೆ ಬರುವ ಭಕ್ತರು ಅನಾನುಕೂಲ ಎದುರಿಸುವ ಸಾಧ್ಯತೆ ಇದ್ದು, ಸಾಧ್ಯವಾದರೆ ಆ ಸಮಯವನ್ನು ತಪ್ಪಿಸಿ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಸಿಎಂ ವಿಜಯ್ ಅವರ ಮೊದಲ ಕೊಲ್ಲೂರು ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಪರಿಸರದಲ್ಲಿ ಕಟ್ಟುನಿಟ್ಟಿನ ಭದ್ರತಾ ವಲಯ ನಿರ್ಮಾಣವಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ ಸಹಕರಿಸುವಂತೆ ಮನವಿ ಮಾಡಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm