ಬ್ರೇಕಿಂಗ್ ನ್ಯೂಸ್
14-06-26 02:37 pm HK News Staffer ಕರಾವಳಿ
ಮಂಗಳೂರು, ಜೂನ್ 14 : ಕೇಂದ್ರ ಸರ್ಕಾರವು, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋ.ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಈ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 14 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 82.94 ಕಿ. ಮೀ. ಉದ್ದದ ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆ ಈ ಅನುದಾನದ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಮಂಗಳೂರು, ಉಳ್ಳಾಲ, ಮೂಡುಬಿದ್ರೆ, ಪುತ್ತೂರು ಬಂಟ್ವಾಳ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿಯೂ ನಿಗದಿತ ರಸ್ತೆಗಳ ಅಭಿವೃದ್ದಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದರು ಮಾಹಿತಿ ನೀಡಿದ್ದಾರೆ.
ರಸ್ತೆಗಳ ಅಭಿವೃದ್ಧಿ ಕಾಮಗಾರಿ
ರಸ್ತೆ ನವೀಕರಣ ಮತ್ತು ಅಗಲೀಕರಣ ಕಾಮಗಾರಿ
ಎಕ್ಸಲೆಂಟ್ ಕಾಲೇಜಿನಿಂದ ಮೂಡಬಿದ್ರೆ ಪೊಲೀಸ್ ಸ್ಟೇಷನ್ ರಸ್ತೆಯ ವರೆಗಿನ ಬೆಳ್ತಂಗಡಿ- ಮೂಡಬಿದಿರೆ- ಮುಲ್ಕಿ ರಾಜ್ಯ ಹೆದ್ದಾರಿ ನವೀಕರಣ (5 ಕಿ.ಮೀ) ರೂ. 5 ಕೋಟಿ.
ಸೋಮಂತಡ್ಕದಿಂದ ಹೆಡ್ಯ ವರೆಗಿನ (NH-275 ರಿಂದ SH-276 ಸಂಪರ್ಕಿಸುವ) ಹೆದ್ದಾರಿ ಅಭಿವೃದ್ಧಿ (5.50 ಕಿ.ಮೀ)– ರೂ. 5 ಕೋಟಿ. ಬಂಟ್ವಾಳದ ಅನಂತಾಡಿ- ಮಂಗಿಲಪದವು- ಕೊಡಪದವು ಜಿಲ್ಲಾ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ (3 ಕಿ.ಮೀ) – ರೂ. 5.00 ಕೋಟಿ.
ಒಟ್ಟಾರೆ ಈ ಯೋಜನೆಯಡಿ ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳ ಬಲವರ್ಧನೆ, ಸುಗಮ ಸಂಚಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಈ ಬೃಹತ್ ಅನುದಾನ ಮಂಜೂರು ಮಾಡಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿರುವ ಈ ಯೋಜನೆಗೆ ಅನುದಾನ ಮಂಜೂರು ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು. ಪ್ರಮುಖ ರಸ್ತೆಗಳ ಸುಧಾರಣೆ ಕಾಮಗಾರಿ ಪೂರ್ಣಗೊಂಡ ಬಳಿಕ ಜಿಲ್ಲೆಯ ಆರ್ಥಿಕ, ಶೈಕ್ಷಣಿಕ ಮತ್ತು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಸಂಸದ ಕ್ಯಾ.ಚೌಟ ವಿವರಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm