ಬ್ರೇಕಿಂಗ್ ನ್ಯೂಸ್
18-06-26 12:33 pm HK News Staffer ಕರಾವಳಿ
ಮಂಗಳೂರು, ಜೂನ್ 18: ನಗರದ ಬಿಜೈ ನ್ಯೂರೋಡ್, ಬಟ್ಟಗುಡ್ಡೆ, ಕದ್ರಿ, ಚಿಲಿಂಬಿ ಸೇರಿದಂತೆ ಕೆಲವು ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು ಆಗಿದ್ದರಿಂದ ಹಲವು ಸಾರ್ವಜನಿಕರ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದು ಶಾಸಕ ವೇದವ್ಯಾಸ ಕಾಮತ್ ಅವರು ರಾಜ್ಯ ಕಾಂಗ್ರೆಸ್ ನೇತೃತ್ವದ ಪಾಲಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರದೇಶಗಳ ಬಹುತೇಕ ಮನೆ ಹಾಗೂ ಅಪಾರ್ಟ್‌ಮೆಂಟ್ ಗಳಿಗೆ, ನೀಲಿ ಬಣ್ಣದಿಂದ ಕೂಡಿದ ವಾಸನೆ ಮಿಶ್ರಿತ ನೀರು ಸರಬರಾಜಾಗಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ಈ ನೀರನ್ನು ಕುಡಿದ ಅವರಲ್ಲಿ ವಾಂತಿ, ಜ್ವರ, ಭೇದಿ, ಸಹಿಸಲು ಆಗದ ಸುಸ್ತು ಸೇರಿದಂತೆ ಆರೋಗ್ಯದಲ್ಲಿ ತೀವ್ರ ಸಮಸ್ಯೆಯಾಗಿದೆ. ಪಂಪ್‌ವೆಲ್ ಬಯೋಟೆಕ್ ಲ್ಯಾಬೋರೇಟರಿ ಹಾಗೂ ಬಿಜೈ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಡಿದ ಪರೀಕ್ಷೆಯ ನಂತರ ಈ ನೀರು ಕುಡಿಯಲು ಯೋಗ್ಯ ಅಲ್ಲವೇ ಅಲ್ಲ ಎಂಬ ವರದಿ ಬಂದಿರುವುದು ಮತ್ತಷ್ಟು ಜನರ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಯಾವುದೇ ಕಾರಣಕ್ಕೂ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ಸಿಗದಂತೆ ಅಧಿಕಾರಿಗಳು ಪ್ರಯತ್ನಿಸಿದ್ದು ಯಾಕೆ ಎಂದು ಶಾಸಕರು ಕಳವಳ ವ್ಯಕ್ತಪಡಿಸಿದರು.
ರಾಜ್ಯದ ಆರೋಗ್ಯ ಸಚಿವರು ನಮ್ಮದೇ ಜಿಲ್ಲೆಯವರಾಗಿದ್ದರೂ ಕೂಡಾ ನಮ್ಮ ಜನರಿಗೆ ಆರೋಗ್ಯದ ಬಗ್ಗೆ ಗ್ಯಾರಂಟಿ ಒದಗಿಸಲು ಸಾಧ್ಯವಾಗಿಲ್ಲದಿರುವುದು ದುರಂತ. ಸದ್ಯ ಪಾಲಿಕೆಯಲ್ಲಿ ಯಾವುದೇ ಜನಪ್ರತಿನಿಧಿಗಳು ಇಲ್ಲದೇ ಆಡಳಿತಾಧಿಕಾರಿ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸುತ್ತಿದೆ. ಹಾಗಿರುವಾಗ ಜನರ ಸಮಸ್ಯೆ ಕೇಳುವವರೇ ಇಲ್ಲವಾಗಿದೆ. ಸರ್ಕಾರದ, ಪಾಲಿಕೆಯ ಬೇಜವಾಬ್ದಾರಿಗೆ ಜನರು ತೊಂದರೆ ಅನುಭವಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಕೂಡಲೇ ಇದರ ಹಿಂದಿನ ಕಾರಣ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜನರು ಈಗಾಗಲೇ ತಮ್ಮ ಮನೆಯ, ಅಪಾರ್ಟ್‌ಮೆಂಟ್ ಗಳ ಟಾಂಕಿಯಲ್ಲಿನ ಕಲುಷಿತ ನೀರನ್ನು ಚೆಲ್ಲಿದ್ದು, ಕೂಡಲೇ ಅವರಿಗೆ ಶುದ್ಧ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಶಾಸಕರು ಆಗ್ರಹಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm