ಬ್ರೇಕಿಂಗ್ ನ್ಯೂಸ್
20-06-26 10:25 pm HK News Staffer ಕರಾವಳಿ
ಪುತ್ತೂರು, ಜೂನ್ 20: ಮೈಸೂರಿನಲ್ಲಿ ನಡೆಯುವ ವಿಶ್ವಪ್ರಸಿದ್ದ ದಸರಾಗೆ ಈ ಬಾರಿ ಕಂಬಳ ನಡೆಸುವಂತೆ ಮತ್ತು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಶಾಸಕ ಅಶೋಕ್ ರೈ ಅವರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕಂಬಳ ನಡೆಸುವ ಮೂಲಕ ಕಂಬಳ ಕ್ರೀಡೆಯನ್ನು ಜಗತ್ತಿಗೆ ಪರಿಚಯಿಸಿದ ಮತ್ತು ಯಶಸ್ವಿಯಾಗಿ ಕಂಬಳ ನಡೆಸಿದ ಖ್ಯಾತಿ ಅಶೋಕ್ ರೈ ಅವರಿಗಿದೆ. ಕಳೆದ ಬಾರಿ ಪುತ್ತೂರಿಗೆ ಬಂದಿದ್ದ ಡಿಕೆ ಶಿವಕುಮಾರ್ ಅವರು ಮೈಸೂರು ದಸರಾದಲ್ಲಿ ಕಂಬಳ ನಡೆಸುವ ಬಗ್ಗೆ ಮಾತನಾಡಿದ್ದರು. ಇದೀಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಅಶೋಕ್ ರೈಯವರಿಗೆ ಕಂಬಳ ನಡೆಸಲು ಸೂಚನೆ ನೀಡಿದ್ದಾರೆ. ಈ ಬಾರಿ ಮೈಸೂರು ದಸರಾ ವೇಳೆ ಕಂಬಳ ನಡೆಯಲಿದೆ. ಈಗಾಗಲೇ ಒಂದು ಸುತ್ತಿನ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಮೈಸೂರಿನ ಜಯಲಕ್ಷ್ಮೀ ಪುರಂನ ಪ್ರೀಮಿಯರ್ ಸ್ಟುಡಿಯೋ ಬಳಿ ಇರುವ ಸುಮಾರು 17 ಎಕ್ರೆ ಜಾಗದಲ್ಲಿ ಕಂಬಳ ನಡೆಯಲಿದೆ. ಅಕ್ಟೋಬರ್ ತಿಂಗಳ 18, 19 ರಂದು ಎರಡು ದಿನ ಕಂಬಳ ನಡೆಯಲಿದೆ. ಕಂಬಳ ನಡೆಸುವ ಬಗ್ಗೆ ಸಿಎಂ ಸೂಚನೆಯಂತೆ ಮೈಸೂರಿನಲ್ಲಿ ಅಧಿಕಾರಿಗಳ ಸಭೆ ನಡೆದಿದೆ. ಸಭೆಯಲ್ಲಿ ಜಿಲ್ಲೆಯ ಕಂಬಳ ಪ್ರಮುಖರು ಭಾಗವಹಿಸಿದ್ದರು ಎಂದು ಅಶೋಕ್ ರೈ ತಿಳಿಸಿದ್ದಾರೆ.
ಎರಡನೇ ಹಂತದ ಸಭೆ ಮುಂದಿನ ಗುರುವಾರ ಮೈಸೂರಿನಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಶಾಸಕ ಅಶೋಕ್ ರೈ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸಹಿತ ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕಳೆದ ಬಾರಿ ಮೈಸೂರು ದಸರಾಗೆ ಕಂಬಳ ನಡೆಸುವಂತೆ ಡೆಪ್ಯುಟಿ ಸಿಎಂ ಆಗಿದ್ದ ಡಿಕೆಶಿಯವರು ಕೇಳಿಕೊಂಡಿದ್ದರು, ಬಳಿಕ ಕೊನೇ ಹಂತದಲ್ಲಿ ಕೈಬಿಡಲಾಗಿತ್ತು. ಈ ಬಾರಿ ಕಂಬಳ ನಡೆಸುವಂತೆ ಸಿಎಂ ಆಗಿರುವ ಡಿಕೆಶಿ ಸೂಚನೆ ನೀಡಿದ್ದಾರೆ. ಕಂಬಳ ಖಂಡಿತವಾಗಿಯೂ ನಡೆಯಲಿದೆ. ಜಾಗವನ್ನು ನಿಗದಿಪಡಿಸಲಾಗಿದೆ. ಬೆಂಗಳೂರಿನ ಕಂಬಳದಂತೆ ಮೈಸೂರು ದಸರಾ ಕಂಬಳ ವಿಶ್ವ ವಿಖ್ಯಾತಿ ಪಡೆಯಲಿದ್ದು ತುಳು ನಾಡಿನ ಜನಪದ ಕ್ರೀಡೆಯನ್ನು ಜಗತ್ತಿಗೆ ಪರಿಚಯಿಸಿದ ಹೆಮ್ಮೆ ನಮಗೆ ಸಿಗಲಿದೆ ಎಂದಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm