ಬ್ರೇಕಿಂಗ್ ನ್ಯೂಸ್
05-07-26 09:34 pm HK News Staffer ಕರಾವಳಿ
ಮಂಗಳೂರು, ಜುಲೈ 5: ಉನ್ನತ ಶಿಕ್ಷಣಕ್ಕಾಗಿ ಜರ್ಮನಿಗೆ ತೆರಳಿದ್ದ ಮಂಗಳೂರು ಮೂಲದ 21 ವರ್ಷದ ವಿದ್ಯಾರ್ಥಿಯೊಬ್ಬ ಚಾರಣಕ್ಕೆ ತೆರಳಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರಂತ ಘಟನೆ ಜರ್ಮನಿಯ ಲೀಪ್‌ಜಿಗ್ ಪ್ರಾಂತ್ಯದಲ್ಲಿ ನಡೆದಿದೆ.
ಮಂಗಳೂರಿನ ಮರಕಡ- ಕುಂಜತ್‌ಬೈಲ್ ನಿವಾಸಿ ಮೊಹಮ್ಮದ್ ಅನಿಜ್ ಅಬೂಬಕ್ಕರ್ (21) ಮೃತಪಟ್ಟ ದುರ್ದೈವಿ. ಈತ ಜರ್ಮನಿಯ ಹಾಲೆಯ ರಹ್ ಶಿಕ್ಷಣ ಸಂಸ್ಥೆಯಲ್ಲಿ ಬಿಬಿಎ ಮೂರನೇ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಸದ್ಯ ಘಟನೆಗೆ ಸಂಬಂಧಿಸಿದಂತೆ ಜರ್ಮನಿಯ ಸ್ಥಳೀಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮೃತನ ಜೊತೆಯಲ್ಲಿದ್ದ ಇಬ್ಬರು ಭಾರತೀಯರು ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಹಾಗೂ ರಾಯಭಾರ ಕಚೇರಿಯ ಮೂಲಗಳ ಪ್ರಕಾರ, ಜುಲೈ 2ರ ಬೆಳಗ್ಗೆ ಅನಿಜ್ ತನ್ನ ಸಹಪಾಠಿಗಳೊಂದಿಗೆ ಲೀಪ್‌ಜಿಗ್ ಹೊರವಲಯದಲ್ಲಿ ಟ್ರಕ್ಕಿಂಗ್ ಹೊರಟಿದ್ದ. ಚಾರಣ ಮುಗಿದ ಬಳಿಕ ಸ್ನೇಹಿತರೊಂದಿಗೆ ಜೊತೆಗೂಡಿದ ಲೀಪ್‌ಜಿಗ್‌ನ 'ರೆಡ್ ಬುಲ್ ಅರೆನಾ' ಕ್ರೀಡಾಂಗಣದ ಬಳಿ ನೀರಿನಲ್ಲಿ ಆಡಲು ತೆರಳಿದ್ದರು. ಅಲ್ಲಿ ಮೋಜು-ಮಸ್ತಿ ಮಾಡುತ್ತಿದ್ದಾಗ ಹಠಾತ್ ಆಗಿ ಅನಿಜ್ ನಾಪತ್ತೆಯಾಗಿದ್ದಾನೆ.
ಯುವಕ ಕಾಣೆಯಾಗಿರುವುದು ಬೆಳಕಿಗೆ ಬರುತ್ತಿದ್ದಂತೆ ಸ್ನೇಹಿತರು ಲ್ಯಾಂಡೌರ್ ಸೇತುವೆ ಪ್ರದೇಶದ ತುರ್ತು ಸೇವೆಗಳ ವಿಭಾಗಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಜರ್ಮನಿಯ ವಿಪತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸಿ, ನೀರಿನಲ್ಲಿ ಮುಳುಗಿದ್ದ ಅನಿಜ್ ಶವವನ್ನು ಹೊರತೆಗೆದಿವೆ. ಮೃತ ಅನಿಜ್ ತಂದೆ ಮರಕಡ ಅಬೂಬಕ್ಕರ್ ಸಿದ್ದಿಕ್ ಪ್ರಸ್ತುತ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾರೆ. ಮಗನ ಸಾವಿನ ಸುದ್ದಿಯಿಂದ ಇಡೀ ಕುಟುಂಬ ಆಘಾತಕ್ಕೆ ಒಳಗಾಗಿದೆ.
A young man from Mangaluru, who had moved to Germany for higher education, died after reportedly falling during a trekking expedition. Authorities in Germany have launched an investigation into the incident and are questioning the four friends who accompanied him on the trek.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm