ಬ್ರೇಕಿಂಗ್ ನ್ಯೂಸ್
07-07-26 11:13 pm HK News Staffer ಕರಾವಳಿ
ಉಳ್ಳಾಲ, ಜು. 7: ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಆರೋಪಗಳ ಬಗ್ಗೆ ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳು ಮೌನ ವಹಿಸಿರುವುದು ಏಕೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಉಳ್ಳಾಲ್ ಪ್ರಶ್ನಿಸಿದ್ದಾರೆ.
ಉಳ್ಳಾಲ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಹಿಂದೂಗಳ ಅಸ್ಮಿತೆ ಮತ್ತು ಧಾರ್ಮಿಕ ಭಾವನೆಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ, ರಾಮಮಂದಿರಕ್ಕೆ ಸಂಬಂಧಿಸಿದ ಆರೋಪಗಳ ವಿಚಾರದಲ್ಲಿ ಮೌನವಾಗಿದೆ. ಮಂದಿರವನ್ನೇ ರಕ್ಷಿಸಲು ಸಾಧ್ಯವಾಗದವರು ದೇಶವನ್ನು ಹೇಗೆ ರಕ್ಷಿಸುತ್ತಾರೆ?" ಎಂದು ಪ್ರಶ್ನಿಸಿದರು.
ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಶಿಲಾನ್ಯಾಸ ಹಾಗೂ ಪ್ರಾಣಪ್ರತಿಷ್ಠೆ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ನೆರವೇರಿಸಿದ್ದರೂ, ಇದೀಗ ಅಲ್ಲಿನ ಅವ್ಯವಹಾರಗಳ ಆರೋಪಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಟೀಕಿಸಿದರು.
"ಕಾಂಗ್ರೆಸ್ ಪಕ್ಷ ಎಂದಿಗೂ ಅಯೋಧ್ಯೆ ಅಥವಾ ಶ್ರೀರಾಮನ ವಿರುದ್ಧ ಇರಲಿಲ್ಲ. ನ್ಯಾಯಾಂಗದ ತೀರ್ಪನ್ನು ಗೌರವಿಸಿ ರಾಮಮಂದಿರ ನಿರ್ಮಾಣವನ್ನು ಸ್ವಾಗತಿಸಿದೆ. ಆದರೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ನಿರ್ಮಾಣವಾದ ಪವಿತ್ರ ಕ್ಷೇತ್ರದಲ್ಲೇ ಇಂತಹ ಆರೋಪಗಳು ಕೇಳಿಬರುತ್ತಿರುವುದು ವಿಷಾದನೀಯ," ಎಂದರು.
ದೇವಸ್ಥಾನದಿಂದ ಬ್ಯಾಂಕ್‌ಗೆ ಸಾಗಿಸಲಾಗುತ್ತಿದ್ದ ಹಣದ ಕಟ್ಟಿನಿಂದ ನೋಟುಗಳನ್ನು ಕಳವು ಮಾಡಲಾಗಿದೆ ಎಂಬ ಆರೋಪಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ, ಯಾವುದೇ ಪ್ರಭಾವಕ್ಕೆ ಒಳಗಾಗದೆ ಸಮಗ್ರ ತನಿಖೆ ನಡೆಸಿ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ಹಿಂದೂಗಳ ಧಾರ್ಮಿಕ ಭಾವನೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡವರೇ ಈಗ ಭಕ್ತರ ನಂಬಿಕೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದ ಅವರು, ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ನೀಡಿರುವ ಹೇಳಿಕೆಗಳನ್ನೂ ಉಲ್ಲೇಖಿಸಿ, ಹಲವು ಏಜೆಂಟರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಪ್ಪಿತಸ್ಥರ ವಿರುದ್ಧ ಯಾವುದೇ ಹಿಂಜರಿಕೆಯಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದನ್ನು ಸಾಬೀತುಪಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಉಳ್ಳಾಲ ನಗರಸಭೆಯ ಮಾಜಿ ಉಪಾಧ್ಯಕ್ಷ ದಿನೇಶ್ ರೈ ಮಾತನಾಡಿ, "ಹಿಂದೂಗಳ ಬಗ್ಗೆ ಮಾತನಾಡುವ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಇತರ ಹಿಂದೂ ಸಂಘಟನೆಗಳ ನಾಯಕರು ಈ ವಿಚಾರದಲ್ಲಿ ಯಾಕೆ ಮೌನವಾಗಿದ್ದಾರೆ? ಧಾರ್ಮಿಕ ಭಾವನೆಗಳನ್ನು ಮುಂದಿಟ್ಟು ರಾಜಕೀಯ ಮಾಡಿದ್ದ ಬಿಜೆಪಿ, ಇದೀಗ ಅಯೋಧ್ಯೆಯಲ್ಲೇ ಹಗರಣದ ಆರೋಪಗಳು ಕೇಳಿಬಂದರೂ ಮಾತನಾಡುತ್ತಿಲ್ಲ. ಬಿಜೆಪಿ ನೇತೃತ್ವದ ಟ್ರಸ್ಟ್‌ನಲ್ಲೇ ಈ ಆರೋಪಗಳು ಕೇಳಿಬಂದಿದ್ದು, ಉತ್ತರ ಪ್ರದೇಶ ಸರ್ಕಾರ ಕೂಡ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು," ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ ಹಾಗೂ ಉಳ್ಳಾಲ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ ಉಪಸ್ಥಿತರಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm