ಬ್ರೇಕಿಂಗ್ ನ್ಯೂಸ್
12-08-20 06:53 am Headline Karnataka News Network ಕರಾವಳಿ
ಉಡುಪಿ, ಆಗಸ್ಟ್ 12: ಇದು ಪೂರ್ವನಿಯೋಜಿತ ಷಡ್ಯಂತ್ರ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಯಿ ಅಭಿಪ್ರಾಯ ಪಟ್ಟಿದ್ದಾರೆ. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದು ಕಾನೂನು ಸುವ್ಯವಸ್ಥೆ ಹದಗೆಡಿಸಲು ಪ್ರಯತ್ನಮಾಡಿದ್ದಾರೆ.
ರಾಜ್ಯ ಶಾಂತವಾಗಿದೆ ಇದನ್ನು ಸಹಿಸದ ಸಮಾಜಘಾತಕ ಶಕ್ತಿಗಳು ಸಂದರ್ಭದ ಉಪಯೋಗ ಮಾಡಿದ್ದಾರೆ ಎಂದು ಅವರು ಸಂಗ್ರಹವಾಗುತ್ತಿದೆ. ಬೆಂಗಳೂರು ಕೆ ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಮಾಜ ಸ್ವಾಸ್ಥ್ಯ ಹದಗೆಡಿಸಲು ಪ್ರಯತ್ನ ಮಾಡಿದ್ದಾರೆ. ನಿಯಂತ್ರಣ ಸಂಪೂರ್ಣ ತಪ್ಪಿದಾಗ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಮನಸೋಇಚ್ಛೆ ವರ್ತಿಸಿದಾಗ ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಲಾಗಿದೆ ಎಂದು ಅವರು ಸ್ಪಷ್ಟ ಪಡಿಸಿದರು.
ಮೂರು ಜನ ಗೋಲಿಬಾರ್ ನಲ್ಲಿ ಅಸುನೀಗಿದ್ದಾರೆ. ಪೊಲೀಸರಿಗೂ ಕಲ್ಲುತೂರಾಟದಲ್ಲಿ ಗಾಯಗಳಾಗಿವೆ. ಓರ್ವ ಪೊಲೀಸ್ ಸಿಬ್ಬಂದಿ ತಲೆಗೆ ಗಂಭೀರ ಗಾಯವಾಗಿದೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಅವರು ಹೇಳಿದರು.
ಈ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 110 ಜನ ಬಂಧನವಾಗಿದೆ. ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರಥಮ ಆದ್ಯತೆ ನೀಡಲಾಗುವುದು. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡುತ್ತಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಗೃಹ ಕಾರ್ಯದರ್ಶಿ ನಿರಂತರ ಸಂಪರ್ಕದಲ್ಲಿ ಇದ್ದಾರೆ.
ಗಲಭೆ ನಡೆದ ಪ್ರದೇಶಕ್ಕೆ 6 ಕಂಪನಿ ಸಿ ಆರ್ ಪಿ ಎಫ್ ಬರ್ತಾ ಇದೆ. ಮೂರು ಹೈದರಾಬಾದಿನ ಮೂರು ಚೆನ್ನೈನಿಂದ ಬರ್ತಾ ಇದೆ. ಆರು ಕಂಪನಿಯನ್ನು ಎಲ್ಲಿ ಡಿಪ್ಲೈ ಮಾಡಬೇಕು ಅನ್ನೋದನ್ನ ಪೊಲೀಸ್ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ರಾಪಿಡ್ ಅಕ್ಷನ್ ಫೋರ್ಸ್ ಬರ್ತಾಯಿದೆ. ಗರುಡ ಫೋರ್ಸ್ ಕೂಡ ಸ್ಥಳದಲ್ಲಿದೆ. ಎರಡು ಪ್ರದೇಶ ಸಂಪೂರ್ಣ ಪೊಲೀಸರ ಹತೋಟಿಯಲ್ಲಿದೆ ಎಂದು ಅವರು ಹೇಳಿದರು.
ಈ ಗಲಭೆ ಪ್ರಕರಣಕ್ಕೆ ಸಂಬಂಧಿಸುದಂತೆ ಇನ್ನಷ್ಟು ಬಂಧನ ಆಗೋದು ಬಾಕಿ ಇದೆ. ಈ ಪುಂಡರ ಹಿಂದೆ ಯಾರಿದ್ದಾರೆ ಅನ್ನೋದನ್ನ ತನಿಖೆ ಮಾಡುತ್ತೇವೆ. ಸಿಎಂ ಜೊತೆ ಬೆಳಿಗ್ಗೆ ಚರ್ಚೆ ಮಾಡಿದ್ದೇನೆ. ಮಧ್ಯಾಹ್ನ ಸಿಎಂ ಮತ್ತು ಹಿರಿಯ ಅಧಿಕಾರಿ ಜೊತೆ ಮತ್ತೊಂದು ಸುತ್ತಿನ ಚರ್ಚೆ ಇದೆ. ಸಿಸಿ ಕ್ಯಾಮರ ದಾಖಲೆ ಪೊಲೀಸ್ ಠಾಣೆಯ ದಾಖಲೆ ಸಂಗ್ರಹಿಸುತ್ತೇವೆ. ಪುಂಡಾಟಿಕೆ ಮುಂಚೂಣಿ ಯಲ್ಲಿದ್ದವರು ಮಾಹಿತಿ ಸಂಗ್ರಹವಾಗುತ್ತಿದೆ. ಫೇಸ್ಬುಕ್ ನಲ್ಲಿ ಚರ್ಚೆ ಮಾಡಿ ಗಲಭೆಗೆ ಕರೆ ಕೊಟ್ಟಿದ್ದಾರೆ. ಕೆ ಜಿ ಹಳ್ಳಿ ಗಲಭೆ ಪ್ಲಾನ್ ಮಾಡಿ ಕೃತ್ಯ ಎಸಗಿದ್ದಾರೆ ಎಂದು ಅವರು ತಿಳಿಸಿದರು.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm