ಬ್ರೇಕಿಂಗ್ ನ್ಯೂಸ್
25-07-26 07:32 pm HK News Staffer ಕರಾವಳಿ
ಮಂಗಳೂರು, ಜುಲೈ 25 : ವಿಶೇಷ ಸಮಗ್ರ ಪರಿಷ್ಕರಣೆಯಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದಿಲ್ಲ ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಎಸ್ ಐ ಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕ ಬೇಡ. ಎಸ್ ಐ ಆರ್ ನಂತರ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕೈ ಬಿಟ್ಟು ಹೋದರೆ, ನಮೂನೆ 6 ಸಲ್ಲಿಸುವ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಮತದಾರರಿಗೆ ಈಗಾಗಲೇ ಎನ್ಯುಮರೇಷನ್ ಫಾರಂ ಗಳನ್ನು ವಿತರಿಸಲಾಗಿದೆ. ಮತದಾರರಿಂದ ಎನ್ಯುಮರೇಷನ್ ಫಾರಂ ಪಡೆದ ಬಳಿಕ ಅವುಗಳ ಡಿಜಿಟೈಸ್ ಪ್ರಕ್ರಿಯೆ ತ್ವರಿತಗೊಳಿಸಬೇಕು. ಮತದಾರರು ನಿಗದಿತ ಅವಧಿಯಲ್ಲಿ ಫಾರಂ ಹಿಂದಿರುಗಿಸಲು ಸಾಧ್ಯವಾಗದಿದ್ದರೆ, ಅಂತಿಮ ಮತದಾರರ ಪಟ್ಟಿ ಪ್ರಕಟವಾದ ನಂತರ ಫಾರಂ 6 ಸಲ್ಲಿಸಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ನಿಗದಿತ ದಾಖಲೆಗಳು ಹಾಗೂ ಡಿಕ್ಲರೇಶನ್ ಸಲ್ಲಿಸಬೇಕಾಗಿದೆ ಎಂದು ಅವರು ತಿಳಿಸಿದರು.
ಮತದಾರರ ಗೈರು, ಸ್ಥಳಾಂತರ, ಮರಣ, ಡುಪ್ಲಿಕೇಟ್ (ASDD) ಪ್ರಕರಣಗಳನ್ನು ಸಮಗ್ರವಾಗಿ ಪರಿಶೀಲಿಸಿ ಮಹಜರ್ ಮಾಡಬೇಕು. ಇದರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಏಜೆಂಟರಿಗೂ ನೀಡಬೇಕು. ಇದರಲ್ಲಿ ಬದಲಾವಣೆ ಅಗತ್ಯವಿದ್ದರೆ ಪರಿಶೀಲಿಸಿ ವಿವರ ನಮೂದಿಸಬೇಕು ಎಂದು ಅನ್ಬುಕುಮಾರ್ ಹೇಳಿದರು. ಡಿಜಿಟೈಸ್ ಪ್ರಕ್ರಿಯೆ ತ್ವರಿತವಾಗಿ ಮುಗಿಸಿದರೆ, ಕರಡು ಮತದಾರರ ಪಟ್ಟಿಯ ಪ್ರಕಟಣೆಗೆ ಸಿದ್ಧತೆ ಮಾಡಿಕೊಳ್ಳಲು ನೆರವಾಗಲಿದೆ. ಈ ನಿಟ್ಟಿನಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಸಂಬಂಧಿತ ಅಧಿಕಾರಿಗಳು ಗಮನಹರಿಸಬೇಕು ಎಂದು ರಾಜ್ಯ ಚುನಾವಣಾಧಿಕಾರಿಗಳು ತಿಳಿಸಿದರು.
ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18,03,766 ಮತದಾರರಿದ್ದು, ಎಲ್ಲರಿಗೂ ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. ಈ ಪೈಕಿ 14,97,139 ಫಾರಂಗಳನ್ನು ಡಿಜಿಟೈಸ್ ಮಾಡಿ, ಶೇಕಡಾ 83 ರಷ್ಟು ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು. ಇದುವರೆಗೆ ಜಿಲ್ಲೆಯಲ್ಲಿ 65588 ಮತದಾರರನ್ನು ASDD ಎಂದು ಗುರುತಿಸಲಾಗಿದೆ. ಮತದಾರರಿಗೆ ನೆರವಾಗಲು ಜಿಲ್ಲೆಯಲ್ಲಿ 1098 ಸೌಲಭ್ಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಟೋಲ್ ಫ್ರೀ ಸಂಖ್ಯೆ 1950 ಸಹಾಯವಾಣಿ ತೆರೆಯಲಾಗಿದ್ದು, ಮತದಾರರ ಪ್ರಶ್ನೆ ಮತ್ತು ಸಂಶಯಗಳಿಗೆ ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ ರಾಜು, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ನಂತರ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಪಿತಾನಿಯೋ ಶಾಲೆ ಮತಗಟ್ಟೆಗೆ ಭೇಟಿ ನೀಡಿ ಎಸ್ ಐ ಆರ್ ಪ್ರಕ್ರಿಯೆ ಪರಿಶೀಲಿಸಿದರು. ಬಿ ಎಲ್ ಒ ಗಳು ಪಡೆದ ಎನ್ಯುಮರೇಷನ್ ಫಾರಂ ಗಳನ್ನು ಪರಿಶೀಲಿಸಿ ಸಲಹೆ ಸೂಚನೆ ನೀಡಿದರು. ಮತಗಟ್ಟೆಯಲ್ಲಿ ಮತದಾರರಿಗೆ ಏರ್ಪಡಿಸಿದ ಸೌಲಭ್ಯ ಮತ್ತು ಸಿದ್ಧತೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳೂರು ಉಪ ವಿಭಾಗದಿಕಾರಿ ಮೀನಾಕ್ಷಿ ಆರ್ಯ, ಮಹಾನಗರ ಪಾಲಿಕೆ ಉಪ ಆಯುಕ್ತೆ ಅಕ್ಷತಾ ಮತ್ತಿತರರು ಈ ಸಂದರ್ಭದಲ್ಲಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm