ಬ್ರೇಕಿಂಗ್ ನ್ಯೂಸ್
28-07-26 10:28 pm HK News Desk ಕರಾವಳಿ
ಮಂಗಳೂರು, ಜುಲೈ 28 ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು ಇಂದು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್, ಇನ್ನಿತರ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ.
ಮಂಗಳೂರು ಸೆಂಟ್ರಲ್ ಮತ್ತು ದಕ್ಷಿಣ ಉಪ ವಿಭಾಗದ ಎಸಿಪಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಕೋಟೆಕಾರು ಮತ್ತು ಕೋಣಾಜೆ ಬಂಟರ ಸಂಘದಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಕೋಣಾಜೆ, ಉಳ್ಳಾಲ, ಕಂಕನಾಡಿ, ಪಾಂಡೇಶ್ವರ, ಬಂದರು ಠಾಣೆ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದೆ.
ಉಳ್ಳಾಲದ ಕೋಟೆಕಾರಿನಲ್ಲಿ ಮಂಗಳೂರು ಎಸ್ ಡಿಎಂ ಕಾಲೇಜು, ನಿಟ್ಟೆ ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜು, ಸೈಂಟ್ ಅಲೋಶಿಯಸ್, ಪಿಎ ಕಾಲೇಜು, ಬ್ಯಾರೀಸ್ ಇನ್ ಸ್ಟಿಟ್ಯೂಟ್, ಟಿಪ್ಪು ಸುಲ್ತಾನ್ ಕಾಲೇಜು ಮತ್ತು ಕೆನರಾ ಕಾಲೇಜಿಗೆ ಸೇರಿದ 72 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.
ಕೋಣಾಜೆಯಲ್ಲಿ ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಸೇರಿದ ಎರಡು ಬಸ್ ಗಳನ್ನು ನಿಲ್ಲಿಸಿ 87 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದ್ದು ಎಲ್ಲರೂ ನೆಗೆಟಿವ್ ಆಗಿದ್ದಾರೆ. ಡ್ರಗ್ ಟೆಸ್ಟಿಂಗ್ ಕಿಟ್ ಗಳನ್ನು ಸ್ಥಳಕ್ಕೆ ಕೊಂಡೊಯ್ದು ಸಂಜೆ 4.30ರಿಂದ 6 ಗಂಟೆ ನಡುವೆ ತಪಾಸಣಾ ಕಾರ್ಯ ಮಾಡಲಾಗಿದೆ. ನಿರಂತರ ತಪಾಸಣೆ ಮತ್ತು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಪಾಸಿಟಿವ್ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಡ್ರಗ್ಸ್ ವ್ಯಸನಕ್ಕೆ ತುತ್ತಾಗುವ ಸಂಖ್ಯೆಯೂ ಇಳಿಕೆಯಲ್ಲಿದೆ. ಆದರೂ ಡ್ರಗ್ಸ್ ಫ್ರೀ ಆಗುವಲ್ಲಿ ಬಹಳಷ್ಟು ಪ್ರಯತ್ನ ಆಗಬೇಕಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಪಾಸಿಟಿವ್ ಆಗಿರುವ ಒಬ್ಬ ವಿದ್ಯಾರ್ಥಿಯನ್ನು ಕಾನೂನು ರೀತ್ಯ ಕ್ರಮ ಕೈಗೊಂಡ ಬಳಿಕ ಕೌನ್ಸೆಲಿಂಗ್ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 09:22 pm
HK News Staffer
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm