ಬ್ರೇಕಿಂಗ್ ನ್ಯೂಸ್
08-01-21 11:31 am Mangalore Correspondent ಕರಾವಳಿ
ಮಂಗಳೂರು, ಜ.8 : ಕೇರಳದಿಂದ ದ.ಕ. ಜಿಲ್ಲೆಗೆ ಬರುವ ಎಲ್ಲ ರೀತಿಯ ಕೋಳಿ ಮತ್ತು ಅದರ ಉತ್ಪನ್ನಗಳ ಸಾಗಾಟವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಕ್ಕಿ ಜ್ವರ ರೋಗದ ಹರಡುವಿಕೆ ನಿಯಂತ್ರಣ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಈ ಮಾಹಿತಿ ನೀಡಿದ್ದಾರೆ.
ನೆರೆ ರಾಜ್ಯ ಕೇರಳದ ಕೊಟ್ಟಾಯಂ ಮತ್ತು ಆಳಪುಝ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಹಕ್ಕಿಜ್ವರ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲೂ ಈ ರೋಗ ಹರಡುವ ಸಾಧ್ಯತೆ ಇದೆ. ಇದರ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ, ನೀರು ಸಂಗ್ರಹ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಕೋಳಿ ಫಾರಂಗಳಲ್ಲಿ ಸ್ವಚ್ಛತೆಗೆ ಮಾಲಕರು ಅಗತ್ಯ ಕ್ರಮ ವಹಿಸಬೇಕು. ಜೊತೆಗೆ ಅನಗತ್ಯವಾಗಿ ಜನರ ಓಡಾಟವನ್ನು ನಿರ್ಬಂಧಿಸಬೇಕು ಎಂದರು.
ಕೋಳಿಗಳಲ್ಲಿ ಯಾವುದೇ ರೀತಿಯ ಅಸಹಜ ಸಾವು ಹಾಗೂ ಹಕ್ಕಿ ಜ್ವರ ಲಕ್ಷಣ ಕಂಡುಬಂದ್ದಲ್ಲಿ ತಕ್ಷಣವೇ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು. ರೋಗದ ಪರಿಶೀಲನೆ ಮತ್ತು ರೋಗದ ಕಣ್ಗಾವಲನ್ನು ನಿಗಾ ವಹಿಸಲು ಜಿಲ್ಲೆಯಲ್ಲಿರುವ ಕೋಳಿ ಫಾರಂಗಳಿಗೆ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಪಶು ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಹಾಗೂ ಪ್ರಾದೇಶಿಕ ಸಂಶೋಧನಾ ಅಧಿಕಾರಿ ವಸಂತ ಶೆಟ್ಟಿ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kerala mangalore Border check posts closed for tucks carrying chickens to prevent spread of bird flu into Mangalore.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm