ಬ್ರೇಕಿಂಗ್ ನ್ಯೂಸ್
02-08-26 09:42 pm HK News Desk ಕರಾವಳಿ
ಬಂಟ್ವಾಳ, ಆಗಸ್ಟ್ 2: ಭಾರೀ ಮಳೆಯ ನಡುವೆ ಬಂಟ್ವಾಳ ತಾಲೂಕಿನ ರಾಯಿ ಎಂಬಲ್ಲಿ ವ್ಯಕ್ತಿಯೊಬ್ಬರು ನೀರು ಹರಿಯುವ ತೋಡಿಗೆ ಬಿದ್ದು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ಇವರ ಪತ್ತೆಗಾಗಿ ಎನ್ ಡಿಆರ್ ಎಫ್ ತಂಡ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೋ (48) ಆಗಸ್ಟ್ 1ರ ರಾತ್ರಿ ಮನೆ ಬಳಿಯ ತೋಡಿನಲ್ಲಿ ಬಿದ್ದು ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ ರಾತ್ರಿ ಮನೆ ಸಮೀಪ ತುಂಬಿ ಹರಿಯುತ್ತಿರುವ ತೋಡಿನ ಬಳಿ ಪತ್ತೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ವಿದೇಶದಲ್ಲಿದ್ದ ಜೀವನ್ ಪಿಂಟೊ ಕೆಲವು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದು, ಇದೇ ತಿಂಗಳು ಮತ್ತೆ ವಿದೇಶಕ್ಕೆ ಮರಳುವವರಿದ್ದರು. ತಮ್ಮ ಮನೆಯಿಂದ ಸ್ವಲ್ಪವೇ ದೂರದಲ್ಲಿರುವ ಮಾವನ ಮನೆಗೆ ಆಗಸ್ಟ್ 1ರ ರಾತ್ರಿ ಸುಮಾರು 7.30ರ ವೇಳೆ ನಡೆದುಕೊಂಡು ಹೊರಟಿದ್ದರು. ಧಾರಾಕಾರ ಮಳೆ ಹಾಗೂ ಕತ್ತಲು ಇರುವ ಹಿನ್ನೆಲೆಯಲ್ಲಿ ಟಾರ್ಚ್ ಹಿಡಿದುಕೊಂಡು ತೋಡಿನ ಮೇಲೆ ಹಾಕಿರುವ ಮರದ ಸೇತುವೆಯಲ್ಲಿ ನಡೆದು ತೆರಳಿದ್ದರು. ಆದರೆ ಅವರು ಎಷ್ಟು ಹೊತ್ತಾದರೂ ತಲುಪಿರದ ಹಿನ್ನೆಲೆ ಹುಡುಕಾಟ ನಡೆಸಿದಾಗ, ಅವರ ಚಪ್ಪಲಿ ಮತ್ತು ಟಾರ್ಚ್ ತೋಡಿನಲ್ಲಿ ಪತ್ತೆಯಾಗಿದೆ.
ತೋಡಿನಲ್ಲಿ ಕಾಲು ಜಾರಿ ಬಿದ್ದಿರಬಹುದೇ ಎಂಬ ಶಂಕೆಯಿಂದ ಹುಡುಕಾಟ ಆರಂಭಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸ್ಥಳೀಯರು ಸೇರಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ವರೆಗೂ ಹುಡುಕಾಟ ನಡೆಸಿದ್ದಾರೆ. ಭಾನುವಾರ ದಿನವಿಡೀ ಎನ್ ಡಿಆರ್ ಎಫ್ ತಂಡದ ಸದಸ್ಯರು ಹುಡುಕಾಟ ನಡೆಸಿದ್ದು ಸಂಜೆಯ ವರೆಗೂ ಜೀವನ್ ಪಿಂಟೋ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm