ಬ್ರೇಕಿಂಗ್ ನ್ಯೂಸ್
08-08-26 12:13 pm HK News Staffer ಕರಾವಳಿ
ಭಟ್ಕಳ , ಆ. 8: ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ ಅವರು ‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಜನರ ಮೂಲಭೂತ ಸಮಸ್ಯೆಗಳನ್ನು ಅರಿತುಕೊಂಡು, ಅವುಗಳ ಪರಿಹಾರಕ್ಕಾಗಿ ಜನಾಂದೋಲನ ರೂಪಿಸುವುದಾಗಿ ಅವರು ತಿಳಿಸಿದ್ದಾರೆ.
ಭಟ್ಕಳದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಚೇತನ್, ಭ್ರಷ್ಟಾಚಾರದ ವಿರುದ್ಧ ಹೋರಾಟ ಹಾಗೂ ಪರಿಸರ ಸಂರಕ್ಷಣೆ ತಮ್ಮ ಹೊಸ ರಾಜಕೀಯ ಪಕ್ಷದ ಪ್ರಮುಖ ಆದ್ಯತೆಗಳಾಗಲಿವೆ ಎಂದರು.

ಶರಾವತಿ ಯೋಜನೆಗೆ ವಿರೋಧ;
ಸಾವಿರಾರು ಕೋಟಿ ರೂಪಾಯಿ ವೆಚ್ಚದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಚೇತನ್ ಆತಂಕ ವ್ಯಕ್ತಪಡಿಸಿದರು. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಹಾನಿ ಉಂಟುಮಾಡುವ ಯೋಜನೆಗಳನ್ನು ಸರ್ಕಾರ ಮರುಪರಿಶೀಲಿಸಬೇಕು. ಪರಿಸರಕ್ಕೆ ಕಡಿಮೆ ಹಾನಿಯಾಗುವ ಸೌರಶಕ್ತಿ ಸೇರಿದಂತೆ ಪರ್ಯಾಯ ವಿದ್ಯುತ್ ಉತ್ಪಾದನಾ ವಿಧಾನಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಸಂಪುಟ ವಿಸ್ತರಣೆಯಲ್ಲೂ ಅಸಮಾಧಾನ;
ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕರಾವಳಿ ಭಾಗ ಹಾಗೂ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ದೊರೆತಿಲ್ಲ ಎಂದು ಚೇತನ್ ಅಸಮಾಧಾನ ವ್ಯಕ್ತಪಡಿಸಿದರು. ‘ಪರಿವರ್ತನಾ ಪರಿಸರವಾದ’ದ ಆಧಾರದ ಮೇಲೆ ರಾಜ್ಯದಲ್ಲಿ ಹೊಸ ರಾಜಕೀಯ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿರುವುದಾಗಿ ಅವರು ಹೇಳಿದರು.
ಕಾವೇರಿ ವಿಚಾರಕ್ಕೆ ಸೌಹಾರ್ದಯುತ ಪರಿಹಾರ;
ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ರೈತರ ಹಿತವನ್ನು ಕಾಪಾಡುವ ರೀತಿಯಲ್ಲಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕು ಎಂದು ಚೇತನ್ ಸಲಹೆ ನೀಡಿದರು. ಇದೇ ವೇಳೆ ಟೊಂಕಾ ಬಂದರು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಗಳು ಈಡೇರಿಲ್ಲ ಎಂದು ಅವರು ಆರೋಪಿಸಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am