"ಹಾವೂ ಸಾಯಬಾರದು, ಕೋಲು ಮುರಿಯಬಾರದು" ಬೆಂಗಳೂರು ಗಲಭೆ ಬಗ್ಗೆ ಮಾಜಿ ಸಚಿವರ ಟ್ವೀಟ್ ಹೇಳಿಕೆ !! 

12-08-20 08:30 am       Mangalore Reporter   ಕರಾವಳಿ

ಪೊಲೀಸ್ ಇಲಾಖೆಯ ವೈಫಲ್ಯದತ್ತ ಬೊಟ್ಟು ಮಾಡಿದ್ದಾರೆ. ಪೋಲಿಸ್ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈಮೀರಿ ಹೋಗುವ ಪ್ರಶ್ನೆ ಬರುವುದಿಲ್ಲ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ. 

ಮಂಗಳೂರು, ಆಗಸ್ಟ್ 12: ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಯು.ಟಿ. ಖಾದರ್, ಹಾವೂ ಸಾಯಬಾರದು, ಕೋಲು ಮುರಿಯಬಾರದು ಅನ್ನುವ ರೀತಿ ಹೇಳಿಕೆ ಕೊಟ್ಟಿದ್ದಾರೆ. 

ಲೋಕಕ್ಕೆ ಸೌಹಾರ್ದ, ಸಮಾನತೆ ಹಾಗೂ ಮಾನವೀಯತೆ ಸಾರಿದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಿದವರ ವಿರುದ್ಧ ಗರಿಷ್ಠ ಕ್ರಮ ಕೈಗೊಳ್ಳಲೇ ಬೇಕು. ಹಾಗಂತ, ಇದೇ ನೆಪದಲ್ಲಿ  ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ. 

 

ಇದೇ ವೇಳೆ ಮತ್ತೊಂದು ಟ್ವೀಟ್ ಮಾಡಿರುವ ಖಾದರ್, ಪೊಲೀಸ್ ಇಲಾಖೆಯ ವೈಫಲ್ಯದತ್ತ ಬೊಟ್ಟು ಮಾಡಿದ್ದಾರೆ. ಪೋಲಿಸ್ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈಮೀರಿ ಹೋಗುವ ಪ್ರಶ್ನೆ ಬರುವುದಿಲ್ಲ. ಎಲ್ಲರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ. ಹಾಗೆಂದು, ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ. ಈ ನೆಲದ ಕಾನೂನೇ ಅಂತಿಮ. ಎಲ್ಲರೂ ಶಾಂತಿ ಕಾಪಾಡಿ ,  ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರು ಅಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ. 

ಮಾಜಿ ಸಚಿವರಾಗಿ ತಮ್ಮದೇ ಪಕ್ಷದ ಕಾಂಗ್ರೆಸ್ ಶಾಸಕರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆಯನ್ನು ಯುಟಿ ಖಾದರ್ ಖಂಡಿಸಲು ಮುಂದಾಗಿಲ್ಲ. ಟ್ವಿಟರ್ ನಲ್ಲಿ ಪೊಲೀಸರಿಗೆ ಮತ್ತು ಗಲಭೆಕೋರರಿಗೆ ಸಲಹೆಗಳನ್ನು ನೀಡಿದರೆ ಹೊರತು ಕಠಿಣ ಕಾನೂನು ಕ್ರಮಕ್ಕೂ ಆಗ್ರಹಿಸಿಲ್ಲ‌ !