ಬ್ರೇಕಿಂಗ್ ನ್ಯೂಸ್
11-08-26 10:03 pm HK News Staffer ಕರಾವಳಿ
ಮೂಡುಬಿದಿರೆ, ಆಗಸ್ಟ್ 11: ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ದಿಢೀರ್ ಬೆಂಕಿ ಹೊತ್ತಿಕೊಂಡ ಪರಿಣಾಮ, ಒಂದೇ ಕುಟುಂಬದ ಮೂವರು ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ಮೂಡುಬಿದಿರೆ ತಾಲೂಕಿನ ಮಿಜಾರು ಗ್ರಾಮದಲ್ಲಿ ಸಂಭವಿಸಿದೆ.
ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಆರು ವರ್ಷದ ಪುತ್ರ ಆದರ್ಶ್ (6) ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಿಜಾರಿನ ಬಾಡಿಗೆ ಮನೆಯಲ್ಲಿ ಸಿಲಿಂಡರ್ನಿಂದ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು ದಿಢೀರ್ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಮನೆಯಲ್ಲಿ ಬೆಂಕಿ ವ್ಯಾಪಿಸಿದೆ. ಅಗ್ನಿ ಅವಘಡದಲ್ಲಿ ಶಿವರಾಮ ಅವರಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಪತ್ನಿ ಗಂಗಾ ಹಾಗೂ ಪುತ್ರ ಆದರ್ಶ್ಗೂ ಸುಟ್ಟ ಗಾಯಗಳಾಗಿವೆ. ಘಟನೆಯ ಬಳಿಕ ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಗ್ಯಾಸ್ ಸೋರಿಕೆಯಾಗಲು ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆ ಕುರಿತು ಮೂಡುಬಿದಿರೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಮಾಹಿತಿ ಕಲೆಹಾಕಿರುವ ಪೊಲೀಸರು, ಸಿಲಿಂಡರ್ ಸೋರಿಕೆ ಹಾಗೂ ಬೆಂಕಿ ಅವಘಡಕ್ಕೆ ಕಾರಣವಾದ ಅಂಶಗಳ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am