ಬ್ರೇಕಿಂಗ್ ನ್ಯೂಸ್
28-08-26 02:11 pm HK News Staffer ಕರಾವಳಿ
ಮಂಗಳೂರು, ಆ.28 : ಶ್ರೀ ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾರ ನಡೆದಿದ್ದು ಈ ಕುರಿತು ಸಹಕಾರಿ ನಿಬಂಧಕರಿಗೆ ದೂರು ನೀಡಲಾಗಿದೆ. ಪೊಲೀಸ್ ಕಮಿಷನರ್ ಅವರಿಗೂ ದೂರು ನೀಡಲಾಗಿದೆ. ಲೆಕ್ಕಪತ್ರ ಕೇಳಿದರೆ ಕೈಕಾಲು ಕಡಿಯುವ ಬೆದರಿಕೆ ಹಾಕಿದ್ದಾರೆ ಎಂದು ಕಾರ್ಯಕಾರಿ ಸಮಿತಿ ಸದಸ್ಯ ಪವನ್ ರಾಜ್ ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿದರು.
ಕಳೆದ ಎರಡು ವರ್ಷಗಳಿಂದ ಶ್ರೀ ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಹಿಂದಿನ ಮಹಾಸಭೆಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ಸುರೇಶ್ ಭಟ್ನಗರ ಹಾಗೂ ಸಂಘದ ಅಧ್ಯಕ್ಷರಾಗಿ ಉಮೇಶ್ ಬೆಂಜನಪದವು ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದರು. ಆದರೆ ಅಧಿಕಾರ ಹಸ್ತಾಂತರಗೊಂಡ 15 ದಿನಗಳಲ್ಲೇ ಉಮೇಶ್ ಬೆಂಜನಪದವು ವೈಯಕ್ತಿಕ ಕಾರಣ ನೀಡಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ಹೊಸ ಮಹಾಸಭೆಯನ್ನು ಕರೆಯದೆ, ಹಲವು ಆಕ್ಷೇಪಗಳ ನಡುವೆಯೇ ಮಾಸಿಕ ಸಭೆಯಲ್ಲಿ ಚಿದಾನಂದ ಗುರಿಕಾರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಇಲ್ಲಿಂದ ಮುಂದಿನ ಆಡಳಿತ ಕ್ರಮಗಳ ಕುರಿತು ಕಾರ್ಯಕಾರಿ ಸಮಿತಿಯೊಳಗೆ ಹಲವು ಪ್ರಶ್ನೆಗಳು ಉದ್ಬವಿಸುತ್ತಾ ಬಂದಿವೆ. ಸಂಘದ ಮಾಜಿ ಅಧ್ಯಕ್ಷರಾದ ಚಂದ್ರಹಾಸ್ ಉಳ್ಳಾಲ್ ಅವರ ಅವಧಿಯಲ್ಲಿ ನೂತನ ಸಭಾಂಗಣ ನಿರ್ಮಾಣದ ವೇಳೆ ಹಣಕಾಸಿನ ಕೊರತೆ ಉಂಟಾದಾಗ, ಅವರ ಕುಟುಂಬಕ್ಕೆ ಸೇರಿದ ಜಮೀನನ್ನು ಭಗವತಿ ಬ್ಯಾಂಕ್‌ನಲ್ಲಿ ಅಡಮಾನವಿಟ್ಟು ಸುಮಾರು 130 ಲಕ್ಷ ಸಾಲ ಪಡೆದು ಸಭಾಂಗಣ ನಿರ್ಮಾಣಕ್ಕೆ ಬಳಸಲಾಗಿತ್ತು ಎಂದು ಸಭೆಗಳಲ್ಲಿ ತಿಳಿಸಲಾಗಿತ್ತು. ಸಭಾಂಗಣದಿಂದ ತಿಂಗಳಿಗೆ ಸುಮಾರು ₹1 ಲಕ್ಷ ಬಾಡಿಗೆ ಆದಾಯ ಬರುವ ವ್ಯವಸ್ಥೆಯನ್ನು ರೂಪಿಸಿ, ಅದೇ ಆದಾಯದಿಂದ ಬ್ಯಾಂಕ್ ಸಾಲದ ಕಂತುಗಳನ್ನು ಪಾವತಿಸಲಾಗುತ್ತಿತ್ತು.
ಅಧಿಕಾರ ಹಸ್ತಾಂತರದ ಸಂದರ್ಭದಲ್ಲಿ ಚಂದ್ರಹಾಸ್ ಉಳ್ಳಾಲ್ ಅವರು ಸಾಧ್ಯವಾದಷ್ಟು ಬೇಗ ಸಾಲವನ್ನು ತೀರಿಸಿ ಅಡಮಾನದಲ್ಲಿರುವ ದಾಖಲೆಗಳನ್ನು ಹಿಂದಿರುಗಿಸುವಂತೆ ಮನವಿ ಮಾಡಿಕೊಂಡಿದ್ದರು. ನಂತರದ ಸಭೆಯಲ್ಲಿ ಬ್ಯಾಂಕ್ ಸಾಲ ಹಾಗೂ ಇತರ ಬಾಕಿಗಳನ್ನು ಸೇರಿಸಿ ಒಟ್ಟು ಸುಮಾರು 36 ಲಕ್ಷ ರೂ. ಬಾಧ್ಯತೆ ಇದೆ ಎಂದು ತಿಳಿಸಲಾಗಿತ್ತು. ಈ ಕುರಿತು ಲೆಕ್ಕಪತ್ರ ಮಂಡಿಸುವಂತೆ ಕೇಳಿದರೂ ಯಾವುದೇ ಲೆಕ್ಕಪತ್ರ ಮಂಡನೆ ಆಗಿಲ್ಲ. ಇದೇ ರೀತಿಯಾಗಿ ನಮ್ಮ ಕ್ಷೇತ್ರದಲ್ಲಿ ದಾನಿಗಳ ಸಹಕಾರದಿಂದ ಮಹಾದ್ವಾರ ನಿರ್ಮಾಣವಾಗಿದೆ. ಆದರೆ ಆ ದ್ವಾರದ ನಕ್ಷೆ, ದ್ವಾರ ನಿರ್ಮಾಣದ ಗುತ್ತಿಗೆ ಹೇಗೆ ಕೊಡುವುದು, ಯಾವ ಗುತ್ತಿಗೆದಾರರಿಗೆ ಕೊಡುವುದು, ಯಾವ ರೀತಿಯಲ್ಲಿ ನಿರ್ಮಾಣ ಮಾಡ್ತಾರೆ, ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ.
ನಮಗೆ ಯಾವುದೇ ಸಂಘರ್ಷ ಮಾಡಲು ಮನಸ್ಸಿಲ್ಲ, ನಮ್ಮದೇ ಸಂಘ, ನಮ್ಮದೇ ಸಮಾಜ, ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಪಾರದರ್ಶಕವಾಗಿ ಸಂಘದ ಬೈಲಾ ಪ್ರಕಾರ ನಡೆಯಬೇಕು, ಲೆಕ್ಕಪತ್ರಗಳು ಪಾರದರ್ಶಕವಾಗಿ ಇರ್ಬೇಕು, ಕಾರ್ಯಕಾರಿಣಿ ಸಮಿತಿಗೆ ಹಕ್ಕು ಮತ್ತು ಜವಾಬ್ದಾರಿಗಳು ಇರ್ಬೇಕು. ಇದೇ ನಮ್ಮ ಆಗ್ರಹ. ಆದರೆ ಲೆಕ್ಕಪತ್ರ ಕುರಿತು ಪ್ರಶ್ನೆ ಮಾಡಿದರೆ ಫೋನ್ ನಲ್ಲಿ ಬೆದರಿಕೆ ಹಾಕಲಾಗುತ್ತದೆ. ಕೈಕಾಲು ಕಡಿಯುವುದಾಗಿ ಹೇಳುತ್ತಾರೆ. ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ದೂರು ಕೊಟ್ಟರೂ ಎಲ್ಲ ದಾಖಲೆಗಳನ್ನು ನೀಡಲಾಗಿದ್ದರೂ ಆತನ ವಿರುದ್ಧ ಎಫ್ ಐಆರ್ ದಾಖಲಾಗಿಲ್ಲ ಎಂದರು.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am