ಬ್ರೇಕಿಂಗ್ ನ್ಯೂಸ್
02-09-26 10:30 pm HK News Desk ಕರಾವಳಿ
ಮಂಗಳೂರು, ಸೆ.2: ಸಚಿವರ ಹೆಸರಲ್ಲಿ ಕಮಿಷನ್ ಕೇಳುತ್ತಿದ್ದಾರೆಂಬ ಆರೋಪಕ್ಕೀಡಾದ ಕೆ.ಆರ್.ಐ.ಡಿ.ಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಅವರನ್ನು ಅಮಾನತ್ತಿನಲ್ಲಿರಿಸಿ ನಿಷ್ಪಕ್ಷವಾಗಿ ತನಿಖೆ ನಡೆಸುವಂತೆ ಹಾಗೂ ಆರೋಪ ಸಾಬೀತಾದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಕೆ.ಆರ್.ಐ.ಡಿ.ಎಲ್ ಸಂಸ್ಥೆಯಿಂದ ನಿರ್ವಹಿಸಲಾಗುತ್ತಿರುವ ಸರಕಾರಿ ಕಾಮಗಾರಿಗಳಿಗೆ ಸಾಮಾಗ್ರಿ ಪೂರೈಸುವ ಗ್ರೂಪ್ ಲೀಡರ್‌ಗಳಿಂದ ಇಲಾಖಾ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊಡುವುದಕ್ಕಾಗಿ ಎಂದು ಕಮಿಷನ್ ಪಡೆಯುತ್ತಿರುವುದಾಗಿ ಆರೋಪವಿದೆ. ಈ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ತಕ್ಷಣ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುತ್ತಾರೆ.

ಈ ಹಿನ್ನೆಲೆಯಲ್ಲಿ ಆರೋಪಕ್ಕೀಡಾದ ಕೆ.ಆರ್.ಐ.ಡಿ.ಎಲ್ ಸಂಸ್ಥೆಯ ಮಂಗಳೂರು ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಅವರನ್ನು ಅಮಾನತ್ತಿನಲ್ಲಿರಿಸಿ ನಿಷ್ಪಕ್ಷವಾಗಿ ತನಿಖೆ ನಡೆಸುವಂತೆ ಈ ಮೂಲಕ ಕೋರುತ್ತೇನೆ ಎಂದು ಉಸ್ತುವಾರಿ ಸಚಿವ ಯು.ಟಿ ಖಾದರ್, ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ, ಕೆಆರ್ ಐಡಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದರು.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
24-09-26 06:26 pm
HK News Staffer
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm