ಬ್ರೇಕಿಂಗ್ ನ್ಯೂಸ್
02-09-26 10:51 pm HK News Desk ಕರಾವಳಿ
ಮಂಗಳೂರು, ಸೆ 02: ಬಜ್ಪೆ ಹಾಗೂ ಕಟೀಲು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಕರಂಬಾರು ಬಳಿಯ ರೇಗೋ ಪೆಟ್ರೋಲ್ ಪಂಪ್ ಸಮೀಪದಲ್ಲಿರುವ ಕಿರು ಸೇತುವೆಯ ಒಂದು ಪಾರ್ಶ್ವ ಬುಧವಾರ ಏಕಾಏಕಿ ಕುಸಿತವಾಗಿದೆ. ಪರಿಣಾಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರದಲ್ಲಿ ಗಂಭೀರ ವ್ಯತ್ಯಯ ಉಂಟಾಗಿದ್ದು, ಪೊಲೀಸರು ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಿ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದು, ಈ ಬಗ್ಗೆ ಮಂಗಳೂರು ನಗರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಪ್ರಸಿದ್ಧ ಕ್ಷೇತ್ರ ಕಟೀಲನ್ನು ಬೆಸೆಯುವ ಮುಖ್ಯ ರಸ್ತೆಯ ಇದೇ ಕಿರು ಸೇತುವೆಯ ಕೆಳಭಾಗದ ಕಮಾನು ಕಲ್ಲುಗಳು ಜರಿದು ಬಿದ್ದಿದ್ದು, ಮೇಲ್ಭಾಗದ ಡಾಂಬರು ರಸ್ತೆಯಲ್ಲೂ ಬಿರುಕು ಮೂಡಿ ಕುಸಿತದ ಭೀತಿ ಎದುರಾಗಿದೆ. ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಬಜ್ಪೆ ಠಾಣಾ ಪೊಲೀಸರು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಸೇತುವೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಹಾಗೂ ಮುನ್ನೆಚ್ಚರಿಕಾ ಪಟ್ಟಿಗಳನ್ನು ಅಳವಡಿಸಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ.
ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆಯಾಗದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪೊಲೀಸ್ ಠಾಣೆಯು ತಾತ್ಕಾಲಿಕವಾಗಿ ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದೆ.

ಮಂಗಳೂರು ಹಾಗೂ ವಿಮಾನ ನಿಲ್ದಾಣ ಕಡೆಗೆ ಸಂಚರಿಸುವವರು:
ಜರಿನಗರ ಅಥವಾ ಪೊರ್ಕೋಡಿ ರಸ್ತೆಯ ಮೂಲಕ ತೆರಳಬೇಕು. ಕಟೀಲು, ಬಜ್ಪೆ ಮತ್ತು ಕೈಕಂಬ ಕಡೆಗೆ ತೆರಳುವ ವಾಹನಗಳು: ಜರಿನಗರ ಅಥವಾ ಪೊರ್ಕೋಡಿ ರಸ್ತೆಯನ್ನು ಬಳಸಿಕೊಂಡು ಸಂಚರಿಸಬೇಕು. ಸಾರ್ವಜನಿಕರು ಹಾಗೂ ವಾಹನ ಸವಾರರು ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗ ಬದಲಾವಣೆಗೆ ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಬಜ್ಪೆ ಕಡೆಯಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣ ಪ್ರಾಧಿಕಾರವು ಮಹತ್ವದ ಸೂಚನೆ ಸಾಮಾಜಿಕ ಜಾಲತಾಣಗಳಲ್ಲಿ ನೀಡಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am