ಬ್ರೇಕಿಂಗ್ ನ್ಯೂಸ್
06-09-26 12:47 pm HK News Desk ಕರಾವಳಿ
ಸುಬ್ರಹ್ಮಣ್ಯ, ಸೆ 06: ಕುಕ್ಕೆ ಸುಬ್ರಹ್ಮಣ್ಯದಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 37 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಿಂದ ಪ್ರಯಾಣಿಕರನ್ನು ಕರೆದೊಯ್ದಿದ್ದ ಬಿ.ಸಿ.ರೋಡ್ ಡಿಪೋಗೆ ಸೇರಿದ ಸಾರಿಗೆ ಬಸ್ನಲ್ಲಿ ಎರ್ಮಾಯಿಲ್ ಸಮೀಪ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಅದನ್ನು ಗಮನಿಸಿದ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಎಚ್ಚರಿಸಿದ್ದಾರೆ. ಯಾವುದೇ ಆತಂಕಕ್ಕೆ ಒಳಗಾಗದೆ ಪ್ರಯಾಣಿಕರನ್ನು ತಕ್ಷಣವೇ ಬಸ್ನಿಂದ ಕೆಳಗಿಳಿಸುವಲ್ಲಿ ಚಾಲಕ ಯಶಸ್ವಿಯಾಗಿದ್ದಾರೆ. ಪ್ರಯಾಣಿಕರೆಲ್ಲರೂ ಬಸ್ನಿಂದ ಸುರಕ್ಷಿತವಾಗಿ ಹೊರಬಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ವ್ಯಾಪಿಸಿದ್ದು, ನೋಡನೋಡುತ್ತಿದ್ದಂತೆ ಬಸ್ ಸಂಪೂರ್ಣವಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದೆ.

ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಬಸ್ನ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಘಟನೆಯಿಂದಾಗಿ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಸ್ನಲ್ಲಿ ಪ್ರಯಾಣಿಸುತ್ತಿದ್ದ 37 ಮಂದಿ ಪ್ರಯಾಣಿಕರು ಸಕಾಲದಲ್ಲಿ ಕೆಳಗಿಳಿದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸುವ ಕಾರ್ಯ ನಡೆಸಿದರು. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಬಸ್ನ ಇಂಜಿನ್ ಭಾಗದಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿತೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಯಬೇಕಿದೆ. ನಿಖರ ಕಾರಣ ಹಾಗೂ ಸಂಭವಿಸಿರುವ ನಷ್ಟದ ಕುರಿತು ಅಧಿಕೃತ ತನಿಖೆಯ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಚಾಲಕ ತಕ್ಷಣ ಬಸ್ ನಿಲ್ಲಿಸಿ ಎಲ್ಲರನ್ನೂ ಹೊರಗೆ ಕಳುಹಿಸಿರುವುದು ದೊಡ್ಡ ಅನಾಹುತವೊಂದನ್ನು ತಪ್ಪಿಸಿದೆ. ಚಾಲಕನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm