ಬ್ರೇಕಿಂಗ್ ನ್ಯೂಸ್
08-09-26 03:50 pm HK News Staffer ಕರಾವಳಿ
ಮಂಗಳೂರು, ಸೆ.8: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಾಯುಕ್ತ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಜಿಲ್ಲೆಯ ವಿವಿಧ ತಾಲೂಕುಗಳ ಒಟ್ಟು 7 ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ಏಕಕಾಲದಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ.
ಸಾರ್ವಜನಿಕರಿಂದ ಭ್ರಷ್ಟಾಚಾರ, ಖಾತಾ ಬದಲಾವಣೆ, ಸರ್ಕಾರಿ ಯೋಜನೆಗಳ ಅನುಷ್ಠಾನ, ಸಾರ್ವಜನಿಕ ಕೆಲಸಗಳಲ್ಲಿನ ಅಕ್ರಮ ಹಾಗೂ ಲಂಚದ ಬೇಡಿಕೆ ಕುರಿತು ಸರಣಿ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮಂಗಳೂರು ತಾಲೂಕಿನ ಪೆರ್ಮುದೆ ಗ್ರಾಮ ಪಂಚಾಯತಿ, ಬಂಟ್ವಾಳ ತಾಲೂಕಿನ ಪುದು, ಮಾಣಿ, ಗೊಳ್ತಮಜಲು, ಪಾಣೆಮಂಗಳೂರು/ಅಡ್ಯಾರ್, ಕುವೆಟ್ಟು ಹಾಗೂ ಮಡಂತ್ಯಾರ್ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಏಕಕಾಲಕ್ಕೆ ಪರಿಶೀಲನೆ ನಡೆಯುತ್ತಿದೆ.
ಕಾರವಾರ, ಉಡುಪಿ ಹಾಗೂ ಮಂಗಳೂರು ವಿಭಾಗಗಳ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದ್ದು, ಎಲ್ಲಾ ತಂಡಗಳು ಏಕಕಾಲದಲ್ಲಿ ಪಂಚಾಯತಿ ಕಚೇರಿಗಳಿಗೆ ತೆರಳಿ ದಾಖಲೆಗಳನ್ನು ಪರಿಶೀಲಿಸುತ್ತಿವೆ. ದಾಳಿಯ ವೇಳೆ ಕಚೇರಿಗಳಲ್ಲಿದ್ದ ಪ್ರಮುಖ ಕಡತಗಳು, ಸಾರ್ವಜನಿಕರ ಅರ್ಜಿ ವಿಲೇವಾರಿ ರಿಜಿಸ್ಟರ್, ತೆರಿಗೆ ವಸೂಲಾತಿ ದಾಖಲೆಗಳು, ಕಟ್ಟಡ ನಿರ್ಮಾಣ ಪರವಾನಗಿ ಸಂಬಂಧಿತ ಕಡತಗಳು ಹಾಗೂ 15ನೇ ಹಣಕಾಸು ಯೋಜನೆಯ ಅನುದಾನ ಬಳಕೆಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಇದರ ಜೊತೆಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO), ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಸಾರ್ವಜನಿಕರಿಂದ ಬಂದಿರುವ ದೂರುಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ವಿವರಣೆ ಪಡೆಯಲಾಗುತ್ತಿದೆ.
ಲೋಕಾಯುಕ್ತ ಪೊಲೀಸರ ಈ ದಿಢೀರ್ ಕಾರ್ಯಾಚರಣೆಯಿಂದ ಗ್ರಾಮೀಣ ಭಾಗದ ಪಂಚಾಯತಿ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪರಿಶೀಲನೆ ವೇಳೆ ಯಾವುದೇ ಅಕ್ರಮ ಅಥವಾ ಲೋಪಗಳು ಪತ್ತೆಯಾಗಿವೆಯೇ ಎಂಬುದು ಲೋಕಾಯುಕ್ತ ಅಧಿಕಾರಿಗಳ ಸಂಪೂರ್ಣ ತಪಾಸಣೆಯ ಬಳಿಕ ಸ್ಪಷ್ಟವಾಗಲಿದೆ.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm