ಬ್ರೇಕಿಂಗ್ ನ್ಯೂಸ್
10-09-26 09:24 pm HK News Staffer ಕರಾವಳಿ
ಪುತ್ತೂರು, ಸೆ.10: ಮಂಗಳೂರು - ಬೆಂಗಳೂರು ನಡುವೆ ಪ್ರಸ್ತಾವಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಎರಡನೇ ಪ್ರಾಯೋಗಿಕ ಸಂಚಾರ ಗುರುವಾರ ನಡೆದಿದ್ದು, ಕಬಕ–ಪುತ್ತೂರು ರೈಲು ನಿಲ್ದಾಣದಲ್ಲಿ ಎರಡು ನಿಮಿಷಗಳ ನಿಲುಗಡೆ ನೀಡಲಾಗುವುದು ಎಂದು ರೈಲ್ವೆ ಮಂಡಳಿಯ ವೇಳಾಪಟ್ಟಿಯಲ್ಲಿ ಉಲ್ಲೇಖಿಸಿದ್ದರೂ ರೈಲು ನಿಲ್ಲದೇ ಸಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ರೈಲು ನಿಗದಿತ ಸಮಯಕ್ಕಿಂತ 1 ಗಂಟೆ 22 ನಿಮಿಷ ಮುಂಚಿತವಾಗಿ ಪುತ್ತೂರು ನಿಲ್ದಾಣ ತಲುಪಿದ್ದರೂ ನಿಲ್ಲದೆ ಸಾಗಿದ್ದು ಸ್ವಾಗತಕ್ಕೆ ಸಿದ್ಧರಾಗಿದ್ದ ರೈಲು ಬಳಕೆದಾರರು ಹಾಗೂ ಸ್ಥಳೀಯರಿಗೆ ನಿರಾಸೆಗೀಡು ಮಾಡಿದೆ. ವೇಳಾಪಟ್ಟಿಯಂತೆ ಯಶವಂತಪುರದಿಂದ ಬೆಳಗ್ಗೆ 6.50ಕ್ಕೆ ಹೊರಡುವ ರೈಲು ಮಧ್ಯಾಹ್ನ 2.50ಕ್ಕೆ ಮಂಗಳೂರು ಜಂಕ್ಷನ್ ತಲುಪಬೇಕಿತ್ತು. ಕಬಕ–ಪುತ್ತೂರು ನಿಲ್ದಾಣಕ್ಕೆ ಮಧ್ಯಾಹ್ನ 2.34ಕ್ಕೆ ಆಗಮಿಸುವ ನಿರೀಕ್ಷೆ ಹಿನ್ನೆಲೆಯಲ್ಲಿ ರೈಲ್ವೆ ಬಳಕೆದಾರರು ಹಾಗೂ ಬಿಜೆಪಿ ಕಾರ್ಯಕರ್ತರು ಮಧ್ಯಾಹ್ನ 2.30ರ ವೇಳೆಗೆ ನಿಲ್ದಾಣದಲ್ಲಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಂಡಿದ್ದರು.
ಆದರೆ, ರೈಲು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಮಧ್ಯಾಹ್ನ 1.12ರ ವೇಳೆಗೆ ಕಬಕ–ಪುತ್ತೂರು ನಿಲ್ದಾಣ ತಲುಪಿತು. ನಿಲ್ದಾಣದಲ್ಲಿ ಸ್ವಾಗತಕ್ಕೆ ಯಾರೂ ಹಾಜರಿರದ ಸಂದರ್ಭ ರೈಲು ಪ್ಲಾಟ್ಫಾರ್ಮ್ನಲ್ಲಿ ನಿಲ್ಲದೆ, ನಿಧಾನಗತಿಯಲ್ಲಿ ಸಾಗಿದ ಬಳಿಕ ಮಂಗಳೂರು ಕಡೆಗೆ ತೆರಳಿತು. ಮಂಗಳೂರಿನಿಂದ ಬೆಂಗಳೂರಿನತ್ತ ಹಿಂದಿರುಗುವ ಸಂದರ್ಭದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡುಬಂತು. ಮಧ್ಯಾಹ್ನ 3.10ಕ್ಕೆ ಮಂಗಳೂರಿನಿಂದ ಹೊರಡಬೇಕಿದ್ದ ರೈಲು ಅದಕ್ಕೂ ಮುಂಚಿತವಾಗಿ ಸಂಚರಿಸಿ, ಸುಮಾರು 3.17ರ ವೇಳೆಗೆ ಕಬಕ–ಪುತ್ತೂರು ನಿಲ್ದಾಣದ ಮೂಲಕ ಹಾದುಹೋಯಿತು. ಈ ಸಂದರ್ಭ ವಂದೇ ಭಾರತ್ ರೈಲಿಗೆ ನಿಲುಗಡೆ ದೊರೆಯುವ ನಿರೀಕ್ಷೆಯಲ್ಲಿ ಕೆಲವರು ನಿಲ್ದಾಣದಲ್ಲಿ ಕಾಯುತ್ತಿದ್ದರು. ಆದರೆ ರೈಲು ಪ್ಲಾಟ್ಫಾರ್ಮ್ಗೆ ಬಾರದೆ ಮಧ್ಯದ ಹಳಿಯಲ್ಲಿ ವೇಗವಾಗಿ ಸಂಚರಿಸಿ ಮುಂದುವರಿಯಿತು.
ವಂದೇ ಭಾರತ್ ರೈಲಿಗೆ ಕಬಕ–ಪುತ್ತೂರಿನಲ್ಲಿ ನಿಲುಗಡೆ ನೀಡಬೇಕೆಂಬ ಬೇಡಿಕೆ ಹಲವು ದಿನಗಳಿಂದ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಎರಡನೇ ಪ್ರಾಯೋಗಿಕ ಸಂಚಾರದ ವೇಳಾಪಟ್ಟಿಯಲ್ಲಿ ನಿಲುಗಡೆ ಉಲ್ಲೇಖವಾಗಿದ್ದರಿಂದ ಸ್ಥಳೀಯರಲ್ಲಿ ನಿರೀಕ್ಷೆ ಮೂಡಿತ್ತು. ಆದರೆ ಪ್ರಾಯೋಗಿಕ ಸಂಚಾರದ ವೇಳೆ ನಿಲುಗಡೆ ದೊರೆಯದಿರುವುದು ನಿರಾಸೆ ಮೂಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭವಾಗಿದೆ. ‘ಪುತ್ತೂರಿಗರ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ’ ಎಂಬಂತಹ ವ್ಯಂಗ್ಯಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿವೆ. ‘ಬಹಳಷ್ಟು ಹೋರಾಟದ ಬಳಿಕ ಕಬಕ–ಪುತ್ತೂರು ನಿಲುಗಡೆ ಘೋಷಣೆಯಾದರೂ, ಪ್ರಾಯೋಗಿಕ ಸಂಚಾರದಲ್ಲಿ ರೈಲು ನಿಲ್ಲದಿರುವುದು ಮತ್ತೆ ಪುತ್ತೂರಿಗೆ ಅನ್ಯಾಯ’ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 09:22 pm
HK News Staffer
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm