U T Khader, KDP Meeting, Sudheer Reddy Ips: : ರೂಲ್ಸ್ ಹೇಳೋರು ರೂಲ್ಸ್ ಫಾಲೋ ಮಾಡಲ್ವಾ ? ; KDP ಸಭೆಗೆ ಕಮಿಷನರ್ ಗೈರು, ಯು.ಟಿ. ಖಾದರ್ ಗರಂ, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ!

15-09-26 05:27 pm       HK News Staffer   ಕರಾವಳಿ

ನಗರದಲ್ಲಿ ಇಂದು ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪರಿಶೀಲನಾ ಸಭೆಗೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಗೈರಾಗಿದ್ದಕ್ಕೆ ಸಚಿವ ಯು.ಟಿ. ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಭೆಗೆ ಮಾಹಿತಿ ನೀಡದೆ ಗೈರಾದ ಅಧಿಕಾರಿಗಳ ವಿರುದ್ಧ ಖಡಕ್ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಮಂಗಳೂರು, ಸೆ.15: ನಗರದಲ್ಲಿ ಇಂದು ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪರಿಶೀಲನಾ ಸಭೆಗೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಗೈರಾಗಿದ್ದಕ್ಕೆ ಸಚಿವ ಯು.ಟಿ. ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಭೆಗೆ ಮಾಹಿತಿ ನೀಡದೆ ಗೈರಾದ ಅಧಿಕಾರಿಗಳ ವಿರುದ್ಧ ಖಡಕ್ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಕೆಡಿಪಿ ಸಭೆಗೆ ಕಮಿಷನರ್ ಗೈರಾಗಿರುವ ವಿಚಾರ ಪ್ರಸ್ತಾಪವಾಗುತ್ತಿದ್ದಂತೆ ಅಧಿಕಾರಿಗಳ ವಿರುದ್ಧ ಗರಂ ಆದ ಯು.ಟಿ. ಖಾದರ್, “ನಿಯಮದ ಬಗ್ಗೆ ಮಾತನಾಡುವವರು ನಿಯಮ ಪಾಲಿಸೋದು ಬೇಡ್ವಾ? ನನಗೆ ಯಾವುದೇ ಮಾಹಿತಿ ನೀಡದೆ ಸಭೆಗೆ ಯಾಕೆ ಬಂದಿಲ್ಲ?” ಎಂದು ಪ್ರಶ್ನಿಸಿದ್ದಾರೆ.

‘ಒಂದು ದಿನ ಮುಂಚಿತವಾಗಿ ಮಾಹಿತಿ ನೀಡಬೇಕು’

ಯಾವುದೇ ಅಧಿಕಾರಿ ಕೆಡಿಪಿ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದರೆ, ಸಭೆಗೆ ಕನಿಷ್ಠ ಒಂದು ದಿನ ಮುಂಚಿತವಾಗಿ ಪತ್ರದ ಮೂಲಕ ತಮಗೆ ಅಥವಾ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಖಾದರ್ ಸ್ಪಷ್ಟ ಸೂಚನೆ ನೀಡಿದ್ದಾರೆ. “ಸಭೆಗೆ ಗೈರಾಗಬೇಕಾದ ಸಂದರ್ಭವಿದ್ದರೆ ಮುಂಚಿತವಾಗಿಯೇ ಮಾಹಿತಿ ನೀಡುವುದು ಕಡ್ಡಾಯ. ಅಧಿಕಾರಿಗಳು ತಮ್ಮ ಗೈರುಹಾಜರಿಯ ಬಗ್ಗೆ ಕಾರಣವನ್ನು ತಿಳಿಸಿ ಅನುಮತಿ ಪಡೆಯಬೇಕು” ಎಂದು ಅವರು ಹೇಳಿದ್ದಾರೆ.

ಮಾಹಿತಿ ನೀಡದೆ ಗೈರಾದರೆ ಗಂಭೀರ ಕ್ರಮ

ಮುಂದಿನ ದಿನಗಳಲ್ಲಿ ಯಾವುದೇ ಅಧಿಕಾರಿ ಕೆಡಿಪಿ ಸಭೆಗೆ ಗೈರಾಗುವಂತಿದ್ದರೆ, ಕಾರಣವನ್ನು ಮುಂಚಿತವಾಗಿ ತಿಳಿಸಬೇಕು. ಯಾವುದೇ ಮಾಹಿತಿ ನೀಡದೆ ಸಭೆಗೆ ಗೈರಾದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಯು.ಟಿ. ಖಾದರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಪ್ರಮುಖ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಯುವ ಕೆಡಿಪಿ ಸಭೆಗೆ ಜವಾಬ್ದಾರಿಯುತ ಅಧಿಕಾರಿಗಳು ಗೈರಾಗುವುದು ಸರಿಯಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಗೈರುಹಾಜರಿ ಹಾಗೂ ಈ ವಿಚಾರದಲ್ಲಿ ಯು.ಟಿ. ಖಾದರ್ ನೀಡಿದ ಖಡಕ್ ಎಚ್ಚರಿಕೆ ಇದೀಗ ಕೆಡಿಪಿ ಸಭೆಯ ಪ್ರಮುಖ ಚರ್ಚೆಯ ವಿಷಯವಾಗಿದೆ.

U.T. Khader expressed strong displeasure over Police Commissioner Sudheer Kumar Reddy’s absence from the quarterly Karnataka Development Programme (KDP) review meeting held in the city on Monday. He also warned of strict action against officials who remain absent without prior intimation.