ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿ, ಪರ್ಯಾಯ ರಸ್ತೆ ಬಳಸಲು ಪೊಲೀಸರ ಸೂಚನೆ 

16-09-26 06:28 pm       HK News Desk   ಕರಾವಳಿ

ಸೆ.18ರಂದು ಮಂಗಳೂರಿನ ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆಯನ್ನು ಆಯೋಜಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಸಂಪುಟ ದರ್ಜೆಯ ಸಚಿವರು ಬರಲಿದ್ದಾರೆ. ಸಂಪುಟ ಸಭೆಯಲ್ಲಿ ಪಾಲ್ಗೊಂಡು ಮಧ್ಯಾಹ್ನ ಮೇರಿಹಿಲ್‌ನಲ್ಲಿರುವ ಹೆಲಿಪ್ಯಾಡ್ ಮುಖಾಂತರ ಉಡುಪಿಗೆ ತೆರಳಿ ನಂತರ ಮಂಗಳೂರು ನಗರಕ್ಕೆ ವಾಪಸ್ಸಾಗಿ ತಂಗಲಿದ್ದು, ಸೆ.19ರ ಬೆಳಗ್ಗೆ ನಿರ್ಗಮಿಸಲಿದ್ದಾರೆ. ಇದರಿಂದ ನಗರದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಂಚಾರ ಸುವ್ಯವಸ್ಥೆ ಹಿತದೃಷ್ಟಿಯಿಂದ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಉಪಯೋಗಿಸಲು ಪೊಲೀಸ್ ಇಲಾಖೆ ಸೂಚಿಸಿದೆ.

ಮಂಗಳೂರು, ಸೆ.16  ಸೆ.18ರಂದು ಮಂಗಳೂರಿನ ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆಯನ್ನು ಆಯೋಜಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಸಂಪುಟ ದರ್ಜೆಯ ಸಚಿವರು ಬರಲಿದ್ದಾರೆ. ಸಂಪುಟ ಸಭೆಯಲ್ಲಿ ಪಾಲ್ಗೊಂಡು ಮಧ್ಯಾಹ್ನ ಮೇರಿಹಿಲ್‌ನಲ್ಲಿರುವ ಹೆಲಿಪ್ಯಾಡ್ ಮುಖಾಂತರ ಉಡುಪಿಗೆ ತೆರಳಿ ನಂತರ ಮಂಗಳೂರು ನಗರಕ್ಕೆ ವಾಪಸ್ಸಾಗಿ ತಂಗಲಿದ್ದು, ಸೆ.19ರ ಬೆಳಗ್ಗೆ ನಿರ್ಗಮಿಸಲಿದ್ದಾರೆ. ಇದರಿಂದ ನಗರದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಂಚಾರ ಸುವ್ಯವಸ್ಥೆ ಹಿತದೃಷ್ಟಿಯಿಂದ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಉಪಯೋಗಿಸಲು ಪೊಲೀಸ್ ಇಲಾಖೆ ಸೂಚಿಸಿದೆ.

ಗಣ್ಯರ ಸಂಚಾರ ಇರುವ ರಸ್ತೆಗಳು 

ಸೆ.17ರ ಸಂಜೆ ಮತ್ತು ಸೆ.19ರ ಬೆಳಗ್ಗೆ ವರೆಗೆ - ಬಜಪೆ ವಿಮಾನ ನಿಲ್ದಾಣದಿಂದ ಕಾವೂರು - ಬೋಂದೆಲ್ – ಮೇರಿಹಿಲ್ – ಕೆ.ಪಿ.ಟಿ. - ಕದ್ರಿ ಕಂಬಳ -  ಬಂಟ್ಸ್ ಹಾಸ್ಟೆಲ್- ಬಿ.ಆರ್.ಅಂಬೇಡ್ಕರ್ ಜಂಕ್ಷನ್ - ಹಂಪನ್ ಕಟ್ಟೆ - ಕ್ಲಾಕ್ ಟವರ್ - ಹ್ಯಾಮಿಲ್ಟನ್ ಜಂಕ್ಷನ್.

ಸೆ.18-09-2026 ರಂದು ಬೆಳಗ್ಗೆ - ಹ್ಯಾಮಿಲ್ಟನ್ ಜಂಕ್ಷನ್ - ಕ್ಲಾಕ್ ಟವರ್- ಹಂಪನಕಟ್ಟ - ಡಾ| ಬಿ.ಆರ್.ಅಂಬೇಡ್ಕರ್ ಜಂಕ್ಷನ್ - ಕೆ.ಪಿ.ಟಿ.ಜಂಕ್ಷನ್ - ನಂತೂರು ವೃತ್ತ - ಪಂಪುವೆಲ್ - ನಾಗುರಿ - ಬಜಾಲ್ ಕ್ರಾಸ್ (ಪ್ರಜಾಸೌಧ)- ಪಡೀಲ್ ಜಂಕ್ಷನ್.

ಮೇಲ್ಕಂಡ ಮಾರ್ಗಗಳಲ್ಲಿ ರಸ್ತೆಬದಿಯಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡದಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ. ಆಂಬ್ಯುಲೆನ್ಸ್ ಹಾಗೂ ಇತರೆ ತುರ್ತು ಸೇವಾ ವಾಹನಗಳ ಸಂಚಾರಕ್ಕೆ ಯಾವುದೇ ಅಡಚಣೆ ಇರುವುದಿಲ್ಲ. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಸುಗಮ ಸಂಚಾರಕ್ಕೆ ಅನುವು ಮಾಡುವುದು. 

ಬದಲಿ ಮಾರ್ಗಗಳು 

👉🏻    ಬದ್ರಿಯಾ ಜಂಕ್ಷನ್‌ನಿಂದ ಹೋಟೆಲ್ ತಾಜ್ ವಿವಾಂತ್ ಮುಂಭಾಗದ ಮೂಲಕ ಹ್ಯಾಮಿಲ್ಟನ್ ಜಂಕ್ಷನ್ ಕಡೆಗೆ ಸಂಚರಿಸಬೇಕಾದ ಎಲ್ಲಾ ತರಹದ ವಾಹನಗಳು ಪರ್ಯಾಯವಾಗಿ ಬದ್ರಿಯಾ ಜಂಕ್ಷನ್ - ನೀಲೇಶ್ವರ ರಸ್ತೆ – ರೋಸಾರಿಯೋ ರಸ್ತೆ ಮುಖೇನ ಸಂಚರಿಸುವುದು.

👉🏻    ಅದೇ ರೀತಿ ಹ್ಯಾಮಿಲ್ಟನ್ ಜಂಕ್ಷನ್‌ನಿಂದ ಹೋಟೆಲ್ ತಾಜ್ ವಿವಾಂತ್ ಮುಂಭಾಗದ ಮೂಲಕ ಬದ್ರಿಯಾ ಜಂಕ್ಷನ್ ಕಡೆಗೆ ಸಂಚರಿಸಬೇಕಾದ ಎಲ್ಲಾ ತರಹದ ವಾಹನಗಳು ಪರ್ಯಾಯವಾಗಿ ಹ್ಯಾಮಿಲ್ಟನ್ ಜಂಕ್ಷನ್ – ನೆಲ್ಲಿಕಾಯಿ ರಸ್ತೆ ಮುಖೇನ ಸಂಚರಿಸುವುದು.

👉🏻    ಪಂಪುವೆಲ್ ಜಂಕ್ಷನ್‌ನಿಂದ ನಾಗುರಿ ಮೂಲಕ ಪಡೀಲ್ ಜಂಕ್ಷನ್ ಕಡೆಗೆ ಅಥವಾ ಪಡೀಲ್ ಜಂಕ್ಷನ್ ಕಡೆಯಿಂದ ನಾಗುರಿ ಮೂಲಕ ಪಂಪುವೆಲ್ ಕಡೆಗೆ ಸಂಚರಿಸಬೇಕಾದ ಎಲ್ಲಾ ತರಹದ ವಾಹನಗಳು ಪರ್ಯಾಯವಾಗಿ ನಂತೂರು ವೃತ್ತ – ಕೈಕಂಬ - ಮರೋಳಿ ಮೂಲಕ ಅಥವಾ ತೊಕ್ಕೊಟ್ಟು – ದೇರಳಕಟ್ಟೆ – ಮುಡಿಪು - ಬೊಳ್ಯಾರ್ – ಮೆಲ್ಕಾರ್ ಮೂಲಕ ಸಂಚರಿಸುವುದು. 

👉🏻    ಬಜಾಲ್ ಕ್ರಾಸ್(ಪ್ರಜಾಸೌಧ) ನಿಂದ ಬಜಾಲ್ ಕಡೆಗೆ ಅಥವಾ ಕಂಕನಾಡಿ ಜಂಕ್ಷನ್ ರೈಲ್ವೆ ನಿಲ್ದಾಣ ಕಡೆಗೆ ಬರುವ ಮತ್ತು ಹೋಗುವ ಎಲ್ಲಾ ತರಹದ ವಾಹನಗಳು ಪಡಿಲ್ ಬಜಾಲ್ ಕ್ರಾಸ್‌ಗೆ ಪರ್ಯಾಯವಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮುಂದುವರಿದು ಜಪ್ಪಿನಮೊಗರು ದ್ವಾರ - ಬಜಾಲ್  ಮೂಲಕ ಸಂಚರಿಸುವುದು.

👉🏻    ತೊಕ್ಕೊಟ್ಟು ಕಡೆಯಿಂದ ಪಂಪುವೆಲ್ ಕಡೆಗೆ ಸಂಚರಿಸುವ ವಾಹನಗಳು ಮಹಾಕಾಳಿಪಡ್ಪು – ಮಂಗಳಾದೇವಿ ಮೂಲಕ ನಗರಕ್ಕೆ ಸಂಚರಿಸುವುದು ಎಂದು ಮಂಗಳೂರು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.