ಬ್ರೇಕಿಂಗ್ ನ್ಯೂಸ್
17-09-26 09:41 am HK News Staffer ಕರಾವಳಿ
ಕಾರವಾರ, ಸೆಪ್ಟೆಂಬರ್ 17: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೇಳಿಬಂದಿದೆ. ಬುಧವಾರ ರಾತ್ರಿ ಗುಳ್ಮಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಕಲ್ಲು ತೂರಾಟದಿಂದ ಕಟ್ಟಡದ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ದೂರು ನೀಡಲಾಗಿದೆ.
ಭಟ್ಕಳದ ತಲಾಂದದಿಂದ ಸಾರ್ವಜನಿಕ ಗಣೇಶ ವಿಸರ್ಜನಾ ಮೆರವಣಿಗೆ ಆರಂಭವಾಗಿತ್ತು. ಮೆರವಣಿಗೆ ಗುಳ್ಮಿ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದ ವೇಳೆ, ರಸ್ತೆಯ ಪಕ್ಕದಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ನೆಲಮಹಡಿಯಲ್ಲಿರುವ ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಅಪರಿಚಿತರು ಕಲ್ಲು ತೂರಿದ್ದಾರೆ ಎಂದು ಆರೋಪಿಸಲಾಗಿದೆ.
ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಸ್ಥಳೀಯರು
ಘಟನೆ ಸಂಬಂಧ ಸ್ಥಳೀಯ ಅಬ್ದುಲ್ ಅಲಿಂ ಅವರು ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಲ್ಲು ತೂರಾಟದಿಂದ ಕಟ್ಟಡದ ಎರಡು ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆಗೆ ಕಾರಣರಾದವರನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಮುಸ್ಲಿಮರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು.
ಸ್ಥಳಕ್ಕೆ ಎಸ್ಪಿ ಭೇಟಿ: ಆರೋಪಿಗಳ ಬಂಧನದ ಭರವಸೆ
ವಿಷಯ ತಿಳಿದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃತ್ಯ ಎಸಗಿದವರನ್ನು ಪತ್ತೆಹಚ್ಚಿ ಬಂಧಿಸುವುದಾಗಿ ಎಸ್ಪಿ ಭರವಸೆ ನೀಡಿದ ಬಳಿಕ ಸ್ಥಳೀಯರು ಪೊಲೀಸ್ ಠಾಣೆಯಿಂದ ತೆರಳಿದರು.
ಭಟ್ಕಳದಲ್ಲಿ ಬಿಗಿ ಬಂದೋಬಸ್ತ್: ಹೆಚ್ಚುವರಿ ಪೊಲೀಸರ ನಿಯೋಜನೆ
ಘಟನೆ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ಕಲ್ಲು ತೂರಾಟದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಗಣೇಶ ವಿಸರ್ಜನಾ ಮೆರವಣಿಗೆ ಸಾಗಿದ ಮಾರ್ಗದಲ್ಲಿನ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಲಭ್ಯವಿರುವ ಇತರ ಮಾಹಿತಿಗಳನ್ನು ಪರಿಶೀಲಿಸಿ ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳುತ್ತಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm