ಬ್ರೇಕಿಂಗ್ ನ್ಯೂಸ್
23-09-26 09:55 am HK News Staffer ಕರಾವಳಿ
ಉಳ್ಳಾಲ, ಸೆ.23: ಮಂಗಳೂರಿನಿಂದ ರೈಲಿನಲ್ಲಿ ಪವಿತ್ರ ಚಾರ್ ಧಾಮ್ ಯಾತ್ರೆಗೆ ತೆರಳಿದ್ದ ಕುಂಪಲ ನಿವಾಸಿ ವ್ಯಕ್ತಿಯೋರ್ವರು ಉತ್ತರಾಖಂಡದ ಯಮುನೋತ್ರಿಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ತಾಲೂಕಿನ ಕುಂಪಲದ ವಿದ್ಯಾನಗರ ನಿವಾಸಿ ರಾಜೇಶ್ ಗಾಣಿಗ(53) ಹೃದಯಾಘಾತಕ್ಕೆ ಬಲಿಯಾದ ವ್ಯಕ್ತಿ. ರಾಜೇಶ್ ಅವರು ಕಳೆದ ಸೆ.18ರ ಶುಕ್ರವಾರ ಉಳ್ಳಾಲದ ಹದಿನಾಲ್ಕು ಮಂದಿ ಸಹ ಯಾತ್ರಿಕರೊಂದಿಗೆ ಮಂಗಳೂರಿನಿಂದ ರೈಲಿನ ಮೂಲಕ ಚಾರ್ ಧಾಮ್ ಯಾತ್ರೆ ಹೊರಟಿದ್ದರು. ಉತ್ತರ ಭಾರತದ ಪವಿತ್ರ ಕ್ಷೇತ್ರಗಳಾದ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ, ಬದರಿನಾಥ್ ಗೆ ಭೇಟಿ ಕೊಟ್ಟು ಅಕ್ಟೋಬರ್ 5ರಂದು ಊರಿಗೆ ಮರಳುವ ಯೋಜನೆಯನ್ನು ರೂಪಿಸಿದ್ದರು.
ಸೋಮವಾರ ತಂಡವು ಉತ್ತರಾಖಂಡಕ್ಕೆ ತಲುಪಿ ಪ್ರವಾಸಿ ಕೇಂದ್ರದ ಕೊಠಡಿಯೊಂದರಲ್ಲಿ ವಿಶ್ರಾಂತಿ ಪಡೆದಿತ್ತು. ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಗಿರಿ ಶಿಖರಗಳಲ್ಲಿ ಏಳು ಕಿಲೋ ಮೀಟರ್ ಪಾದಯಾತ್ರೆಯಲ್ಲಿ ಕ್ರಮಿಸಿದ ತಂಡವು ಯಮುನೋತ್ರಿಗೆ ತಲುಪಿತ್ತು. ಈ ವೇಳೆ ದೇವಿಯ ದರ್ಶನ ಪಡೆದಿದ್ದ ರಾಜೇಶ್ ಅವರು ಕ್ಷೇತ್ರದ ಆವರಣದ ಕುರ್ಚಿಯೊಂದರಲ್ಲಿ ಕುಳಿತ್ತಿದ್ದಾಗ ಹಠಾತ್ತನೆ ಕುಸಿದು ಬಿದ್ದಿದ್ದಾರೆ. ರಾಜೇಶ್ ಅವರನ್ನ ಕೂಡಲೇ ಸಹಪಾಠಿಗಳು ಸಮೀಪದ ಆಸ್ಪತ್ರೆಯೊಂದಕ್ಕೆ ದಾಖಲಿಸಿದರೂ ದಾರಿ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆನ್ನಲಾಗಿದೆ.
ಮೃತ ರಾಜೇಶ್ ಅವರ ಮೃತದೇಹವನ್ನು ಉತ್ತರಾಖಂಡದ ಡೆಹ್ರಡೂನಿನ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನ ಇಂದು ಏರ್ ಲಿಫ್ಟ್ ಮಾಡಲಿದ್ದು ಮಂಗಳೂರಿಗೆ ತರಲು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ವ್ಯವಸ್ಥೆ ರೂಪಿಸಿದ್ದಾರೆ. ಇದಕ್ಕಾಗಿ ಸತೀಶ್ ಕುಂಪಲ ಅವರು ಉತ್ತರಾಖಂಡದ ಬಿಜೆಪಿ ಶಾಸಕರೊಂದಿಗೆ ನಿರಂತರ ಸಂಪರ್ಕ ಇಟ್ಟು ಮಾತುಕತೆ ನಡೆಸಿದ್ದಾರೆ.
ರಾಜೇಶ್ ಅವರ ಅಕಾಲಿಕ ಸಾವಿನಿಂದ ದುಃಖ ತಪ್ತರಾದ ಮಂಗಳೂರಿನ ಹದಿನಾಲ್ಕು ಸಹ ಯಾತ್ರಿಗಳು ಕೂಡಾ ತಮ್ಮ ಚಾರ್ ಧಾಮ್ ಯಾತ್ರೆಯನ್ನ ಅರ್ಧಕ್ಕೆ ಮೊಟಕುಗೊಳಿಸಿ ರೈಲಿನ ಮೂಲಕ ಮಂಗಳೂರಿಗೆ ಮರಳಲಿದ್ದಾರೆ. ಮೃತ ರಾಜೇಶ್ ಅವರು ವೃತ್ತಿಯಲ್ಲಿ ವೆಲ್ಡರ್ ಆಗಿದ್ದು, ಜಪ್ಪಿನಮೊಗರಿನಲ್ಲಿ ಸ್ವಂತ ವರ್ಕ್ ಶಾಪ್ ಹೊಂದಿದ್ದರು. ಅವರು ಪತ್ನಿ , ಇಬ್ಬರು ಮಕ್ಕಳನ್ನ ಅಗಲಿದ್ದಾರೆ.
A 53-year-old man from Kumpala in Ullal taluk died of a heart attack at Yamunotri in Uttarakhand on Tuesday while on a Char Dham pilgrimage with fellow travellers from Mangaluru.
23-09-26 09:28 am
HK News Staffer
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 09:32 am
HK News Staffer
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm