ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿ ಭೇಟಿ, ದೇವರ ದರ್ಶನ 

23-09-26 10:47 pm       HK News Desk   ಕರಾವಳಿ

ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬುಧವಾರ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಮತ್ತು ಟೀಮ್ ಇಂಡಿಯಾದ ಮಾಜಿ ತರಬೇತುದಾರ ರವಿ ಶಾಸ್ತ್ರಿ ಭೇಟಿ ನೀಡಿ ದೇವರ ದರ್ಶನ ಪಡೆದರು. 

ಸುಬ್ರಹ್ಮಣ್ಯ, ಸೆ.23 ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬುಧವಾರ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಮತ್ತು ಟೀಮ್ ಇಂಡಿಯಾದ ಮಾಜಿ ತರಬೇತುದಾರ ರವಿ ಶಾಸ್ತ್ರಿ ಭೇಟಿ ನೀಡಿ ದೇವರ ದರ್ಶನ ಪಡೆದರು. 

ದೇವರ ದರ್ಶನ ಮಾಡಿದ ಅವರಿಗೆ ದೇವಳದ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಅವರು ಕ್ಷೇತ್ರದ ಅಂಗಣದಲ್ಲಿರುವ ಹೊಸಳಿಗಮ್ಮನ ದರುಶನ ಪಡೆದರು.

ಇದೇ ವೇಳೆ, ರವಿ ಶಾಸ್ತ್ರಿ ಅವರು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿದರು. ಸ್ವಾಮೀಜಿಗಳು ರವಿ ಶಾಸ್ತ್ರಿ ಅವರಿಗೆ ಶಾಲು ಹೊದಿಸಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು. ಈ ಸಂದರ್ಭ ಶಿರೂರು ಮಠದ ದಿವಾನ ಲಾತವ್ಯ ಆಚಾರ್, ಕುಕ್ಕೆ ದೇವಳದ ಅಧೀಕ್ಷಕ ಕೆ.ಎಂ. ಗೋಪಿನಾಥ್ ನಂಬೀಶ, ನಿವೃತ್ತ ಶಿಷ್ಟಾಚಾರ ಅಧಿಕಾರಿ ಎ. ವೆಂಕಟ್ರಾಜ್ ಮತ್ತಿತರರು ಉಪಸ್ಥಿತರಿದ್ದರು. ರವಿ ಶಾಸ್ತ್ರಿಯವರು ಪ್ರತಿ ವರ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವುದನ್ನು ರೂಢಿ ಮಾಡಿಕೊಂಡಿದ್ದಾರೆ.