ಬ್ರೇಕಿಂಗ್ ನ್ಯೂಸ್
24-09-26 05:55 pm HK News Staffer ಕರಾವಳಿ
ಮಂಗಳೂರು, ಸೆ.24: ಕರಾವಳಿಯ ದಕ್ಷಿಣ ಕನ್ನಡ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಗುರುವಾರ ಸಾಧಾರಣ ಮಳೆಯಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರ, ಹೊನ್ನಾವರ, ಕುಮಟಾ, ಭಟ್ಕಳ, ಸಿದ್ದಾಪುರ ತಾಲ್ಲೂಕುಗಳಲ್ಲಿ ಮತ್ತು ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರ ತಾಲ್ಲೂಕುಗಳ ಅಲ್ಲಲ್ಲಿ ಸಾಧಾರಣ ಮಳೆಯಾಗಿದ್ದು, ಬೆಳಗಾವಿ, ಧಾರವಾಡ, ಬಾಗಲಕೋಟೆ, ಬಿಜಾಪುರ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಹಲವೆಡೆ ಉತ್ತಮ ಮಳೆಯಾಗಿದ್ದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಕಡಿಮೆ ಆಗಿತ್ತು.
ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ. ಎಲ್ಲಾ ಜಿಲ್ಲೆಗಳಲ್ಲಿ ಶನಿವಾರ ಬೆಳಗ್ಗೆ ತನಕ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದ.ಕ ಜಿಲ್ಲೆಗಳಲ್ಲಿ ಭಾಗಶಃ ಮೋಡವಿದ್ದು ಮಧ್ಯಾಹ್ನದಿಂದ ತುಂತುರು ಅಥವಾ ಸಾಮಾನ್ಯ ಮಳೆಯಾಗಬಹುದು. ಉಡುಪಿ, ಉ.ಕ ಜಿಲ್ಲೆಗಳ ಕರಾವಳಿ ತೀರದ ತಾಲ್ಲೂಕುಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಬಹುದು. ಕೊಡಗು ಜಿಲ್ಲೆಯಲ್ಲಿ ಕೆಲವೆಡೆ ಸಣ್ಣ ಮಳೆಯಾಗಲಿದ್ದು ಕೊಡಗು, ಹಾಸನ ಜಿಲ್ಲೆಯ ಕರಾವಳಿಗೆ ಹೊಂದಿಕೊಂಡಿರುವ ಘಟ್ಟ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ ಕೊನೆಗೆ ಪೂರ್ವದ ಗುಡುಗು ಮಳೆ ಆಗಬಹುದು.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ತುಂತುರು ಕೆಲವೆಡೆ ಸಾಮಾನ್ಯ ಮಳೆಯಾಗಬಹುದು. ಸೆಪ್ಟೆಂಬರ್ 29 ರಿಂದ ಮತ್ತೆ ಗುಡುಗು ಮಳೆಯ ಮುನ್ಸೂಚನೆ ಇದೆ. ಬೀದರ್, ಕಲ್ಬುರ್ಗಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬಿಜಾಪುರ, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು.




ಬಂಗಾಳ ಕೊಲ್ಲಿಯ ಲೋ ಪ್ರೆಷರ್ ಈಗಾಗಲೇ ಒರಿಸ್ಸಾ, ಆಂಧ್ರ ಗಡಿಭಾಗದಲ್ಲಿ ಭೂ ಪ್ರವೇಶಿಸಿದ್ದು ಇದು ಉತ್ತರ ದಿಕ್ಕಿನಲ್ಲಿ ಹಿಮಾಲಯದತ್ತ ಚಲಿಸಬಹುದು. ಪೂರ್ವ ಭಾರತ ಮತ್ತು ಹಿಮಾಲಯದ ತಪ್ಪಲಿನ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಭಾರತದ ಪಶ್ಚಿಮ ಕರಾವಳಿ ಜಿಲ್ಲೆಗಳಲ್ಲಿ 2-3 ದಿನ ಉತ್ತಮ ಮಳೆಯಾಗಲಿದ್ದು ಇದು ದುರ್ಬಲ ಆಗುತ್ತಿದ್ದಂತೆ ಸೆ.26ರಿಂದ ರಾಜ್ಯದಲ್ಲಿ ಮಳೆ ಕಡಿಮೆ ಆಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳ ವರದಿ ತಿಳಿಸಿದೆ.
Several parts of Karnataka received moderate to good rainfall on Thursday, with heavier showers reported in parts of Uttara Kannada and Udupi districts. Coastal Dakshina Kannada and Kasaragod also recorded moderate rainfall.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
24-09-26 06:26 pm
HK News Staffer
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm