ಬ್ರೇಕಿಂಗ್ ನ್ಯೂಸ್
27-09-26 10:59 am HK News Desk ಕರಾವಳಿ
ಮಂಗಳೂರು, ಸೆ.27: ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಸಂದರ್ಭದಲ್ಲಿ ಕಟ್ಟಡದ ವೆರಾಂಡಾದ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದು ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಯು ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಹಳೆಯಂಗಡಿ ನಿವಾಸಿಯಾಗಿದ್ದು ಸದ್ಯ ಪಾಂಡೇಶ್ವರದ ಫ್ಲಾಟ್ ನಲ್ಲಿ ಹೆತ್ತವರ ಜೊತೆಗೆ ವಾಸವಿದ್ದ ಮೊಯ್ದೀನ್ ಶಮ್ಮಾಸ್ (16) ಮೃತ ವಿದ್ಯಾರ್ಥಿ. ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಈತ ಪಿಯು ಕಾಮರ್ಸ್ ಓದುತ್ತಿದ್ದ ಎಂದು ತಿಳಿದುಬಂದಿದೆ.
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ ನಡೆದು ಪದಾಧಿಕಾರಿಗಳ ಆಯ್ಕೆಯಾಗಿ ಪಾಂಡೇಶ್ವರದ ಎಮ್ಮೆಕೆರೆಯ ರಮಾ ಲಕ್ಷ್ಮೀನಾರಾಯಣ ಹಾಲ್ ನಲ್ಲಿ ನಿನ್ನೆ ಸೆ.26ರಂದು ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕಾಗಿ ವಿದ್ಯಾರ್ಥಿಗಳು ರ್ಯಾಲಿಯಲ್ಲಿ ಬರುತ್ತಿದ್ದಾಗ ಒಂದಷ್ಟು ವಿದ್ಯಾರ್ಥಿಗಳು ಕಟ್ಟಡದ ಮೊದಲ ಮಹಡಿಯ ವೆರಾಂಡಾದಲ್ಲಿ ವೀಕ್ಷಿಸುತ್ತ ನಿಂತಿದ್ದರು. ಈ ವೇಳೆ, ವೆರಾಂಡಾದ ಬದಿಯ ತಡೆಗೋಡೆಗೆ ಭಾರ ಬಿದ್ದು ಕುಸಿದಿದ್ದರಿಂದ ಅಲ್ಲಿದ್ದ ವಿದ್ಯಾರ್ಥಿಗಳು ಸಹಿತ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ನೆಲಕ್ಕೆ ಬಿದ್ದಿದೆ. ಈ ವೇಳೆ, ಮಹಮ್ಮದ್ ಶಮ್ಮಾಸ್ ಕಟ್ಟಡದ ಕೆಳಗಡೆ ನಿಂತು ರ್ಯಾಲಿ ನೋಡುತ್ತಿದ್ದಾಗ ಆತನ ತಲೆಯ ಮೇಲೆ ಸ್ಲ್ಯಾಬ್ ಬಿದ್ದಿದ್ದು ತಲೆಯ ಚಿಪ್ಪು ಒಡೆದು ಹೋಗಿದೆ. ಭುಜಕ್ಕೆ ಮತ್ತು ಬೆನ್ನಿಗೆ ತೀವ್ರ ಗಾಯವಾಗಿದ್ದು ಸ್ಥಳೀಯರು ಕೂಡಲೇ ಆತನನ್ನು ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಿದ್ದರು. ರಾತ್ರಿ 11.30ರ ವೇಳೆಗೆ ವೈದ್ಯರು ಯುವಕ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ. ಕಟ್ಟಡದ ಮೇಲಿನಿಂದ ಬಿದ್ದ ರಭಸಕ್ಕೆ ನಾಲ್ವರು ವಿದ್ಯಾರ್ಥಿಗಳು ಕೂಡ ಗಂಭೀರ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.
ಘಟನೆ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಕಟ್ಟಡದ ಮಾಲಕ ಪರೀಕ್ಷಿತ್ ರೈ ಮತ್ತು ಕಾರ್ಯಕ್ರಮ ಆಯೋಜಿಸಿದ್ದ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಸ್ಥಾಪಕ ವಕೀಲ ದಿನಕರ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಟ್ಟಡ ಹಳೆಯದಾಗಿದ್ದರೂ, ಕಾರ್ಯಕ್ರಮ ಮಾಡಲು ಅವಕಾಶ ನೀಡಿರುವುದಲ್ಲದೆ, ವಿದ್ಯಾರ್ಥಿಗಳ ಜೀವದ ಬಗ್ಗೆ ನಿರ್ಲಕ್ಷ್ಯ ಮಾಡಿದ್ದರಿಂದ ಘಟನೆ ಸಂಭವಿಸಿದೆ ಎಂದು ಪೊಲೀಸರು ಬಿಎನ್ಎಸ್ ಸೆಕ್ಷನ್ 106(1), 125 ಎ, 125 ಬಿ ಹಾಗೂ 290 ಅಡಿ ಕೇಸು ದಾಖಲಿಸಿದ್ದಾರೆ.
A PU student died after a concrete slab on the first floor of a building collapsed during a student union oath-taking ceremony. Following the incident, police registered an FIR against the building owner and the advocate who organised the event.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm