ಬ್ರೇಕಿಂಗ್ ನ್ಯೂಸ್
29-09-26 11:41 am HK News Staffer ಕರಾವಳಿ
ಮಂಗಳೂರು, ಸೆ.29 : ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆ ಬಳಕೆ ಹಾಗೂ ಬಂಧನಗಳನ್ನು ವಿರೋಧಿಸಿ ಬಿ.ಸಿ.ರೋಡ್‌ನಲ್ಲಿ ನಡೆದ ವಿಹಿಂಪ ಮತ್ತು ಬಜರಂಗದಳದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡ ನಾಯಕರ ಹೇಳಿಕೆಗಳು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ. ಸಭೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಹ ಸಂಯೋಜಕ ಸತೀಶ್ ದಾವಣಗೆರೆ ಅವರು ಕರಾವಳಿಯ ಬಿಜೆಪಿ ಶಾಸಕರು ಮತ್ತು ಸಂಸದರು ಹಿಂದೂ ಕಾರ್ಯಕರ್ತರ ಪರವಾಗಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವಿಚಾರದಲ್ಲಿ ಇಬ್ಬರು ಪ್ರಮುಖರ ಆಡಿಯೋ ವೈರಲ್ ಆಗಿದ್ದು, ಬಿಜೆಪಿ ವಲಯದಲ್ಲೇ ಅಪಸ್ವರ ವ್ಯಕ್ತವಾಗಿದೆ.
ಸೆ.28ರಂದು ಸಭೆಯಲ್ಲಿ ಮಾತನಾಡಿದ ಸತೀಶ್ ದಾವಣಗೆರೆ, ಕರಾವಳಿಯ ಬಿಜೆಪಿ ಶಾಸಕರು ಮತ್ತು ಸಂಸದರು ತಮ್ಮ ರಾಜಕೀಯ ಸ್ಥಾನಮಾನಕ್ಕೆ ಹಿಂದೂ ಕಾರ್ಯಕರ್ತರ ಕೊಡುಗೆಯನ್ನು ಮರೆಯಬಾರದು ಎಂದು ಹೇಳಿದ್ದಲ್ಲದೆ, ವಿಧಾನಸೌಧ ಹಾಗೂ ಲೋಕಸಭೆಯಲ್ಲಿ ಕರಾವಳಿಯ ವಿಚಾರಗಳ ಬಗ್ಗೆ ಧ್ವನಿ ಎತ್ತಿ, ಸರ್ಕಾರದ ಗಮನಕ್ಕೆ ಇಲ್ಲಿನ ಬೆಳವಣಿಗೆಗಳನ್ನು ತರಬೇಕು ಎಂದು ಒತ್ತಾಯಿಸಿದ್ದು ಚರ್ಚೆಗೆ ಕಾರಣವಾಗಿದೆ.
ಈ ಭಾಗದಲ್ಲಿ ಹಿಂದೂ ಕಾರ್ಯಕರ್ತರು ದುರ್ಬಲರಾದರೆ ಶಾಸಕರು ಮತ್ತು ಸಂಸದರು ಕೂಡ ತಮ್ಮ ರಾಜಕೀಯ ನೆಲೆಯನ್ನು ಕಳೆದುಕೊಳ್ಳುವ ಪರಿಸ್ಥಿತಿ ಬರಬಹುದು. ಇದಕ್ಕಾಗಿ ಬಿಜೆಪಿ ಶಾಸಕರು ಕಾರ್ಯಕರ್ತರ ಪರವಾಗಿ ನಿಲ್ಲಬೇಕು ಎಂದು ಸತೀಶ್ ಆಗ್ರಹಿಸಿದರು. ಗಣೇಶೋತ್ಸವ ಸೇರಿದಂತೆ ಹಿಂದೂ ಕಾರ್ಯಕ್ರಮಗಳಿಗೆ ಅಡಚಣೆ ಮಾಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಿಂದೂ ಸಮುದಾಯದಲ್ಲಿ ಅಸಮಾಧಾನ ಮೂಡಿದೆ ಎಂದು ಹೇಳಿದ ಸತೀಶ್ ದಾವಣಗೆರೆ, ಇದೇ ವೇಳೆ ಬಿಜೆಪಿ ಶಾಸಕರು ಮತ್ತು ಸಂಸದರೂ ಕಾರ್ಯಕರ್ತರ ಅಸಮಾಧಾನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಕೃಷ್ಣಪ್ಪ ಕಲ್ಲಡ್ಕ ಹೆಸರಿನಲ್ಲಿ ವೈರಲ್ ಆದ ಆಡಿಯೋ
ಈ ಹೇಳಿಕೆಗಳ ಬೆನ್ನಲ್ಲೇ ಬಿಜೆಪಿ ಪ್ರಮುಖ ಕೃಷ್ಣಪ್ಪ ಕಲ್ಲಡ್ಕ ಅವರದ್ದು ಎಂದು ಹೇಳಲಾಗುತ್ತಿರುವ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಅದರಲ್ಲಿ ಕರ್ನಾಟಕ ಬಿಜೆಪಿ ಮಾಜಿ ಐಟಿ ಸೆಲ್ ಮುಖ್ಯಸ್ಥ ವಿಕಾಸ್ ಪುತ್ತೂರು ಅವರನ್ನು ಉದ್ದೇಶಿಸಿ ಮಾತನಾಡಿರುವ ಧ್ವನಿ ಕೇಳಿಬರುತ್ತದೆ. ಸತೀಶ್ ದಾವಣಗೆರೆ ಅವರ ಭಾಷಣವನ್ನು ಉಲ್ಲೇಖಿಸಿರುವ ಆಡಿಯೋದಲ್ಲಿ, ದಾವಣಗೆರೆಯಲ್ಲಿನ ರಾಜಕೀಯ ಬೆಳವಣಿಗೆಗಳು ಹಾಗೂ ಜಾತಿ ಆಧಾರಿತ ರಾಜಕೀಯದ ಕುರಿತು ಪ್ರಶ್ನೆಗಳನ್ನು ಎತ್ತಲಾಗಿದೆ. ಸತೀಶ್ ದಾವಣಗೆರೆ ಅವರು ಇಲ್ಲಿ ಹಿಂದುತ್ವದ ಕುರಿತು ಮಾತನಾಡುತ್ತಾರೆ, ಆದರೆ ತಮ್ಮ ಕ್ಷೇತ್ರದಲ್ಲಿ ಬೇರೆ ರೀತಿಯ ರಾಜಕೀಯ ನಡೆ ಅನುಸರಿಸುತ್ತಾರೆ ಎಂಬ ಆರೋಪಗಳನ್ನು ಆಡಿಯೋದಲ್ಲಿ ಮಾಡಲಾಗಿದೆ.
ಆಡಿಯೋದಲ್ಲಿ, ಇಂತಹ ಹೇಳಿಕೆಗಳು ಬಿಜೆಪಿ ಮತ್ತು ಸಂಘ ಪರಿವಾರದ ನಡುವೆ ಗೊಂದಲಕ್ಕೆ ಕಾರಣವಾಗಬಹುದು. ಈ ರೀತಿ ಅಪಸ್ವರ ಎತ್ತುವವರ ಬಗ್ಗೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಿಗೆ ಮಾಹಿತಿ ನೀಡಬೇಕು ಮತ್ತು ಸಂಘಟನೆಯಲ್ಲಿ ಇಂತಹವರಿಗೆ ಜವಾಬ್ದಾರಿ ನೀಡುವ ಬಗ್ಗೆ ಮರುಪರಿಶೀಲನೆ ನಡೆಸಬೇಕು ಎಂದು ಇಬ್ಬರು ಮಾತನಾಡಿಕೊಂಡಿದ್ದಾರೆ.



‘ಬಂಟ್ವಾಳದಲ್ಲಿ ಪಕ್ಷವನ್ನು ಕಟ್ಟಿದವರು ಇಲ್ಲಿದ್ದಾರೆ’
ಕೃಷ್ಣಪ್ಪ ಕಲ್ಲಡ್ಕ ಅವರದ್ದು ಎಂದು ಹೇಳಲಾಗುತ್ತಿರುವ ಆಡಿಯೋದಲ್ಲಿ ಬಂಟ್ವಾಳದ ಬಿಜೆಪಿ ಸಂಘಟನೆ ಮತ್ತು ಶಾಸಕ ರಾಜೇಶ್ ನಾಯ್ಕ್ ಅವರ ಬೆಂಬಲದ ಬಗ್ಗೆಯೂ ಉಲ್ಲೇಖಿಸಲಾಗಿದೆ. ಬಂಟ್ವಾಳದಲ್ಲಿ ಪಕ್ಷವನ್ನು ಕಟ್ಟಲು ಹಲವು ವರ್ಷಗಳಿಂದ ಕಾರ್ಯಕರ್ತರು ಶ್ರಮಿಸಿದ್ದಾರೆ. ಹೊರಗಿನಿಂದ ಬರುವ ಭಾಷಣಗಳಿಂದ ಇಲ್ಲಿನ ರಾಜಕೀಯ ಸ್ಥಿತಿ ಬದಲಾವಣೆ ಆಗುವುದಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ, ಸತೀಶ್ ದಾವಣಗೆರೆ ಅವರ ಹೇಳಿಕೆಗಳನ್ನು ಕಾಂಗ್ರೆಸ್ ಬಳಸಿಕೊಳ್ಳುವ ಸಾಧ್ಯತೆ ಬಗ್ಗೆಯೂ ಆಡಿಯೋದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ಈ ಬಗ್ಗೆ ಸ್ವತಃ ಸತೀಶ್ ಸ್ಪಷ್ಟನೆ ನೀಡಬೇಕು ಎಂಬ ಆಗ್ರಹವನ್ನೂ ಮಾಡಲಾಗಿದೆ. ಸಂಘಟನೆಯ ಕಾರ್ಯಕ್ರಮಗಳಿಗೆ ಇನ್ನು ಮುಂದೆ ಸಹಕಾರ ನೀಡುವುದಿಲ್ಲ ಮತ್ತು ಬಿಜೆಪಿ ಪರವಾಗಿಯೇ ಇರುವುದಾಗಿ ಹೇಳಿರುವ ಧ್ವನಿಯೂ ಆಡಿಯೋದಲ್ಲಿದೆ.
ಸಭೆಯಲ್ಲಿ ಬಿಜೆಪಿ ನಾಯಕರ ಎದುರಲ್ಲೇ ಹೇಳಿಕೆ
ಸೆ.28ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸೇರಿದಂತೆ ಹಲವು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು. ಇವರ ಎದುರಲ್ಲೇ ಅಪಸ್ವರದ ಮಾತನಾಡಿರುವುದು ಸಂಘ ಪರಿವಾರದ ಒಳಗೆ ಪರ- ವಿರೋಧಕ್ಕೆ ಕಾರಣವಾಗಿದೆ.
ಒಂದೆಡೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧದ ಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆದಿದ್ದರೆ, ಮತ್ತೊಂದೆಡೆ ಅದೇ ವೇದಿಕೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ಕಾರ್ಯವೈಖರಿ ಕುರಿತು ವ್ಯಕ್ತವಾದ ಟೀಕೆಗಳು ಮತ್ತು ಬಳಿಕ ಹರಿದಾಡುತ್ತಿರುವ ಪ್ರತಿಕ್ರಿಯಾತ್ಮಕ ಆಡಿಯೋ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆ ಬಳಕೆ ಹಾಗೂ ಬಂಧನಗಳನ್ನು ವಿರೋಧಿಸಿ ಬಿ.ಸಿ.ರೋಡ್‌ನಲ್ಲಿ ನಡೆದ ವಿಹಿಂಪ ಮತ್ತು ಬಜರಂಗದಳದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡ ನಾಯಕರ ಹೇಳಿಕೆಗಳು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ. ಸಭೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಹ ಸಂಯೋಜಕ ಸತೀಶ್ ದಾವಣಗೆರೆ ಅವರು ಕರಾವಳಿಯ ಬಿಜೆಪಿ ಶಾಸಕರು ಮತ್ತು ಸಂಸದರು ಹಿಂದೂ ಕಾರ್ಯಕರ್ತರ ಪರವಾಗಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವಿಚಾರದಲ್ಲಿ ಇಬ್ಬರು ಪ್ರಮುಖರ ಆಡಿಯೋ ವೈರಲ್ ಆಗಿದ್ದು, ಬಿಜೆಪಿ ವಲಯದಲ್ಲೇ ಅಪಸ್ವರ ವ್ಯಕ್ತವಾಗಿದೆ.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
29-09-26 11:41 am
HK News Staffer
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
30 ನಿಮಿಷದಲ್ಲಿ 3 ಸಾವಿರಕ್ಕೂ ಹೆಚ್ಚು ಬಾರಿ ಮುಂಗೈ ಸ...
28-09-26 08:33 pm
29-09-26 09:20 am
HK News Staffer
ಮಾಡೂರು ಇಸುಬು ಹತ್ಯೆ ಪ್ರಕರಣ ; ನಾಲ್ವರು ಆರೋಪಿಗಳು...
28-09-26 11:03 pm
ಮಂಗಳೂರಲ್ಲಿ ಡ್ರಗ್ಸ್ ಜಾಲಕ್ಕೆ ಸಿಸಿಬಿ ಶಾಕ್ : ₹ 24...
28-09-26 03:08 pm
ಹೆಲ್ಮೆಟ್ ರಹಿತ ಚಾಲನೆಯಿಂದ ಹೆಚ್ಚುತ್ತಿರುವ ಸಾವು- ನ...
27-09-26 08:06 pm
Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ...
27-09-26 06:10 pm