ಬ್ರೇಕಿಂಗ್ ನ್ಯೂಸ್
08-10-26 12:06 pm HK News Staffer ಕರಾವಳಿ
ಮಂಗಳೂರು, ಅ 8: ಸುಲ್ತಾನ್ ಗೋಲ್ಡ್ನಲ್ಲಿ ಖರೀದಿಸಿದ್ದ 48 ಗ್ರಾಂ ತೂಕದ ಚಿನ್ನದ ಸರವನ್ನು ಆಟೋ ರಿಕ್ಷಾದಲ್ಲಿ ಪ್ರಯಾಣಿಸುವ ವೇಳೆ ಆಕಸ್ಮಿಕವಾಗಿ ಬಿಟ್ಟುಹೋದ ಘಟನೆ ನಡೆದಿದೆ. ಆದರೆ, ಆಟೋ ಚಾಲಕನ ಸಮಯಪ್ರಜ್ಞೆ ಹಾಗೂ ಪ್ರಾಮಾಣಿಕತೆಯಿಂದ ಅಮೂಲ್ಯ ಚಿನ್ನದ ಸರ ಸುರಕ್ಷಿತವಾಗಿ ವಾರಸುದಾರರ ಕೈ ಸೇರಿದೆ.
ಅಫ್ಜಿಲಾ ಅವರು ಸುಲ್ತಾನ್ ಗೋಲ್ಡ್ನಲ್ಲಿ 48 ಗ್ರಾಂ ತೂಕದ ಚಿನ್ನದ ಸರವನ್ನು ಖರೀದಿಸಿದ್ದರು. ಬಳಿಕ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗ್ ಅನ್ನು ಅಜಾಗರೂಕತೆಯಿಂದ ಆಟೋದಲ್ಲೇ ಬಿಟ್ಟು ಹೋಗಿದ್ದರು.
ಪ್ರಯಾಣ ಮುಗಿದ ಬಳಿಕ ಬ್ಯಾಗ್ ಕಾಣೆಯಾಗಿರುವುದು ಗಮನಕ್ಕೆ ಬಂದಿದ್ದು, ಆತಂಕಗೊಂಡ ಅಫ್ಜಿಲಾ ಅವರು ಚಿನ್ನದ ಸರಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಇದೇ ವೇಳೆ ಆಟೋ ಚಾಲಕ ಬಸವರಾಜ್ ಅವರಿಗೆ ಬ್ಯಾಗ್ ಸಿಕ್ಕಿದ್ದು, ಅದರಲ್ಲಿದ್ದ ಅಮೂಲ್ಯ ಚಿನ್ನದ ಸರವನ್ನು ವಾರಸುದಾರರಿಗೆ ಮರಳಿಸಿದ್ದಾರೆ.
ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಸಿಕ್ಕರೂ ಅದನ್ನು ತಮ್ಮ ಬಳಿ ಇಟ್ಟುಕೊಳ್ಳದೆ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಬಸವರಾಜ್ ಪ್ರಾಮಾಣಿಕತೆ ಮತ್ತು ಮಾನವೀಯತೆಗೆ ಮಾದರಿಯಾಗಿದ್ದಾರೆ. ಅಮೂಲ್ಯ ಚಿನ್ನಕ್ಕಿಂತ ಅಮೂಲ್ಯವಾದ ಪ್ರಾಮಾಣಿಕತೆ ತೋರಿದ ಬಸವರಾಜ್ ಅವರ ನಡೆ ಇದೀಗ ಮೆಚ್ಚುಗೆಗೆ ಪಾತ್ರವಾಗಿದೆ.
An auto-rickshaw driver’s honesty and presence of mind helped return a valuable 48-gram gold chain to its owner after it was accidentally left behind in the vehicle.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 12:06 pm
HK News Staffer
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm