ಬ್ರೇಕಿಂಗ್ ನ್ಯೂಸ್
08-10-26 04:30 pm HK News Staffer ಕರಾವಳಿ
ಉಡುಪಿ, ಅ 08: ಬಹುಭಾಷಾ ನಟ ನಾನಾ ಪಾಟೇಕರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಚಿತ್ರರಂಗ ಸೇರಿದಂತೆ ಅಪಾರ ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ನಟನೆಯ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಅವರು, ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮುಂಡೂರಿನೊಂದಿಗೆ ವಿಶೇಷ ನಂಟು ಹೊಂದಿದ್ದರು.
ಮುಂಬೈಯಲ್ಲಿ ಉದ್ಯಮಿಯಾಗಿರುವ ಮುಂಡೂರಿನ ಸುಧಾಕರ ಶೆಟ್ಟಿ ಅವರೊಂದಿಗೆ ನಾನಾ ಪಾಟೇಕರ್ ಆತ್ಮೀಯ ಬಾಂಧವ್ಯ ಹೊಂದಿದ್ದರು. ಈ ಸ್ನೇಹದ ಹಿನ್ನೆಲೆಯಲ್ಲಿ ಅವರು ಮುಂಡೂರಿಗೆ ಹತ್ತಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದರು ಎಂದು ಸ್ಥಳೀಯರು ಸ್ಮರಿಸುತ್ತಾರೆ.

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ನಾನಾ ಪಾಟೇಕರ್ ನೆರವು ನೀಡಿದ್ದರು. ಅಲ್ಲದೆ, ದೇವಸ್ಥಾನದಲ್ಲಿ ಅವರ ಹೆಸರಿನ ಸಭಾಂಗಣವನ್ನೂ ನಿರ್ಮಿಸಿಕೊಟ್ಟಿದ್ದರು ಎಂದು ಸ್ಥಳೀಯರು ನೆನಪಿಸಿಕೊಳ್ಳುತ್ತಾರೆ.
ಇಷ್ಟೇ ಅಲ್ಲದೆ, ಮುಂಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೂ ನೆರವು ನೀಡಿದ್ದ ಅವರು, ಕಂಪ್ಯೂಟರ್ ಕೊಠಡಿ ಹಾಗೂ ಕಂಪ್ಯೂಟರ್ಗಳನ್ನು ಕೊಡುಗೆಯಾಗಿ ನೀಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
‘ಉದಯ್ ಶೆಟ್ಟಿ’ ಪಾತ್ರಕ್ಕೂ ಮುಂಡೂರು ನಂಟು!
2007ರಲ್ಲಿ ಬಿಡುಗಡೆಯಾದ ಹಿಂದಿಯ ‘ವೆಲ್ಕಮ್’ ಸಿನಿಮಾದಲ್ಲಿ ನಾನಾ ಪಾಟೇಕರ್ ಅವರು ‘ಉದಯ್ ಶೆಟ್ಟಿ’ ಎಂಬ ಭೂಗತ ಪಾತಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಪಾತ್ರದ ಹೆಸರು ಕನ್ನಡದ್ದಾಗಿರುವುದು ವಿಶೇಷ.
ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ನಾನಾ ಪಾಟೇಕರ್ ತುಳು ಭಾಷೆಯಲ್ಲಿ ಮಾತನಾಡಿ ಅಭಿಮಾನಿಗಳನ್ನು ರಂಜಿಸಿದ್ದರು. ಇದೇ ಸಂದರ್ಭದಲ್ಲಿ ‘ವೆಲ್ಕಮ್’ ಸಿನಿಮಾದ ‘ಉದಯ್ ಶೆಟ್ಟಿ’ ಪಾತ್ರಕ್ಕೆ ಬೇಕಾದ ವಿಶಿಷ್ಟ ಧ್ವನಿ ಏರಿಳಿತ ಮತ್ತು ಶೈಲಿಯನ್ನು ಮಂಗಳೂರಿನ ತಮ್ಮ ಶೆಟ್ಟಿ ಸ್ನೇಹಿತರಿಂದಲೇ ಕಲಿತಿದ್ದಾಗಿ ಹೇಳಿಕೊಂಡಿದ್ದರು.
ತಮ್ಮ ಆಪ್ತ ಗೆಳೆಯರಾದ ಪ್ರಕಾಶ್ ರಾಜ್ ಹಾಗೂ ಸುಧಾಕರ ಶೆಟ್ಟಿ ಅವರ ಸಹಕಾರವನ್ನು ಕೂಡ ಅವರು ಸ್ಮರಿಸಿದ್ದರು.
ಕಾರ್ಯಕ್ರಮದಲ್ಲಿ ತುಳುವಿನಲ್ಲಿ ಮಾತನಾಡಿ ನೆರೆದಿದ್ದವರನ್ನು ರಂಜಿಸಿದ್ದ ನಾನಾ ಪಾಟೇಕರ್, ಪ್ರತಿಯೊಂದು ಭಾಷೆಯನ್ನೂ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪ್ರತಿಪಾದಿಸಿದ್ದರು.
ನಟನೆಯ ಮೂಲಕ ದೇಶದಾದ್ಯಂತ ಅಭಿಮಾನಿಗಳನ್ನು ಸಂಪಾದಿಸಿದ್ದ ನಾನಾ ಪಾಟೇಕರ್, ಮುಂಡೂರಿನೊಂದಿಗೆ ಬೆಸೆದುಕೊಂಡಿದ್ದ ಈ ಆತ್ಮೀಯ ನಂಟು ಮತ್ತು ಅವರ ಸಾಮಾಜಿಕ ಸೇವೆಗಳನ್ನು ಸ್ಥಳೀಯರು ಇದೀಗ ಭಾವುಕತೆಯಿಂದ ಸ್ಮರಿಸುತ್ತಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm