ಬ್ರೇಕಿಂಗ್ ನ್ಯೂಸ್
10-10-26 05:09 pm HK News Staffer ಕರಾವಳಿ
ಉಳ್ಳಾಲ, ಅ.10: ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಶಂಖತೀರ್ಥ ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ (KKPL) ಸೀಸನ್–1ರ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಸಾಯಿಪ್ರಸಾದ್ ಅವರು ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಚೊಚ್ಚಲ ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಅತಿ ಹೆಚ್ಚಿನ ಬಿಡ್ಗೆ ಆಯ್ಕೆಯಾಗಿದ್ದ ಸಾಯಿಪ್ರಸಾದ್ ಅವರು ಉತ್ತರ ಕನ್ನಡ ಸ್ಟಾಲಿಯನ್ಸ್ ತಂಡದ ಪರವಾಗಿ ಕಣಕ್ಕಿಳಿದಿದ್ದರು. ಪಂದ್ಯಾವಳಿಯಲ್ಲಿ ಎಂಟು ಜಿಲ್ಲೆಯ ಪ್ರಾಂಚೈಸಿ ತಂಡಗಳು ಭಾಗವಹಿಸಿದ್ದವು. ಹೊಯ್ಸಳ ಅಂಪಾಯರ್ ಹಾಸನ V/S ಮಂಗಳೂರು ಇಂಡಿಯನ್ಸ್ ಹಾಗೂ ಮೈಸೂರು ಮಹಾಸೇನೆ V/S ಉತ್ತರ ಕನ್ನಡ ಸ್ಟಾಲಿಯನ್ಸ್ ತಂಡಗಳು ಸೆಮಿಫೈನಲ್ ಪಂದ್ಯಗಳಲ್ಲಿ ಪರಸ್ಪರ ಸೆಣಸಾಡಿದ್ದವು.


ಗುರುವಾರ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಉತ್ತರ ಕನ್ನಡ ಸ್ಟಾಲಿಯನ್ಸ್ ತಂಡವು ಮಂಗಳೂರು ಇಂಡಿಯನ್ಸ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಸಾಯಿ ಪ್ರಸಾದ್ ಅವರು ಮಹತ್ವದ ಪಾತ್ರ ವಹಿಸಿದ್ದಲ್ಲದೆ, ಪಂದ್ಯಾವಳಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ‘ಬೆಸ್ಟ್ ಪ್ಲೇಯರ್’ (ಶ್ರೇಷ್ಠ ಆಟಗಾರ) ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಾಯಿಪ್ರಸಾದ್ ಅವರು ಮಾಜಿ ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಗೋಪಿನಾಥ್ ಕಾಪಿಕಾಡು ಅವರ ಸುಪುತ್ರರಾಗಿದ್ದು ಕಾಪಿಕಾಡುವಿನ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿಯ ಆಟಗಾರರಾಗಿದ್ದಾರೆ. ಸಾಯಿಪ್ರಸಾದ್ ಅವರ ಸಾಧನೆಗೆ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿಯ ಅಧ್ಯಕ್ಷರಾದ ಎ.ಜೆ.ಶೇಖರ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
09-10-26 11:04 pm
HK staffer
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
10-10-26 05:09 pm
HK News Staffer
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm