ಬ್ರೇಕಿಂಗ್ ನ್ಯೂಸ್
14-10-26 02:00 pm HK News Staffer ಕರಾವಳಿ
ಉಡುಪಿ, ಅ.14: ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರ ಮುಂದಿನ ರಾಜಕೀಯ ನಡೆ ಕುರಿತು ಚರ್ಚೆ ತೀವ್ರಗೊಂಡಿದೆ. ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ದೀರ್ಘಕಾಲದಿಂದ ಗುರುತಿಸಿಕೊಂಡಿರುವ ರಘುಪತಿ ಭಟ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ನಡುವೆಯೇ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ. ಆದರೆ ಪಕ್ಷ ಸೇರ್ಪಡೆ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ. 2028ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸುವುದು ಖಚಿತ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿದೆ. ಈ ಬಗ್ಗೆ ಯೋಚಿಸುತ್ತಿದ್ದೇನೆ. ಆದರೆ, ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಸದ್ಯ ಬಿಜೆಪಿಯಲ್ಲೇ ಇದ್ದೇನೆ, ಬಿಟ್ಟು ಹೋಗಿಲ್ಲ. ಪಕ್ಷದಿಂದ ಕರೆ ಬಂದರೆ ಯೋಚನೆ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದಿದ್ದೇನೆ. ಬಿಜೆಪಿಯ ಯುವ ಮೋರ್ಚಾದ ಜಿಲ್ಲಾ ಘಟಕದಲ್ಲಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಹೀಗಿರುವಾಗ ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ನನ್ನ ಮನಸ್ಸಿಗೂ ಅದು ಒಪ್ಪುವುದಿಲ್ಲ. ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ನಿರಾಕರಿಸಿದರೂ, ಪಕ್ಷದ ನಿರ್ಧಾರಕ್ಕೆ ಬದ್ಧವಾಗಿ ಯಶಪಾಲ್ ಸುವರ್ಣ ಅವರ ಪರವಾಗಿ ಪ್ರಚಾರ ಮಾಡಿದ್ದೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಯಶಪಾಲ್ ಸುವರ್ಣ ಅವರ ಗೆಲುವಿಗೆ ತಮ್ಮ ಪರಿಶ್ರಮವೂ ಇದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯಶಪಾಲ್ ಸುವರ್ಣ ನಡೆದುಕೊಂಡ ರೀತಿಯಿಂದ ತಮಗೆ ನೋವಾಗಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಅವಕಾಶ ನೀಡುವುದಾಗಿ ಹೇಳಿ ಕೊನೆಗೆ ಟಿಕೆಟ್ ನೀಡದಿರುವುದೂ ಬೇಸರ ತಂದಿದೆ ಎಂದು ರಘುಪತಿ ಭಟ್ ಈ ಹಿಂದಿನ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದರು. ಪಕ್ಷದ ಹಿರಿಯರು ಮತ್ತು ಸಂಘದ ಪ್ರಮುಖರು ತಮ್ಮ ವಿಚಾರದಲ್ಲಿ ಮೌನವಾಗಿರುವುದೂ ಮಾನಸಿಕವಾಗಿ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ. ಕ್ಷೇತ್ರದ ಜನರು ತಮ್ಮನ್ನು ಸೋಲಿಸಿಲ್ಲ; ಪಕ್ಷವೇ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ ಎಂದು ಅವರು ಹೇಳಿದ್ದಾರೆ. ಆದರೆ, ಜನರ ಅಭಿಪ್ರಾಯಕ್ಕೆ ತಾನು ಮಹತ್ವ ನೀಡುತ್ತೇನೆ. ಚುನಾವಣೆಗೆ ಸ್ಪರ್ಧಿಸಬಾರದು ಎಂದು ಜನರೇ ಹೇಳಿದರೆ ರಾಜಕೀಯದಿಂದ ದೂರ ಉಳಿಯುತ್ತೇನೆ. ಜನರಿಗೆ ಸಹಾಯ ಮಾಡಲು ಜನಪ್ರತಿನಿಧಿ ಆಗಲೇಬೇಕೆಂದಿಲ್ಲ ಎಂದೂ ತಿಳಿಸಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm