ಬ್ರೇಕಿಂಗ್ ನ್ಯೂಸ್
15-10-26 12:19 pm HK News Staffer ಕರಾವಳಿ
ಮಂಗಳೂರು, ಅ.15: ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ, ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆಂಬ ಎಬಿವಿಪಿ ಮತ್ತು ಬಿಜೆಪಿ ನಾಯಕರ ಆಕ್ಷೇಪಕ್ಕೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ಭಾರತ್ ಮಾತೆಯ ರಕ್ಷಣೆಗಾಗಿ ಪಣ ತೊಡುತ್ತೇವೆ. ಹಾಗಂತ ದೇಶಪ್ರೇಮ, ಭಾರತ್ ಮಾತಾಕೀ ಜೈ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಕೆಲಸ ಮಾಡುವಂತಿಲ್ಲ. ಅದರ ನೆಪದಲ್ಲಿ ಶಾಂತಿ ಭಂಗವಾದರೆ ಕಾನೂನು ಕ್ರಮವನ್ನು ನಿರಾಕರಿಸುವಂತಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸುಧೀರ್ ರೆಡ್ಡಿ, ದೇಶದ ಪರ ಜೈಕಾರ ಹಾಕುವುದು, ಆಮೂಲಕ ತಪ್ಪನ್ನು ಮುಚ್ಚಿ ಹಾಕಲೆತ್ನಿಸಿ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಗೌರವ ಸಲ್ಲಿಸಿದಂತಾಗುವುದಿಲ್ಲ. ನಾವು ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನಿರಾಕರಿಸಿಲ್ಲ. ಬದಲಿಗೆ ಕೆಲವು ಷರತ್ತುಗಳನ್ನು ಹಾಕಿದ್ದಲ್ಲದೆ, ಸ್ಥಳದಲ್ಲಿ ಶಾಂತಿ ಕಾಪಾಡಲು ಸೂಚಿಸಿದ್ದೆವು. ಆದರೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಅವಕಾಶ ಕೇಳಿದ್ದೂ ಇಲ್ಲ, ಪೊಲೀಸರಿಗೆ ಮಾಹಿತಿ ನೀಡುವ ಕೆಲಸವನ್ನೂ ಮಾಡಿಲ್ಲ. ಆದರೂ ಅಲ್ಲಿನ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ. ಅವರಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿತ್ತು.
ಆದರೆ ಹೊರಗಿನಿಂದ ಬಂದವರು ಪ್ರತಿಭಟನೆಗೆ ಇಳಿದಾಗ, ಕಾಲೇಜು ಆಡಳಿತದಿಂದ ಈ ಬಗ್ಗೆ ದೂರು ಬಂದಾಗ ನಾವು ಸುಮ್ಮನಿರಲಾಗದು. ಆನಂತರ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತದೆ ಎಂದು ಅಲ್ಲಿದ್ದವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಅವರು ಈ ರೀತಿಯ ಕೃತ್ಯ ಮಾಡದಿರುವಂತೆ ಹೇಳಿ ಬಾಂಡ್ ಕೇಳಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಆಧರಿಸಿ, ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಆಗಬಾರದೆಂದು ಆ ರೀತಿಯ ಬಾಂಡ್ ಪಡೆದಿರಲಿಲ್ಲ. ಇತರೇ ವಿದ್ಯಾರ್ಥಿಗಳು ಮಧ್ಯಾಹ್ನ ನಂತರವೂ ಅಲ್ಲಿ ಪ್ರತಿಭಟನೆಗೆ ಮುಂದಾದರೂ, ಕಾಲೇಜು ಆಡಳಿತವು ವಿದ್ಯಾರ್ಥಿಗಳ ಬೇಡಿಕೆಯನ್ನು ಈಡೇರಿಸಿದ ಬಳಿಕ ನಾವು ವಶಕ್ಕೆ ಪಡೆದವರನ್ನು ಬಿಡುಗಡೆ ಮಾಡಿದ್ದೆವು. ಶಾಂತಿ ಕಾಪಾಡುವ ಕಾರಣಕ್ಕಷ್ಟೆ ಒಮ್ಮೆಗೆ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದು ಬಿಟ್ಟರೆ ಬೇರಾವುದೇ ಉದ್ದೇಶ ಇರಲಿಲ್ಲ ಎಂದು ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಅ,12ರಂದು ಆಗ್ನೆಸ್ ಕಾಲೇಜಿನಲ್ಲಿ ದಸರಾ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ್ದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಆನಂತರ, ಎಬಿವಿಪಿ ವಿದ್ಯಾರ್ಥಿಗಳೂ ಸ್ಥಳಕ್ಕೆ ತೆರಳಿ ಪ್ರತಿಭಟನೆಗೆ ಕೈಜೋಡಿಸಿದ್ದರು. ಘಟನೆ ಸಂದರ್ಭದಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದು ಕೈ ಮಾಡಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಭಾರತ್ ಮಾತಾ ಕೈ ಜೈ ಎಂದಿದ್ದಕ್ಕೆ ಎಸಿಪಿ ರವೀಶ್ ನಾಯ್ಕ್ ಕಪಾಳ ಮೋಕ್ಷ ಮಾಡಿದ್ದಾರೆ, ಅವರನ್ನು ಅಮಾನತು ಮಾಡಬೇಕೆಂಬ ಆಗ್ರಹ ಕೇಳಿಬಂದಿತ್ತು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm